Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:16 - ಕನ್ನಡ ಸತ್ಯವೇದವು J.V. (BSI)

16 ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಒನೇಸಿಪೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ, ಅವನು ಹಲವುಬಾರಿ ನನ್ನನ್ನು ಉಪಚರಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಒನೇಸಿಫೊರನ ಕುಟುಂಬವನ್ನು ಪ್ರಭು ಆಶೀರ್ವದಿಸಲಿ. ಆತನು ಅನೇಕ ಸಾರಿ ನನ್ನನ್ನು ಆದರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪ್ರಭುವು ಒನೇಸಿಫ್ರೋರನ ಕುಟುಂಬಕ್ಕೆ ಕರುಣೆಯನ್ನು ತೋರಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಅವನು ಅನೇಕ ಸಂದರ್ಭಗಳಲ್ಲಿ ನನಗೆ ಸಹಾಯ ಮಾಡಿದ್ದಾನೆ. ನಾನು ಸೆರೆಮನೆಯಲ್ಲಿದ್ದರೂ ಅವನು ನಾಚಿಕೆಪಟ್ಟುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಒನೇಸಿಫೊರನ ಮನೆಯವರಿಗೆ ಕರ್ತ ಯೇಸು ಕರುಣೆಯನ್ನು ದಯಪಾಲಿಸಲಿ. ಏಕೆಂದರೆ ಅವನು ಅನೇಕಾವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಒನೆಸಿಪೊರಸಾಚ್ಯಾ ಕುಟ್ಮಾಕ್ ಧನಿ ದಯಾ ದಾಕ್ವುಂದಿ, ಕಶ್ಯಾಕ್ ಮಟ್ಲ್ಯಾರ್ ಲೈಂದಾ ತೆನಿ ಮಾಕಾ ಉಮ್ಮೆದಿನ್ ಭರ್‍ಲ್ಯಾನಾಯ್.ಅನಿ ಮಿಯಾ ಬಂಧಿಖಾನ್ಯಾತ್ ಹಾಂವ್ ಮನುನ್ ತೊ ಲಜುಕ್‍ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:16
27 ತಿಳಿವುಗಳ ಹೋಲಿಕೆ  

ಪ್ರಿಸ್ಕಳಿಗೂ ಅಕ್ವಿಲನಿಗೂ ಒನೆಸಿಫೊರನ ಮನೆಯವರಿಗೂ ವಂದನೆ ಹೇಳು.


ಹೌದು, ಸಹೋದರನೇ, ಕರ್ತನಲ್ಲಿ ನಿನ್ನಿಂದ ನನಗೆ ಪ್ರಯೋಜನವಾಗುವ ಹಾಗೆ ಮಾಡು; ಕ್ರಿಸ್ತನಲ್ಲಿ ನನ್ನ ಹೃದಯವನ್ನು ಸಂತೋಷಪಡಿಸು.


ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹ ಉಂಟಾದದರಿಂದ ನಿನ್ನ ಪ್ರೀತಿಯ ನಿವಿುತ್ತ ನನಗೆ ಬಹಳ ಸಂತೋಷವೂ ಆದರಣೆಯೂ ಉಂಟಾದವು.


ಆ ಸತ್ಯಾರ್ಥದ ನಿವಿುತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ, ಅದರ ವಿಷಯದಲ್ಲಿ ಧೈರ್ಯವಾಗಿ ಮಾತಾಡುವ ಹಂಗಿನಲ್ಲಿದ್ದೇನೆ; ಹಾಗೆಯೇ ನಾನು ಮಾತಾಡಬೇಕೆಂದು ನನಗೋಸ್ಕರ ಬೇಡಿಕೊಳ್ಳಿರಿ.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿವಿುತ್ತವಾಗಿ ಈ ಬೇಡಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.


ಬೇಡಿಗಳನ್ನು ಹಾಕಿಸಿಕೊಂಡವರ ಕಷ್ಟವನ್ನು ನೋಡಿ ಅವರ ಸಂಗಡ ನೀವು ದುಃಖ ಪಟ್ಟದ್ದಲ್ಲದೆ ನಮಗೆ ಉತ್ತಮವಾಗಿಯೂ ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟಿರಿ.


ನೀವು ದೇವಜನರಿಗೆ ಉಪಚಾರ ಮಾಡಿದಿರಿ, ಇನ್ನೂ ಮಾಡುತ್ತಾ ಇದ್ದೀರಿ. ಈ ಕೆಲಸವನ್ನೂ ಇದರಲ್ಲಿ ನೀವು ದೇವರ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯನ್ನೂ ಆತನು ಮರೆಯುವದಕ್ಕೆ ಅನ್ಯಾಯಸ್ಥನಲ್ಲ.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಅವರು ನನ್ನ ಆತ್ಮವನ್ನೂ ನಿಮ್ಮ ಆತ್ಮಗಳನ್ನೂ ಉಪಶಮನ ಮಾಡಿದರು. ಇಂಥವರನ್ನು ಸನ್ಮಾನಿಸಿರಿ.


ಕರುಣೆಯುಳ್ಳವರು ಧನ್ಯರು; ಅವರು ಕರುಣೆಹೊಂದುವರು.


ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.


ನೀನು ಕೃಪೆಯುಳ್ಳವನಿಗೆ ಕೃಪಾವಂತನೂ ದೋಷವಿಲ್ಲದವನಿಗೆ ನಿರ್ದೋಷಿಯೂ


ನೇವಿುತ ಕಾಲಗಳಲ್ಲಿ ಸಲ್ಲತಕ್ಕ ಕಾಷ್ಠದಾನದ ಮತ್ತು ಪ್ರಥಮ ಫಲದ ವಿಷಯವಾಗಿಯೂ ಕ್ರಮಗಳನ್ನು ಏರ್ಪಡಿಸಿದೆನು. ನನ್ನ ದೇವರೇ, ನನ್ನ ಹಿತಕ್ಕಾಗಿ ಇದನ್ನು ನೆನಪು ಮಾಡಿಕೋ.


ಆಮೇಲೆ ನಾನು ಲೇವಿಯರಿಗೆ - ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಲುಗಳನ್ನು ಕಾಯಬೇಕು ಎಂದು ಆಜ್ಞಾಪಿಸಿದೆನು. ನನ್ನ ದೇವರೇ ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿನ್ನ ಮಹಾಕೃಪೆಗನುಸಾರವಾಗಿ ನನ್ನನ್ನು ಕನಿಕರಿಸು.


ನನ್ನ ದೇವರೇ, ಇದನ್ನು ನನ್ನ ಹಿತಕ್ಕಾಗಿ ನೆನಪುಮಾಡಿಕೋ. ನಾನು ನನ್ನ ದೇವರ ಆಲಯದ ಮತ್ತು ಅದರ ಸೇವೆಯ ಸಂಬಂಧವಾಗಿ ಮಾಡಿದ ಭಕ್ತಿಕಾರ್ಯಗಳನ್ನು [ನಿನ್ನ ಪುಸ್ತಕದಿಂದ] ಅಳಿಸಿಬಿಡಬೇಡ.


ನನ್ನ ದೇವರೇ, ನಾನು ಆ ಜನರಿಗೋಸ್ಕರ ಮಾಡಿದ್ದೆಲ್ಲವನ್ನೂ ನನ್ನ ಹಿತಕ್ಕಾಗಿ ನೆನಪು ಮಾಡಿಕೋ.


ತಿರಿಗಿ ನಿಮ್ಮ ನಿಮ್ಮ ತೌರಮನೆಗೆ ಹೋಗಿರಿ; ನೀವು ನನ್ನನ್ನೂ ಮರಣಹೊಂದಿದ ನನ್ನ ಮಕ್ಕಳನ್ನೂ ಪ್ರೀತಿಸಿದಂತೆ ಯೆಹೋವನು ನಿಮ್ಮನ್ನು ಪ್ರೀತಿಸಿ ನಿಮಗೆ ಕೃಪೆಮಾಡಲಿ.


ಆತನ ಕೃಪಾಸತ್ಯತೆಗಳು ನಿಮ್ಮೊಂದಿಗಿರಲಿ; ಈ ಕಾರ್ಯಕ್ಕಾಗಿ ನಾನೂ ನಿಮಗೆ ಉಪಕಾರಮಾಡುವೆನು.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ನನ್ನ ಬೇಡಿಗಳಿಗೆ ನಾಚಿಕೆಪಡದೆ ರೋಮಾಪುರಕ್ಕೆ ಬಂದ ಕೂಡಲೆ ಬಹು ವಿಚಾರಣೆಯಿಂದ ನನ್ನನ್ನು ಹುಡುಕಿ ಕಂಡುಕೊಂಡನು.


ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವದಿಲ್ಲ.


ಹಾಗೆಯೇ ಎರಡು ತಲಾಂತು ಹೊಂದಿದವನು ಇನ್ನೂ ಎರಡು ಸಂಪಾದಿಸಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು