Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:26 - ಕನ್ನಡ ಸತ್ಯವೇದವು J.V. (BSI)

26 ಸೈತಾನನ ಉರ್ಲಿಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವದಕ್ಕೆ ಸ್ವಸ್ಥಚಿತ್ತರಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೈತಾನನ ಬಲೆಗೆ ಬಿದ್ದವರಾದ ಇವರು ಒಂದು ವೇಳೆ ತಪ್ಪಿಸಿಕೊಂಡು ದೇವರ ಚಿತ್ತವನ್ನು ಅನುಸರಿಸುವುದಕ್ಕೆ ಶಕ್ತರಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೈತಾನನ ಬಲೆಯಲ್ಲಿ ಸಿಕ್ಕಿಕೊಂಡು ಅವನ ಇಚ್ಛಾನುಸಾರ ನಡೆಯುವವರು ಹೀಗೆ ಬಿಡುಗಡೆಹೊಂದಲು ಸಾಧ್ಯವಾಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಈ ರೀತಿಯಾಗಿ, ಸೈತಾನನ ಚಿತ್ತವನ್ನು ನೆರವೇರಿಸಲು ಗುಲಾಮರಾಗಿರುವವರು, ಅವನ ಬಲೆಯಿಂದ ಬಿಡುಗಡೆಹೊಂದಿ ಸ್ವಸ್ಥಮನಸ್ಸುಳ್ಳವರಾಗಿ ತಪ್ಪಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಅಶೆ ಗಿರೊ ಅಪ್ನಾಚ್ಯಾ ಮನಾ ಸರ್ಕೆ ಕರುಕ್ ಮನುನ್ ಭಾಂದುನ್ ಥವಲ್ಲ್ಯಾ ತೆಂಕಾ ಅರು ಯೆವ್ನ್ ತೆಚ್ಯಾ ಪಾಶ್ಯಾತ್ನಾ ಸುಟುನ್ ಜಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:26
28 ತಿಳಿವುಗಳ ಹೋಲಿಕೆ  

ಇದಲ್ಲದೆ ಅವನು ಹೊರಗಣವರಿಂದ ಒಳ್ಳೆಯವನೆನಿಸಿಕೊಂಡಿರಬೇಕು; ಇಲ್ಲದಿದ್ದರೆ ನಿಂದೆಗೆ ಗುರಿಯಾಗುವನು ಮತ್ತು ಸೈತಾನನ ಉರ್ಲಿನೊಳಗೆ ಸಿಕ್ಕಿಬಿದ್ದಾನು.


ನಮ್ಮ ಜೀವವು ಬೇಟೆಗಾರನ ಬಲೆಯಿಂದ ತಪ್ಪಿಸಿಕೊಂಡ ಪಕ್ಷಿಯಂತಿದೆ; ಬಲೆಯು ಹರಿದುಹೋಯಿತು, ನಾವು ತಪ್ಪಿಸಿಕೊಂಡೆವು.


ಆದದರಿಂದ - ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಕ್ರಿಸ್ತನು ನಿನಗೆ ಪ್ರಕಾಶ ಕೊಡುವನು ಎಂದು ಹೇಳಿಯದೆ.


ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗವಾಗುವರು, ಬೋನಿಗೆ ಸಿಕ್ಕಿ ವಶವಾಗುವರು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಯೆಹೋವನು ಸೈತಾನನಿಗೆ - ಅವನ ಸ್ವಾಸ್ತ್ಯವೆಲ್ಲಾ ನಿನ್ನ ಕೈಯಲ್ಲಿದೆ, ನೋಡು. ಆದರೆ ಅವನ ಮೈ ಮೇಲೆ ಮಾತ್ರ ಕೈಹಾಕಬೇಡ ಎಂದು ಅಪ್ಪಣೆ ಕೊಟ್ಟನು. ಆಗ ಸೈತಾನನು ಯೆಹೋವನ ಸನ್ನಿಧಾನದಿಂದ ಹೊರಟುಹೋದನು.


ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ದೇವರು ನಮ್ಮನ್ನು ಅಂಧಕಾರದ ದೊರೆತನದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ರಾಜ್ಯದೊಳಗೆ ಸೇರಿಸಿದನು.


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಅವರು ಕತ್ತಲೆಯಿಂದ ಬೆಳಕಿಗೂ ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು ನನ್ನಲ್ಲಿ ನಂಬಿಕೆಯಿಡುವದರಿಂದ ಪಾಪಪರಿಹಾರವನ್ನೂ ಪವಿತ್ರರಾದವರಲ್ಲಿ ಹಕ್ಕನ್ನೂ ಹೊಂದುವಂತೆ ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ ಅಂದನು.


ಆಗ ಪೇತ್ರನು - ಅನನೀಯಾ, ಸೈತಾನನು ನಿನ್ನ ಹೃದಯದಲ್ಲಿ ತುಂಬಿಕೊಂಡದ್ದೇನು? ನೀನು ಯಾಕೆ ಆ ಹೊಲದ ಕ್ರಯದಲ್ಲಿ ಕೆಲವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸಬೇಕೆಂದಿದ್ದೀ?


ಅವನು ಆ ತುತ್ತನ್ನು ತೆಗೆದುಕೊಂಡ ಕೂಡಲೆ ಸೈತಾನನು ಅವನೊಳಗೆ ಹೊಕ್ಕನು. ಆಗ ಯೇಸು ಅವನಿಗೆ - ನೀನು ಮಾಡುವದನ್ನು ಬೇಗನೆ ಮಾಡಿಬಿಡು ಎಂದು ಹೇಳಿದನು.


ಅವರು ಊಟಕ್ಕೆ ಕೂತುಕೊಂಡಿದ್ದರು; ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಮನಸ್ಸಿನಲ್ಲಿ ಯೇಸುವನ್ನು ಹಿಡುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದ್ದನು.


ಆಗ ಅವನಿಗೆ ಬುದ್ಧಿ ಬಂದು ಅವನು - ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವದೆ; ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತೇನೆ.


ಒಬ್ಬ ಬಲಿಷ್ಠನು ಸರ್ವಾಯುಧಗಳನ್ನು ಧರಿಸಿಕೊಂಡು ತನ್ನ ಮನೆಯನ್ನು ಕಾಪಾಡಿಕೊಂಡಿರುವಾಗ ಅವನ ವಸ್ತುಗಳು ಭದ್ರವಾಗಿಯೇ ಇರುವವು;


ಇವನು ಇಂಥವನಾಗಿರುವದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು ಮರಣಹೊಂದಿ ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು ಬಹುಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆಮಾಡಿದನಲ್ಲಾ.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬದಾಗಿ ಇವರಿಗೆ ಪರಿಣವಿುಸುವದು; ಇವರು ನಡೆದು ಹಿಂದೆಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ಯೆಹೋವನು ಸೈತಾನನಿಗೆ - ಅವನು ನಿನ್ನ ಕೈಯಲ್ಲಿದ್ದಾನೆ, ನೋಡು; ಅವನ ಪ್ರಾಣವನ್ನಾದರೋ ಉಳಿಸಲೇಬೇಕು ಎಂದು ಅಪ್ಪಣೆಕೊಟ್ಟನು.


ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ.


ಸೀಮೋನನ ಪಾಲುಗಾರರಾಗಿದ್ದಂಥ ಜೆಬೆದಾಯನ ಮಕ್ಕಳಾದ ಯಾಕೋಬ ಯೋಹಾನರೂ ಹಾಗೆಯೇ ವಿಸ್ಮಯಪಟ್ಟರು. ಯೇಸು ಸೀಮೋನನಿಗೆ - ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವವನಾಗಿರುವಿ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು