Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 1:7 - ಕನ್ನಡ ಸತ್ಯವೇದವು J.V. (BSI)

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರು ನಮಗೆ ಪ್ರದಾನಮಾಡಿರುವ ಪವಿತ್ರಾತ್ಮ ನಮ್ಮನ್ನು ಹೇಡಿಗಳನ್ನಾಗಿ ಮಾಡುವುದಿಲ್ಲ; ನಮ್ಮಲ್ಲಿ ದೈವೀಶಕ್ತಿ, ಪ್ರೀತಿ ಹಾಗೂ ಸಂಯಮಗಳು ಪ್ರವರ್ಧಿಸುವಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ನಮಗೆ ಕೊಟ್ಟದ್ದು ನಮ್ಮನ್ನು ಹೇಡಿಗಳನ್ನಾಗಿ ಮಾಡುವ ಆತ್ಮವನ್ನಲ್ಲ. ನಮ್ಮನ್ನು ಬಲದಿಂದ, ಪ್ರೀತಿಯಿಂದ ಮತ್ತು ಸ್ವಶಿಕ್ಷಣದಿಂದ ತುಂಬಿಸುವ ಆತ್ಮವನ್ನು ಆತನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಕಶ್ಯಾಕ್ ಮಟ್ಲ್ಯಾರ್, ದೆವಾನ್ ಅಮ್ಕಾ ಭಿಂವ್ಕುರೊ ಆತ್ಮೊ ದಿವ್ಕ್ ನಾ; ತೆಚ್ಯಾ ಬದ್ಲಾಕ್, ತೆಚೊ ಆತ್ಮೊ ಆಮ್ಕಾ ತಾಕ್ತಿನ್, ಪ್ರೆಮಾನ್ ಅನಿ ಅಮ್ಕಾಚ್ ಅಮಿ ಸಂಬಾಳ್ತಲ್ಯಾ ತಾಕ್ತಿನ್ ಭರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 1:7
28 ತಿಳಿವುಗಳ ಹೋಲಿಕೆ  

ನೀವು ತಿರಿಗಿ ಭಯದಲ್ಲಿ ಬೀಳುವ ಹಾಗೆ ದಾಸನ ಭಾವವನ್ನು ಹೊಂದಿದವರಲ್ಲ, ಮಗನ ಭಾವವನ್ನು ಹೊಂದಿದವರಾಗಿದ್ದೀರಿ. ಈ ಭಾವದಿಂದ ನಾವು ದೇವರನ್ನು ಅಪ್ಪಾ, ತಂದೆಯೇ, ಎಂದು ಕೂಗುತ್ತೇವೆ.


ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ.


ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ - ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ದಯೆ ಉಪಕಾರ ನಂಬಿಕೆ ಸಾಧುತ್ವ ಶಮೆದಮೆ ಇಂಥವುಗಳೇ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ.


ಆದರೆ ಪವಿತ್ರಾತ್ಮ ನಿಮ್ಮ ಮೇಲೆ ಬರಲು ನೀವು ಬಲವನ್ನು ಹೊಂದಿ ಯೆರೂಸಲೇವಿುನಲ್ಲಿಯೂ ಎಲ್ಲಾ ಯೂದಾಯ ಸಮಾರ್ಯ ಸೀಮೆಗಳಲ್ಲಿಯೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರಬೇಕು ಅಂದನು.


ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು - ಪರಾಕ್ರಮದಿಂದಲ್ಲ, ಬಲದಿಂದಲ್ಲ, ನನ್ನ ಆತ್ಮದಿಂದಲೇ ಎಂಬದು ಸೇನಾಧೀಶ್ವರ ಯೆಹೋವನ ನುಡಿ


ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು


ಸದ್ಯೋಚನೆಯೂ ಸುಜ್ಞಾನವೂ ಸಾಮರ್ಥ್ಯವೂ ನನ್ನಲ್ಲಿವೆ; ವಿವೇಕವು ನಾನೇ.


ಈ ನಿರೀಕ್ಷೆಯು ನಮ್ಮ ಆಶೆಯನ್ನು ಭಂಗಪಡಿಸುವದಿಲ್ಲ; ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿರಸವು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆಯಲ್ಲಾ.


ಮರಣಭಯದ ದೆಸೆಯಿಂದ ತಮ್ಮ ಜೀವಮಾನದಲ್ಲೆಲ್ಲಾ ದಾಸತ್ವದೊಳಗಿದ್ದವರನ್ನು ಬಿಡಿಸುವದಕ್ಕೂ ಅವರಂತೆ ರಕ್ತಮಾಂಸಧಾರಿಯಾದನು.


ಆದರೆ ಪ್ರಾಣವನ್ನು ಉಳಿಸಿಕೊಳ್ಳುವದೇ ವಿಶೇಷವೆಂದು ನಾನು ಎಣಿಸುವದಿಲ್ಲ. ದೇವರ ಕೃಪೆಯ ವಿಷಯವಾದ ಸುವಾರ್ತೆಯನ್ನು ಆಸಕ್ತಿಯಿಂದ ಪ್ರಕಟಿಸಬೇಕೆಂಬದಾಗಿ ಕರ್ತನಾದ ಯೇಸುವಿನಿಂದ ನಾನು ಹೊಂದಿರುವ ಸೇವೆಯೆಂಬ ಓಟವನ್ನು ಕಡೆಗಾಣಿಸುವದೊಂದೇ ನನ್ನ ಅಪೇಕ್ಷೆ.


ನಿಮ್ಮ ನಂಬಿಕೆಯು ಮಾನುಷಜ್ಞಾನವನ್ನು ಆಧಾರಮಾಡಿಕೊಳ್ಳದೆ ದೇವರ ಶಕ್ತಿಯನ್ನು ಆಧಾರಮಾಡಿಕೊಂಡಿರಬೇಕೆಂದು ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಜ್ಞಾನವಾಕ್ಯಗಳನ್ನು ನಾನು ಪ್ರಯೋಗಿಸದೆ ದೇವರಾತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು.


ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ನನ್ನ ಮನಸ್ಸು ನಿನ್ನ ನಿಬಂಧನೆಗಳಲ್ಲಿ ಆಸಕ್ತವಾಗಲಿ; ಆಗ ನನ್ನ ಆಶಾಭಂಗಕ್ಕೆ ಕಾರಣವಿರುವದಿಲ್ಲ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಹೃದಯಪೂರ್ವಕವಾಗಿಯೂ ಯಥಾರ್ಥವಾಗಿಯೂ ಪ್ರೀತಿಸಿರಿ.


ಅದಕ್ಕೆ ಪೌಲನು - ನೀವು ಅತ್ತತ್ತು ಯಾಕೆ ನನ್ನನ್ನು ಎದೆ ಒಡಿಸುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿವಿುತ್ತವಾಗಿ ಯೆರೂಸಲೇವಿುನಲ್ಲಿ ಬೇಡೀಹಾಕಿಸಿಕೊಳ್ಳುವದಕ್ಕೆ ಮಾತ್ರವಲ್ಲದೆ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅಂದನು.


ಪವಿತ್ರಾತ್ಮಪ್ರೇರಿತವಾದ ನಿಮ್ಮ ಪ್ರೀತಿಯ ವಿಷಯದಲ್ಲಿ ನನಗೆ ತಿಳಿಸಿದವನು ಅವನೇ.


ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು.


ಆದರೆ ಸೌಲನು ಇನ್ನೂ ಅಧಿಕ ಸಾಮರ್ಥ್ಯವುಳ್ಳವನಾಗಿ ಯೇಸುವೇ ಕ್ರಿಸ್ತನೆಂದು ಸಿದ್ಧಾಂತಪಡಿಸಿ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರಾಗ ಮಾಡಿದನು.


ಜನರು ನಡೆದ ಸಂಗತಿಯನ್ನು ನೋಡುವದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದು ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಗಳನ್ನು ಹಾಕಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕೂತಿರುವದನ್ನು ಕಂಡು ಹೆದರಿದರು.


ಅದಕ್ಕೆ ಪೌಲನು - ಶ್ರೀಮನ್ ಮಹಾ ಫೆಸ್ತನೇ, ನಾನು ಮರುಳಾಗಿಲ್ಲ; ಸ್ವಸ್ಥಬುದ್ಧಿಯುಳ್ಳವನಾಗಿ ಸತ್ಯವಾದ ಮಾತುಗಳನ್ನಾಡುತ್ತೇನೆ.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಎಲ್ಲಾ ಸಭಾಮಂದಿರಗಳಲ್ಲಿಯೂ ನಾನು ಅನೇಕಾವರ್ತಿ ಅವರನ್ನು ದಂಡಿಸಿ ಅವರಿಂದ ದೂಷಣೆಯ ಮಾತುಗಳನ್ನಾಡಿಸುವದಕ್ಕೆ ಪ್ರಯತ್ನಿಸಿದೆನು. ಇದಲ್ಲದೆ ಅವರ ಮೇಲೆ ಬಹು ಕೋಪಾವೇಶವುಳ್ಳವನಾಗಿ ಪರಪಟ್ಟಣಗಳ ತನಕ ಅವರನ್ನು ಹಿಂಸೆಪಡಿಸಿದೆನು.


ಆ ಅಂಕುರದ ಮೇಲೆ ಜ್ಞಾನವಿವೇಕದಾಯಕ ಆತ್ಮ, ಆಲೋಚನಪರಾಕ್ರಮಗಳನ್ನು ಹುಟ್ಟಿಸುವ ಆತ್ಮ, ತಿಳುವಳಿಕೆಯನ್ನೂ ಯೆಹೋವನ ಭಯವನ್ನೂ ಉಂಟುಮಾಡುವ ಆತ್ಮ, ಅಂತು ಯೆಹೋವನ ಆತ್ಮವೇ ನೆಲೆಗೊಂಡಿರುವದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು