2 ತಿಮೊಥೆಯನಿಗೆ 1:13 - ಕನ್ನಡ ಸತ್ಯವೇದವು J.V. (BSI)13 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ, ನನ್ನಿಂದ ಕೇಳಿದ ಸ್ವಸ್ಥಬೋಧನಾ ವಾಕ್ಯಗಳನ್ನು ಮಾದರಿಯಾಗಿಟ್ಟುಕೊಂಡು ಅನುಸರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕ್ರಿಸ್ತಯೇಸುವಿನಲ್ಲಿ ನಮ್ಮದಾಗಿರುವ ವಿಶ್ವಾಸ ಹಾಗೂ ಪ್ರೀತಿಯಲ್ಲಿ ನೀನು ನೆಲೆಗೊಂಡಿರು. ನಾನು ಬೋಧಿಸಿದ್ದನ್ನು ಆದರ್ಶವಾಗಿಟ್ಟುಕೊಂಡು ಅನುಸರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನನ್ನಿಂದ ಕೇಳಿರುವ ಸತ್ಯಬೋಧನೆಗಳನ್ನು ಅನುಸರಿಸು. ನೀನು ಏನನ್ನು ಉಪದೇಶ ಮಾಡಬೇಕೆಂಬುದಕ್ಕೆ ಆ ಬೋಧನೆಗಳೇ ನಿನಗೆ ದೃಷ್ಟಾಂತಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ನನ್ನಿಂದ ಕೇಳಿದ ಸ್ವಸ್ಥವಾಕ್ಯಗಳನ್ನು ಕ್ರಿಸ್ತ ಯೇಸುವಿನಲ್ಲಿರುವ ವಿಶ್ವಾಸ ಹಾಗೂ ಪ್ರೀತಿಯೊಂದಿಗೆ ಒಂದು ಮಾದರಿಯಾಗಿ ಹಿಡಿದುಕೋ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಜೆಜು ಕ್ರಿಸ್ತಾಚ್ಯಾ ವಾಂಗ್ಡಾ ಎಕ್ ಹೊವ್ನ್ ಹೊತ್ತ್ಯಾ ಅಮ್ಚ್ಯಾ ವಿಶ್ವಾಸಾತ್ ಅನಿ ಪ್ರೆಮಾತ್ ರ್‍ಹಾವ್ನ್ ಎಕ್ ಉದಾರನ್ ಹೊವ್ನ್ ಚಲುಸಾಟಿ ಮನುನ್ ಮಿಯಾ ತುಕಾ ಶಿಕ್ವಲ್ಲ್ಯಾ ಖರ್‍ಯಾ ಗೊಸ್ಟಿಯಾ ಮನಾತ್ ಘಟ್ ಥವ್ನ್ ಘೆ. ಅಧ್ಯಾಯವನ್ನು ನೋಡಿ |
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.