Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 2:9 - ಕನ್ನಡ ಸತ್ಯವೇದವು J.V. (BSI)

9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಬಂಧಿಸಲ್ಪಟ್ಟವನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಕಾರಣದಿಂದಲೇ ಸಂಕಟವನ್ನು ಅನುಭವಿಸುತ್ತಿದ್ದೇನೆ. ದುಷ್ಕರ್ಮಿಯಂತೆ ಸಂಕೋಲೆಗಳಿಂದ ಬಂಧಿಸಲ್ಪಟ್ಟಿದ್ದೇನೆ. ಆದರೆ ದೇವರ ಉಪದೇಶಕ್ಕೆ ಬಂಧನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಕಶ್ಯಾಕ್ ಮಟ್ಲ್ಯಾರ್, ಹ್ಯಾ ಬರ್‍ಯಾ ಖಬರೆಸಾಟ್ನಿ ಮಾಕಾ ಎಕ್ ಚುಕಿದಾರಾ ಸಾರ್ಕೆ ಕಸ್ಟ್ ಸೊಸುಕ್ ಗಾವ್ತಾ ಬಂಧಿಖಾನ್ಯಾತ್ ಸೈತ್ ರ್‍ಹಾತಲೆ ಪಡ್ತಾ. ಖರೆ ದೆವಾಚ್ಯಾ ಗೊಸ್ಟಿ‍ಯಾಕ್ನಿ ಬಾಂದುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 2:9
22 ತಿಳಿವುಗಳ ಹೋಲಿಕೆ  

ನಿಮ್ಮೆಲ್ಲರ ವಿಷಯದಲ್ಲಿ ಈ ಅಭಿಪ್ರಾಯವುಳ್ಳವನಾಗಿರುವದು ನ್ಯಾಯವಾಗಿದೆ; ನಾನು ಬೇಡಿಬಿದ್ದಿರುವಾಗಲೂ ಸುವಾರ್ತೆಯ ವಿಷಯದಲ್ಲಿ ಉತ್ತರ ಹೇಳಿ ಸ್ಥಾಪಿಸುವಾಗಲೂ ನೀವೆಲ್ಲರೂ ನನ್ನೊಂದಿಗೆ ದೇವರ ಕೃಪೆಯಲ್ಲಿ ಪಾಲುಗಾರರಾಗಿದ್ದೀರೆಂದು ನಿಮ್ಮನ್ನು ನನ್ನ ಹೃದಯದಲ್ಲಿಟ್ಟುಕೊಂಡಿದ್ದೇನೆ.


ಯಾವ ಅಡ್ಡಿಯೂ ಇಲ್ಲದೆ ತುಂಬಾ ಧೈರ್ಯದಿಂದ ದೇವರ ರಾಜ್ಯವನ್ನು ಪ್ರಸಿದ್ಧಿಪಡಿಸುತ್ತಾ ಕರ್ತನಾದ ಯೇಸು ಕ್ರಿಸ್ತನ ವಿಷಯವಾಗಿ ಉಪದೇಶಮಾಡುತ್ತಾ ಇದ್ದನು.


ಆದದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆಪಡದೆ ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಶ್ರಮೆಯನ್ನನುಭವಿಸು.


ಇದಲ್ಲದೆ ನಮಗೋಸ್ಕರವೂ ಪ್ರಾರ್ಥನೆ ಮಾಡಿರಿ. ಕ್ರಿಸ್ತನ ವಿಷಯದಲ್ಲಿ ದೇವರು ತಿಳಿಯಪಡಿಸಿದ ಸತ್ಯಾರ್ಥವನ್ನು ಪ್ರಸಂಗಿಸುವದಕ್ಕೆ ಆತನು ಅನುಕೂಲವಾದ ಸಂದರ್ಭವನ್ನು ನಮಗೆ ದಯಪಾಲಿಸಿ ನಾನು ಅದನ್ನು ಹೇಳಬೇಕಾದ ರೀತಿಯಲ್ಲಿ ತಿಳಿಸುವಂತೆ ಅನುಗ್ರಹಮಾಡಬೇಕೆಂದು ಬೇಡಿಕೊಳ್ಳಿರಿ; ಆ ಸತ್ಯಾರ್ಥದ ನಿವಿುತ್ತವೇ ನಾನು ಸೆರೆಯಲ್ಲಿದ್ದೇನಲ್ಲಾ.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಅಕ್ರಮಗಾರರೆಂದು ನಿಂದಿಸುತ್ತಾರೋ ಆ ವಿಷಯದಲ್ಲಿಯೇ ನಿಮ್ಮ ಸತ್ಕ್ರಿಯೆಗಳನ್ನು ಕಣ್ಣಾರೆ ಕಂಡು ವಿಚಾರಣೆಯ ದಿನದಲ್ಲಿ ದೇವರನ್ನು ಕೊಂಡಾಡುವರು.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು ಕಳ್ಳನು ದುಷ್ಟನು ಪರಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಶಿಕ್ಷಾಪಾತ್ರನಾಗಬಾರದು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಕಡೇ ಮಾತೇನಂದರೆ, ಸಹೋದರರೇ, ನಮಗೋಸ್ಕರ ಪ್ರಾರ್ಥನೆಮಾಡಿರಿ. ಕರ್ತನ ವಾಕ್ಯವು ನಿಮ್ಮಲ್ಲಿ ಹಬ್ಬಿದ ಪ್ರಕಾರ ಎಲ್ಲೆಲ್ಲಿಯೂ ಬೇಗನೆ ಹಬ್ಬಿ ಪ್ರಖ್ಯಾತಿ ಹೊಂದುವ ಹಾಗೆಯೂ


ಇದು ಪೌಲನೆಂಬ ನಾನು ಸ್ವಂತ ಕೈಯಿಂದ ಬರೆದ ವಂದನೆ. ನಾನು ಸೆರೆಯಲ್ಲಿದ್ದೇನೆಂಬದನ್ನು ಜ್ಞಾಪಕ ಮಾಡಿಕೊಳ್ಳಿರಿ. ಕೃಪೆಯು ನಿಮ್ಮೊಂದಿಗಿರಲಿ.


ಹೀಗಿರುವದರಿಂದ ಅನ್ಯಜನರಾಗಿರುವ ನಿಮ್ಮ ನಿವಿುತ್ತ ಕ್ರಿಸ್ತ ಯೇಸುವಿನ ಸೆರೆಯವನಾದ ಪೌಲನೆಂಬ ನಾನು ನಿಮಗೋಸ್ಕರ ಪ್ರಾರ್ಥಿಸುತ್ತೇನೆ.


ಅವನು ನನ್ನ ಹೆಸರಿನ ನಿವಿುತ್ತ ಎಷ್ಟು ಹಿಂಸೆ ಅನುಭವಿಸಬೇಕೆಂಬದನ್ನು ನಾನೇ ಅವನಿಗೆ ತೋರಿಸುವೆನು ಎಂದು ಹೇಳಿದನು.


ಒಳ್ಳೇ ಮನಸ್ಸಾಕ್ಷಿಯುಳ್ಳವರಾಗಿರಿ; ಆಗ ಕ್ರಿಸ್ತನಲ್ಲಿರುವ ನಿಮ್ಮ ಒಳ್ಳೇ ನಡವಳಿಕೆಯನ್ನು ಕುರಿತು ಬೈಯುವವರು ನಿಮ್ಮನ್ನು ನಿಂದಿಸುವದಕ್ಕೆ ನಾಚಿಕೆಪಡುವರು.


ಅರಸನು ಸರ್ವಾಧಿಕಾರಿ ಎಂತಲೂ ಬೇರೆ ಅಧಿಪತಿಗಳು ಕೆಟ್ಟನಡತೆಯುಳ್ಳವರನ್ನು ದಂಡಿಸುವದಕ್ಕೂ ಒಳ್ಳೇ ನಡತೆಯುಳ್ಳವರನ್ನು ಪ್ರೋತ್ಸಾಹಪಡಿಸುವದಕ್ಕೂ ಅರಸನಿಂದ ಕಳುಹಿಸಲ್ಪಟ್ಟವರೆಂತಲೂ ತಿಳಿದು ಅವರಿಗೆ ಅಧೀನರಾಗಿರಿ.


ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಅವನು ಅನೇಕಾವರ್ತಿ ನನ್ನನ್ನು ಆದರಿಸಿದನು;


ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.


ಸಹಸ್ರಾಧಿಪತಿಯು ಹತ್ತರಕ್ಕೆ ಬಂದು ಅವನನ್ನು ಹಿಡಿದು ಅವನಿಗೆ ಜೋಡು ಬೇಡಿಯನ್ನು ಹಾಕಬೇಕೆಂದು ಅಪ್ಪಣೆಕೊಟ್ಟು -


ಆ ಬೇರೆ ತರದವರಾದರೋ ನಾನು ಬೇಡಿಬಿದ್ದಿರುವಾಗಲೂ ನನಗೆ ಸಂಕಟವನ್ನು ಎಬ್ಬಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಿಪಡಿಸದೆ ಕಕ್ಷಿಭಾವದಿಂದ ಪ್ರಸಿದ್ಧಿಪಡಿಸುತ್ತಾರೆ.


ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.


ಕ್ರಿಸ್ತ ಯೇಸುವಿನ ಒಳ್ಳೇ ಸೈನಿಕನಂತೆ ನನ್ನೊಂದಿಗೆ ಶ್ರಮೆಯನ್ನನುಭವಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು