Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:3 - ಕನ್ನಡ ಸತ್ಯವೇದವು J.V. (BSI)

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ ಒಳ್ಳೇ ಮನಸ್ಸಾಕ್ಷಿಯುಳ್ಳವನಾಗಿ ಆರಾಧಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರ ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಿಸಿಕೊಳ್ಳುತ್ತೇನೆ. ಇದಲ್ಲದೆ ನಾನು ಪೂರ್ವಿಕರ ಭಕ್ತಿಮಾರ್ಗವನ್ನೇ ಅನುಸರಿಸಿ. ಶುದ್ಧ ಮನಸ್ಸಾಕ್ಷಿಯಿಂದ ಸೇವಿಸುವ ದೇವರಿಗೆ ನಿನ್ನ ವಿಷಯವಾಗಿ ಸ್ತೋತ್ರಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ತಪ್ಪದೆ ನಿನ್ನನ್ನು ಜ್ಞಾಪಿಸಿಕೊಂಡು ನಿನ್ನ ವಿಷಯದಲ್ಲಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸುತ್ತೇನೆ. ನನ್ನ ಪೂರ್ವಿಕರು ಸೇವೆ ಸಲ್ಲಿಸಿದ್ದು ಆತನಿಗೇ. ಯೋಗ್ಯವಾದದ್ದೆಂದು ನನಗೆ ತಿಳಿದಿರುವುದನ್ನೇ ಮಾಡುತ್ತಾ ಆತನ ಸೇವೆ ಮಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಮಿಯಾ ಅಮ್ಚ್ಯಾ ವಾಡ್ವಡ್ಲಾನಿ ಕರಲ್ಲ್ಯಾ ಸರ್ಕೆ ಪವಿತ್ರ್ ಮನಾನಿ ಸೆವಾ ಕರ್‍ತಲ್ಯಾ ದೆವಾಕ್ ಧನ್ಯವಾದ್ ದಿತಾ. ದಿಸ್-ರಾತ್ ಮಾಜ್ಯಾ ಮಾಗ್ನಿತ್ ಮಿಯಾ ತುಕಾ ತಿಮೊತಿ ಯಾದ್ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:3
21 ತಿಳಿವುಗಳ ಹೋಲಿಕೆ  

ಯೇಸು ಕ್ರಿಸ್ತನು ನಿನ್ನೆ ಇದ್ದ ಹಾಗೆ ಈಹೊತ್ತೂ ಇದ್ದಾನೆ, ನಿರಂತರವೂ ಹಾಗೆಯೇ ಇರುವನು.


ಆಗ ಪೌಲನು ಹಿರೀಸಭೆಯನ್ನು ದೃಷ್ಟಿಸಿ ನೋಡಿ - ಸಹೋದರರೇ, ನಾನು ಈ ದಿನದವರೆಗೂ ಒಳ್ಳೇ ಮನಸ್ಸಾಕ್ಷಿಯಿಂದ ದೇವರ ಮುಂದೆ ನಡೆದುಕೊಂಡಿದ್ದೇನೆ ಅಂದನು.


ಒಂದನ್ನು ಮಾತ್ರ ನಿನ್ನ ಮುಂದೆ ಒಪ್ಪಿಕೊಳ್ಳುತ್ತೇನೆ. ಅದೇನಂದರೆ - ಇವರು ಪಾಷಂಡಮತವೆಂದು ಹೇಳುವ ಮಾರ್ಗಕ್ಕನುಸಾರವಾಗಿ ನಾನು ನಮ್ಮ ಪಿತೃಗಳ ದೇವರನ್ನು ಸೇವಿಸುವವನಾಗಿದ್ದೇನೆ. ಧರ್ಮಶಾಸ್ತ್ರಕ್ಕನುಗುಣವಾಗಿರುವ ಮತ್ತು ಪ್ರವಾದಿಗಳ ಗ್ರಂಥಗಳಲ್ಲಿ ಬರೆದಿರುವ ಎಲ್ಲಾ ವಿಷಯಗಳನ್ನು ನಂಬುತ್ತೇನೆ.


ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಬಿಡದೆ ಹಿಡುಕೋ. ಕೆಲವರು ಮನಸ್ಸಿನ ಒಳ್ಳೇ ಸಾಕ್ಷಿಯನ್ನು ತಳ್ಳಿಬಿಟ್ಟು ಕ್ರಿಸ್ತ ನಂಬಿಕೆಯ ವಿಷಯದಲ್ಲಿ ಹಡಗು ಒಡೆದು ನಷ್ಟಪಟ್ಟವರಂತೆ ಇದ್ದಾರೆ; ಹುಮೆನಾಯನೂ ಅಲೆಕ್ಸಾಂದರನೂ ಇಂಥವರೇ;


ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ ನಮ್ಮ ಪಿತೃಗಳ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಿತನಾದೆನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ ನಾನು ಅಭಿಮಾನಿಯಾಗಿದ್ದೆನು.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು; ಹಾಗೆಯೇ ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.


ನಿಮ್ಮ ಮುಖವನ್ನು ನೋಡುವದಕ್ಕೂ ನಿಮ್ಮ ನಂಬಿಕೆಯ ಕೊರತೆಗಳನ್ನು ನೀಗುವದಕ್ಕೂ ನಮಗೆ ಅನುಕೂಲವಾಗಬೇಕೆಂದು ನಾವು ಹಗಲಿರುಳು ದೇವರನ್ನು ಅತ್ಯಂತವಾಗಿ ಬೇಡುವವರಾಗಿದ್ದೇವೆ.


ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ನಾವು ಕೇವಲ ಮಾನುಷಜ್ಞಾನವನ್ನು ಬಳಸದೆ ದೇವರ ಕೃಪೆಯನ್ನು ಆಶ್ರಯಿಸಿ ಆತನಿಂದಾಗುವ ಪವಿತ್ರತ್ವವೂ ನಿಷ್ಕಪಟತ್ವವೂ ಉಳ್ಳವರಾಗಿ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸು ನಮಗೆ ಸಾಕ್ಷಿ ಹೇಳುತ್ತದೆ;


ನನಗೆ ಮಹಾದುಃಖವೂ ನನ್ನ ಹೃದಯದಲ್ಲಿ ಎಡೆಬಿಡದೆ ವೇದನೆಯೂ ಉಂಟು.


ನಾನು ಯಾರವನಾಗಿದ್ದೇನೋ ಯಾರನ್ನು ಸೇವಿಸುತ್ತೇನೋ ಆ ದೇವರಿಂದ ಬಂದ ಒಬ್ಬ ದೂತನು ಕಳೆದ ರಾತ್ರಿಯಲ್ಲಿ ನನ್ನ ಹತ್ತಿರ ನಿಂತು -


ನಾನು ಮೊದಲಿಂದಲೂ ಯೆರೂಸಲೇವಿುನಲ್ಲಿ ನನ್ನ ದೇಶದ ಜನರೊಳಗಿದ್ದುಕೊಂಡು ಬಾಲ್ಯದಿಂದ ಬದುಕಿದ ಬಗೆಯು ಎಲ್ಲಾ ಯೆಹೂದ್ಯರಿಗೆ ತಿಳಿದೇ ಅದೆ;


ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.


ನಾನಾದರೋ ನಿಮಗೋಸ್ಕರವಾಗಿ ಯೆಹೋವನನ್ನು ಪ್ರಾರ್ಥಿಸುತ್ತಾ ಆತನ ಉತ್ತಮ ನೀತಿಮಾರ್ಗವನ್ನು ನಿಮಗೆ ತೋರಿಸಿಕೊಡುವದನ್ನು ಬಿಡುವದೇ ಇಲ್ಲ; ಬಿಟ್ಟರೆ ಆತನ ದೃಷ್ಟಿಯಲ್ಲಿ ಪಾಪಿಯಾಗಿರುವೆನು.


ದಿಕ್ಕಿಲ್ಲದೆ ಒಬ್ಬೊಂಟಿಗಳಾಗಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲಿರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು