2 ತಿಮೊಥೆಯನಿಗೆ 2:22 - ಕನ್ನಡ ಸತ್ಯವೇದವು J.V. (BSI)22 ನೀನು ಯೌವನದ ಇಚ್ಫೆಗಳಿಗೆ ದೂರವಾಗಿರು; ನೀತಿ ವಿಶ್ವಾಸ ಪ್ರೀತಿ ಮತ್ತು ಸಮಾಧಾನವನ್ನು ಸಂಪಾದಿಸುವದಕ್ಕೆ ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ಪ್ರಯಾಸಪಡು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನೀನು ಯೌವನದ ಭಾವೋದ್ರೇಕಗಳಿಗೆ ತುತ್ತಾಗದೆ ಧರ್ಮ, ವಿಶ್ವಾಸ, ಪ್ರೀತಿ ಮತ್ತು ಶಾಂತಿ - ಇವುಗಳನ್ನು ರೂಢಿಸಿಕೋ. ಈ ದಿಸೆಯಲ್ಲಿ ಶುದ್ಧ ಹೃದಯದಿಂದ ದೇವರನ್ನು ಅರಸುವವನು ನಿನಗೆ ಆದರ್ಶವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯುವಕರು ಇಷ್ಟಪಡುವ ಕೆಟ್ಟಕಾರ್ಯಗಳಿಂದ ನೀನು ದೂರವಾಗಿರು. ಪ್ರೀತಿ, ನಂಬಿಕೆ ಮತ್ತು ಶಾಂತಿಯನ್ನು ಹೊಂದಿದವನಾಗಿದ್ದು ಯೋಗ್ಯವಾದ ರೀತಿಯಲ್ಲಿ ಜೀವಿಸಲು ಬಹಳವಾಗಿ ಪ್ರಯತ್ನಪಡು. ಪ್ರಭುವಿನಲ್ಲಿ ಭರವಸವಿಟ್ಟಿರುವ ಮತ್ತು ಪರಿಶುದ್ಧ ಹೃದಯ ಹೊಂದಿರುವ ಜನರೊಂದಿಗೆ ಒಟ್ಟುಗೂಡಿ ಈ ಕಾರ್ಯಗಳನ್ನು ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತುಜ್ಯಾ ದಾಂಡ್ಗ್ಯಾಪಾನಾತ್ ತುಕಾ ಯೆತಲ್ಯಾ ಆಶಾನಿತ್ನಾ ತಿಯಾ ಧುರ್ ಕರ್ ಅನಿ ಪವಿತ್ರ್ ಮನಾನ್ ಧನಿಯಾಕ್ ಬಲ್ವುತಲ್ಯಾಂಚ್ಯಾ ವಾಂಗ್ಡಾ ನಿತಿನ್ ಚಲುಸಾಟ್ನಿ, ವಿಶ್ವಾಸಾನ್, ಪ್ರೆಮಾನ್ ಅನಿ ಸಮಾದಾನಾಸಾಟ್ನಿ ಖಟ್ಪಟ್ ಕರ್ ಅನಿ ಧನಿಯಾಚಿ ಮಜತ್ ಮಾಗ್. ಅಧ್ಯಾಯವನ್ನು ನೋಡಿ |