2 ತಿಮೊಥೆಯನಿಗೆ 2:2 - ಕನ್ನಡ ಸತ್ಯವೇದವು J.V. (BSI)2 ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಅನೇಕ ಸಾಕ್ಷಿಗಳ ಮುಂದೆ ನನ್ನಿಂದ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸಲು ಶಕ್ತರಾದ, ನಂಬಿಗಸ್ತರಾದ ಜನರಿಗೆ ಅದನ್ನು ಒಪ್ಪಿಸಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಲವರ ಮುಂದೆ ನಾನು ಮಾಡಿದ ಉಪದೇಶವನ್ನು ನೀನೇ ಕೇಳಿದ್ದೀ. ಅದೇ ಉಪದೇಶವನ್ನು ಇತರರಿಗೂ ಬೋಧಿಸಲು ಪ್ರಾಮಾಣಿಕ ವ್ಯಕ್ತಿಗಳನ್ನು ನೇಮಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನಾನು ಉಪದೇಶಿಸಿದ ಸಂಗತಿಗಳನ್ನು ನೀನು ಕೇಳಿರುವೆ. ಅವುಗಳನ್ನು ಇತರ ಅನೇಕ ಜನರೂ ಕೇಳಿದ್ದಾರೆ. ನೀನು ಆ ಸಂಗತಿಗಳನ್ನು ಉಪದೇಶಿಸಬೇಕು. ನಿನಗೆ ನಂಬಿಗಸ್ತರಾದ ಕೆಲವರ ವಶಕ್ಕೆ ಆ ಉಪದೇಶಗಳನ್ನು ಕೊಡು. ಆಗ ಅವರು ಆ ಸಂಗತಿಗಳನ್ನು ಇತರರಿಗೆ ಉಪದೇಶಿಸಲು ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅನೇಕ ಸಾಕ್ಷಿಗಳ ಮುಂದೆ ನೀನು ನನ್ನಿಂದ ಕೇಳಿದವುಗಳನ್ನು ಇತರರಿಗೆ ಸಹ ಬೋಧಿಸಲು ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ಮಾಜೆಕ್ನಾ ಆಯ್ಕಲ್ಲೆ ಶಿಕಾಪ್ ಘೆ ಅನಿ ಎಕ್ ಸಾಕ್ಷಿ ಸರ್ಕೆ ಲೊಕಾಂಚ್ಯಾ ಇದ್ರಾಕ್ ಸಾಂಗ್, ಅನಿ ಮಿಯಾ ಶಿಕ್ವುಲ್ಲಿ ಸಂಗ್ತಿಯಾ ತಿಯಾ ದುಸ್ರ್ಯಾಕ್ನಿ ಶಿಕ್ವು, ಅನಿ ವಿಶ್ವಾಸಾನ್ ಶಿಕ್ವು ಅನಿ ಜೆ ಕೊನಾಕ್ ದುಸ್ರ್ಯಾಕ್ನಿ ಶಿಕ್ವುತಲಿ ತಾಕತ್ ಹಾಯ್ ತೆಂಚ್ಯಾ ತಾಬೆತ್ ದಿ ಅನಿ ತೆನಿ ತ್ಯಾ ಗೊಸ್ಟಿಯಾ ಲೊಕಾಕ್ನಿ ಶಿಕ್ವುಂದಿತ್ . ಅಧ್ಯಾಯವನ್ನು ನೋಡಿ |
ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;