Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:14 - ಕನ್ನಡ ಸತ್ಯವೇದವು J.V. (BSI)

14 ನಿನ್ನ ವಶಕ್ಕೆ ಕೊಡಲ್ಪಟ್ಟಿರುವದನ್ನು ಶ್ರೇಷ್ಠವೆಂದು ತಿಳಿದು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿನ್ನ ವಶಕ್ಕೆ ಒಪ್ಪಿಸಿಕೊಟ್ಟಿರುವ ಒಳ್ಳೆಯ ವಿಷಯವನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮನ ಮೂಲಕವಾಗಿ ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ನಮ್ಮಲ್ಲಿ ವಾಸಿಸುವ ಪವಿತ್ರಾತ್ಮರ ಸಹಾಯದಿಂದ ಸುರಕ್ಷಿತವಾಗಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿನ್ನ ವಶಕ್ಕೆ ಕೊಟ್ಟಿರುವ ಸತ್ಯವನ್ನು ಪವಿತ್ರಾತ್ಮನ ಸಹಾಯದಿಂದ ಸಂರಕ್ಷಿಸು. ಆತನು ನಮ್ಮೊಳಗೆ ವಾಸ ಮಾಡುತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಿನಗೆ ಒಪ್ಪಿಸಲಾಗಿರುವ ಆ ಒಳ್ಳೆಯದನ್ನು ನಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮ ದೇವರ ಮೂಲಕ ನೀನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭುತ್ತುರ್ ವಸ್ತಿ ಕರ್‍ತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ತುಕಾ ದಿಲ್ಲ್ಯಾ ತವ್ಡ್ಯಾ ಬರ್‍ಯಾ ಗೊಸ್ಟಿಯಾ ಬರೆ ಕರುನ್ ಸಂಬಾಳ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:14
21 ತಿಳಿವುಗಳ ಹೋಲಿಕೆ  

ಆ ಸಹಾಯಕನು ಯಾರಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ ತಿಳಿಯದೆಯೂ ಇರುವದರಿಂದ ಆತನನ್ನು ಹೊಂದಲಾರದು. ನೀವು ಆತನನ್ನು ಬಲ್ಲಿರಿ; ಹೇಗಂದರೆ ನಿಮ್ಮ ಬಳಿಯಲ್ಲಿ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ನೀವು ಶರೀರಭಾವವನ್ನು ಅನುಸರಿಸಿ ಬದುಕಿದರೆ ಸಾಯುವದು ನಿಶ್ಚಯ; ನೀವು ಪವಿತ್ರಾತ್ಮನಿಂದ ದೇಹದ ದುರಭ್ಯಾಸಗಳನ್ನು ನಾಶ ಮಾಡುವದಾದರೆ ಜೀವಿಸುವಿರಿ.


ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನೀವು ದೇವರ ಆಲಯವಾಗಿದ್ದೀರೆಂದೂ ದೇವರ ಆತ್ಮನು ನಿಮ್ಮಲ್ಲಿ ವಾಸಮಾಡುತ್ತಾನೆಂದೂ ನಿಮಗೆ ಗೊತ್ತಿಲ್ಲವೋ?


ನೀವಾದರೋ, ನಿಮ್ಮಲ್ಲಿ ದೇವರ ಆತ್ಮನು ವಾಸವಾಗಿರುವದಾದರೆ ಶರೀರ ಭಾವಾಧೀನರಲ್ಲ, ದೇವರಾತ್ಮನಿಗೆ ಅಧೀನರಾಗಿದ್ದೀರಿ. ಯಾವನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವನಲ್ಲ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಪವಿತ್ರಾತ್ಮನನ್ನು ನಂದಿಸಬೇಡಿರಿ; ಪ್ರವಾದನೆಗಳನ್ನು ಹೀನೈಸಬೇಡಿರಿ;


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ಈ ಬೋಧೆ ಭಾಗ್ಯವಂತನಾದ ದೇವರ ಮಹಿಮೆಯನ್ನು ಪ್ರದರ್ಶಿಸುವ ಸುವಾರ್ತೆಗೆ ಅನುಸಾರವಾಗಿದೆ.


ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ.


ಆತನಲ್ಲಿ ನೀವು ಸಹ ಪವಿತ್ರಾತ್ಮನ ಮೂಲಕವಾಗಿ ದೇವರಿಗೆ ನಿವಾಸಸ್ಥಾನವಾಗುವದಕ್ಕಾಗಿ ನಮ್ಮ ಸಂಗಡ ಕಟ್ಟಲ್ಪಡುತ್ತಾ ಇದ್ದೀರಿ.


ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಬಹುಮಾನ ದೊರೆಯುವದು; ಮತ್ತೊಬ್ಬನ ಇಷ್ಟದಿಂದ ಮಾಡಿದರೆ ಮನೆವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿದೆ.


ಯೂಸ್ತನೆನಿಸಿಕೊಳ್ಳುವ ಯೇಸು ಸಹ ನಿಮಗೆ ವಂದನೆ ಹೇಳುತ್ತಾನೆ. ಸುನ್ನತಿಯವರೊಳಗೆ ಇವರು ಮಾತ್ರವೇ ದೇವರ ರಾಜ್ಯಾಭಿವೃದ್ಧಿಗಾಗಿ ನನ್ನ ಜೊತೆಗೆಲಸದವರಾಗಿದ್ದಾರೆ; ಇವರಿಂದ ನನಗೆ ಉಪಶಮನ ಉಂಟಾಯಿತು.


ಸುನ್ನತಿಯಾದವರಲ್ಲಿ ಅಪೊಸ್ತಲತನವನ್ನು ನಡಿಸುವದಕ್ಕೋಸ್ಕರ ಪೇತ್ರನನ್ನು ಪ್ರೇರಿಸಿದಾತನು ಅನ್ಯಜನರಲ್ಲಿ ಅದನ್ನು ನಡಿಸುವದಕ್ಕೆ ನನ್ನನ್ನೂ ಪ್ರೇರಿಸಿದ್ದನು.


ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಶರೀರಸಂಬಂಧವಾಗಿ ಅರಿತುಕೊಳ್ಳುವದಿಲ್ಲ; ಕ್ರಿಸ್ತನನ್ನು ಕೂಡ ನಾವು ಶರೀರಸಂಬಂಧವಾಗಿ ತಿಳಿದಿದ್ದರೂ ಇನ್ನು ಮುಂದೆ ಆತನನ್ನು ಹಾಗೆ ತಿಳುಕೊಳ್ಳುವದಿಲ್ಲ.


ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಗರ್ಭಗುಡಿಯಾಗಿದೆಂಬದು ನಿಮಗೆ ತಿಳಿಯದೋ?


ಯೇಸುವನ್ನು ಸತ್ತವರೊಳಗಿಂದ ಜೀವಿತನಾಗಿ ಎಬ್ಬಿಸಿದಾತನ ಆತ್ಮನು ನಿಮ್ಮಲ್ಲಿ ವಾಸವಾಗಿದ್ದರೆ ಕ್ರಿಸ್ತ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದಾತನು ನಿಮ್ಮಲ್ಲಿ ವಾಸವಾಗಿರುವ ತನ್ನ ಆತ್ಮನ ಮೂಲಕ ನಿಮ್ಮ ಮರ್ತ್ಯದೇಹಗಳನ್ನು ಸಹ ಬದುಕಿಸುವನು.


ಎಲ್ಲಾ ವಿಷಯಗಳಲ್ಲಿಯೂ ಬಹಳ ಉಂಟು. ಮೊದಲನೇದಾಗಿ ದೈವೋಕ್ತಿಗಳು ಅವರ ವಶಕ್ಕೆ ಒಪ್ಪಿಸಲ್ಪಟ್ಟವು.


ಹೀಗಿರುವದರಿಂದ ಅನ್ಯಾಯದ ಧನದ ವಿಷಯದಲ್ಲಿ ನೀವು ನಂಬಿಗಸ್ತರಲ್ಲದವರಾದರೆ ನಿಜವಾದ ಧನವನ್ನು ನಿಮ್ಮ ವಶಕ್ಕೆ ಯಾರು ಕೊಟ್ಟಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು