Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:1 - ಕನ್ನಡ ಸತ್ಯವೇದವು J.V. (BSI)

1 ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಿಯ ಪುತ್ರನೇ, ಕ್ರಿಸ್ತಯೇಸುವಿನಲ್ಲಿರುವವರಿಗೆ ಲಭಿಸುವ ಅನುಗ್ರಹದಲ್ಲಿ ನೀನು ದೃಢನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕ್ರಿಸ್ತ ಯೇಸುವಿನ ನಿಷ್ಠಾವಂತ ಸೈನಿಕನಾಗಿರುವ ತಿಮೊಥೆಯನೇ, ನೀನು ನನಗೆ ಮಗನಂತಿರುವೆ. ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲ ಹೊಂದಿದವನಾಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತುಜ್ಯಾ ವಿಶಯಾತ್ ಸಾಂಗುಚೆ ಹೊಲ್ಯಾರ್, ಮಾಜ್ಯಾ ಲೆಕಾ ತಿಮೊತಿ, ಕ್ರಿಸ್ತಾ ಜೆಜುಚ್ಯಾ ಎಕ್ವಟ್ಟಾತ್ ಅಮ್ಚಿ ಮನುನ್ ಹೊತ್ತ್ಯಾ ಕುರ್ಪೆಚ್ಯಾ ಮಜತಿನ್ ತಿಯಾ ಘಟ್‍ಮುಟ್ ಹೊವ್ನ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:1
14 ತಿಳಿವುಗಳ ಹೋಲಿಕೆ  

ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ.


ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಶಿಕ್ಷಣಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.


ನನ್ನನ್ನು ಬಲಪಡಿಸುವಾತನಲ್ಲಿದ್ದು ಕೊಂಡು ಎಲ್ಲಕ್ಕೂ ಶಕ್ತನಾಗಿದ್ದೇನೆ.


ಎಚ್ಚರವಾಗಿರಿ, ಕ್ರಿಸ್ತನಂಬಿಕೆಯಲ್ಲಿ ದೃಢವಾಗಿ ನಿಲ್ಲಿರಿ.


ನೀವು ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಅಭಿವೃದ್ಧಿಯನ್ನು ಹೊಂದುತ್ತಾ ಇರ್ರಿ. ಆತನಿಗೆ ಈಗಲೂ ಸದಾಕಾಲವೂ ಸ್ತೋತ್ರ. ಆಮೆನ್.


ಯೆಹೋವನು ಇಂತೆನ್ನುತ್ತಾನೆ - ಜೆರುಬ್ಬಾಬೆಲನೇ, ಈಗ ಧೈರ್ಯವಾಗಿರು; ಯೆಹೋಚಾದಾಕನಿಗೆ ಹುಟ್ಟಿದ ಮಹಾಯಾಜಕನಾದ ಯೆಹೋಶುವನೇ, ಧೈರ್ಯವಾಗಿರು; ದೇಶೀಯರೇ, ನೀವೆಲ್ಲರೂ ಧೈರ್ಯಗೊಂಡು ಕೆಲಸ ನಡಿಸಿರಿ; ಇದು ಯೆಹೋವನ ನುಡಿ; ನಾನು ನಿಮ್ಮೊಂದಿಗೆ ಇದ್ದೇನೆಂದು ಸೇನಾಧೀಶ್ವರ ಯೆಹೋವನು ನುಡಿಯುತ್ತಾನೆ.


ಮಗನಾದ ತಿಮೊಥೆಯನೇ, ನಿನ್ನ ವಿಷಯದಲ್ಲಿ ಮುಂಚೆ ಉಂಟಾದ ಪ್ರವಾದನೆಗಳನ್ನು ನಾನು ನೆನಸಿ - ನೀನು ಅವುಗಳಿಂದ ಧೈರ್ಯಗೊಂಡು ಕ್ರೈಸ್ತರ ದಿವ್ಯಯುದ್ಧವನ್ನು ನಡಿಸಬೇಕೆಂದು ನಿನಗೆ ಆಜ್ಞಾಪನೆಮಾಡುತ್ತೇನೆ.


ನಂಬಿಕೆಯ ವಿಷಯದಲ್ಲಿ ನಿಜಕುಮಾರನಾಗಿರುವ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ.


ತನ್ನ ಪ್ರಿಯ ಕುಮಾರನಾದ ತಿಮೊಥೆಯನಿಗೆ ಬರೆಯುವದೇನಂದರೆ - ತಂದೆಯಾದ ದೇವರಿಂದಲೂ ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಕ್ರಿಸ್ತ ಯೇಸುವಿನಲ್ಲಿರುವ ಜೀವವಾಗ್ದಾನವನ್ನು ತಿಳಿಯಪಡಿಸುವದಕ್ಕೋಸ್ಕರ ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಆದಕಾರಣ ದೇವರಾರಿಸಿಕೊಂಡವರು ನನ್ನ ಕೂಡ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು