Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:2 - ಕನ್ನಡ ಸತ್ಯವೇದವು J.V. (BSI)

2 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವುದೇನಂದರೆ, ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತಯೇಸುವಿನಿಂದಲೂ ನಿನಗೆ ಕೃಪೆಯೂ, ಕರುಣೆಯೂ, ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ತಿಮೊಥೆಯನೇ, ನೀನು ನನಗೆ ಪ್ರಿಯ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಲಭಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತಿಮೊತಿಕ್ ಮಾಜ್ಯಾ ಪ್ರಿತಿಚ್ಯಾ ಲೆಕಾಕ್ ಲಿವ್ತಲೆ. ದೆವ್ ಬಾಪ್ ಅನಿ ಅಮ್ಚೊ ಧನಿ ಕ್ರಿಸ್ತ್ ಜೆಜು ತುಕಾ ಕುರ್ಪಾ ದಯಾ ಅನಿ ಶಾಂತಿ ದಿಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:2
10 ತಿಳಿವುಗಳ ಹೋಲಿಕೆ  

ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಆಮೇಲೆ ಅವನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.


ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಈ ನಿವಿುತ್ತದಿಂದ ಕರ್ತನಲ್ಲಿ ನನ್ನ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನೂ ನಂಬಿಗಸ್ತನೂ ಆಗಿದ್ದಾನೆ. ಅವನು ಕ್ರಿಸ್ತನ ಸೇವೆಯಲ್ಲಿರುವ ನನ್ನ ನಡಾವಳಿಯನ್ನು ಅಂದರೆ ನಾನು ಎಲ್ಲೆಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವ ಕ್ರಮವನ್ನು ನಿಮ್ಮ ನೆನಪಿಗೆ ತರುವನು.


ನನ್ನ ಮಕ್ಕಳು ಸತ್ಯವನ್ನನುಸರಿಸಿ ನಡೆಯುವವರಾಗಿದ್ದಾರೆಂದು ಕೇಳುವದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು