2 ತಿಮೊಥೆಯನಿಗೆ 2:19 - ಕನ್ನಡ ಸತ್ಯವೇದವು J.V. (BSI)19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ - ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕಂತಲೂ ಲಿಪಿಯುಂಟು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ದೇವರು ಹಾಕಿದಂಥ ಸುಸ್ಥಿರವಾದ ಅಸ್ತಿವಾರವನ್ನು ಯಾರಿಂದಲೂ ಕದಲಿಸಲಾಗದು. ಅದರಲ್ಲಿ “ತನ್ನವರು ಯಾರು ಎಂದು ಪ್ರಭು ಅರಿತಿದ್ದಾರೆ; ಮತ್ತು ತಾನು ಪ್ರಭುವಿನವನೆಂದು ಹೇಳಿಕೊಳ್ಳುವವರೆಲ್ಲರೂ ದುರ್ಮಾರ್ಗದಿಂದ ದೂರವಿರಲಿ,” ಎಂದು ಲಿಖಿತವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ದೇವರ ಭದ್ರವಾದ ಬುನಾದಿಯು ಬದಲಾಗುವುದೇ ಇಲ್ಲ. “ಪ್ರಭುವಿಗೆ ತನ್ನವರು ಯಾರೆಂಬುದು ತಿಳಿದಿದೆ” ಎಂತಲೂ “ಪ್ರಭುವಿನಲ್ಲಿ ನಂಬಿಕೆಯಿಟ್ಟಿರುವವರೆಲ್ಲರೂ ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಆ ಬುನಾದಿಯ ಮೇಲೆ ಕೆತ್ತಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಖರೆ ದೆವಾನ್ ಘಾಟಲ್ಲೊ ಪಾಯಾ ಕೊನಾಕ್‍ಬಿ ಹಾಲ್ವುಕ್ ಹೊಯ್ನಾ ಅನಿ ತ್ಯಾ ಪಾಯಾಚ್ಯಾ ವರ್‍ತಿ, ಅಪ್ನಾಚೆ ಕೊನ್ ಮನುನ್ ಸರ್ವೆಸ್ವರ್ ವಳಕ್ತಾ, ಅನಿ ಎಗ್ದಾ “ಸರ್ವೆಸ್ವರಾಚೆ ನಾವ್ ಅಪ್ನಾಚ್ಯಾ ತೊಂಡಾನ್ ಸಾಂಗ್ತಲೊ, ಬುರ್ಶ್ಯಾಪಾನಾತ್ನಾ ಧುರ್ ರ್‍ಹಾಂವ್ದಿತ್. ಮನುನ್ ತೆಚೆ ವರ್ತಿ ಲಿವಲ್ಲೆ ಹಾಯ್”. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.
ಆ ಮಕ್ಕಳು ಒಬ್ಬ ತಂದೆಯ ಮಕ್ಕಳಾಗಿದ್ದರೂ ಅವರು ಇನ್ನು ಹುಟ್ಟದೆಯೂ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದೆಯೂ ಇದ್ದಾಗ - ಹಿರಿಯನು ಕಿರಿಯನಿಗೆ ಸೇವೆ ಮಾಡುವನೆಂಬದಾಗಿ ಆಕೆಗೆ ಹೇಳಲ್ಪಟ್ಟಿತು. ಇದರಿಂದ ದೇವರು ತನಗೆ ಮನಸ್ಸಿದ್ದವರನ್ನು ಆರಿಸಿಕೊಳ್ಳುತ್ತಾನೆಂಬ ಸಂಕಲ್ಪವು ಸ್ಥಿರವಾಗಿರಬೇಕೆಂದು ತೋರಿಸಿದನು. ಆ ಸಂಕಲ್ಪವು ಪುಣ್ಯಕ್ರಿಯೆಗಳ ಮೇಲೆ ಆಧಾರಗೊಳ್ಳದೆ ಕರೆಯುವಾತನ ಚಿತ್ತದ ಮೇಲೆಯೇ ಆಧಾರಗೊಂಡಿದೆ.