2 ತಿಮೊಥೆಯನಿಗೆ 2:12 - ಕನ್ನಡ ಸತ್ಯವೇದವು J.V. (BSI)12 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಾವು ಆತನೊಡನೆ ಸತ್ತಿದ್ದರೆ, ಆತನೊಡನೆ ಜೀವಿಸುತ್ತೇವೆ; ಸೈರಣೆಯುಳ್ಳವರು ನಾವಾದರೆ, ಆತನೊಡನೆ ರಾಜ್ಯವಾಳುತ್ತೇವೆ; ನಾವಾತನನು ನಿರಾಕರಿಸಿದರೆ, ನಮ್ಮನ್ನಾತನು ನಿರಾಕರಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾವು ಸಂಕಟವನ್ನು ಸ್ವೀಕರಿಸಿಕೊಂಡರೆ, ಆತನೊಡನೆ ಆಳುವೆವು. ನಾವು ಆತನನ್ನು ಸ್ವೀಕರಿಸಿಕೊಳ್ಳದಿದ್ದರೆ, ಆತನೂ ನಮ್ಮನ್ನು ಸ್ವೀಕರಿಸಿಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನಾವು ಸಹಿಸಿಕೊಳ್ಳುವವರಾಗಿದ್ದರೆ ಕ್ರಿಸ್ತ ಯೇಸುವಿನ ಜೊತೆಯಲ್ಲಿ ನಾವು ಸಹ ಆಳುವೆವು. ಅವರನ್ನು ನಿರಾಕರಿಸಿದರೆ ಅವರು ಸಹ ನಮ್ಮನ್ನು ನಿರಾಕರಿಸುವರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಆಕ್ರಿಕ್ ಪತರ್ ಕಸ್ಟ್ ಸೊಸುನ್ ಘೆತಲೆ ಹೊಲ್ಯಾರ್ ಅಮಿ ತೆಚ್ಯಾ ವಾಂಗ್ಡಾ ರಾಜ್ವಟ್ ಚಾಲ್ವುತಾಂವ್, ಅಮಿ ತೆಕಾ ತಿರಸ್ಕಾರ್ ಕರ್ಲ್ಯಾರ್, ತೊಬಿ ಅಮ್ಕಾ ತಿರಸ್ಕಾರ್ ಕರ್‍ತಾ. ಅಧ್ಯಾಯವನ್ನು ನೋಡಿ |
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.