Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:13 - ಕನ್ನಡ ಸತ್ಯವೇದವು J.V. (BSI)

13 ಆದರೆ ದುಷ್ಟರೂ ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ದುಷ್ಕರ್ಮಿಗಳು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನೇದಿನೇ ಅಧೋಗತಿಗಿಳಿಯುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದುಷ್ಟರು ಮತ್ತು ದುರ್ಬೋಧಕರು ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ದಿನದಿಂದ ದಿನಕ್ಕೆ ಕೀಳುಮಟ್ಟಕ್ಕೆ ಇಳಿಯುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅನಿ ವಾಯ್ಟ್ ಲೊಕಾ, ಅನಿ ಝುಟಿ ಶಿಕಾಪಾ ಶಿಕ್ವುತಲಿ ಲೊಕಾ ಲೊಕಾಕ್ನಿ ಮೊಸ್ ಕರುನ್ಗೆತ್ ಅಪ್ನಿಚ್ ಮೊಟ್ಯಾ ಮೊಸಾತ್ ಪಡ್ತ್ಯಾತ್ ಅನಿ ಅಪ್ನಾಕುಚ್ ಅನಿಉಲ್ಲಿ ಬುರ್ಶಿ ಲೊಕಾ ಕರುನ್ ಘೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:13
15 ತಿಳಿವುಗಳ ಹೋಲಿಕೆ  

ಆದರೂ ಮುಂದಣ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಾನೆ.


ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನಹೊಂದಿ ಲೋಕದ ಮಲಿನತ್ವಗಳಿಗೆ ತಪ್ಪಿಸಿಕೊಂಡವರು ತಿರಿಗಿ ಅವುಗಳಲ್ಲಿ ಸಿಕ್ಕಿಕೊಂಡು ಸೋತುಹೋದರೆ ಅವರ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದ್ದಾಗಿದೆ.


ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಕಾಲಕಳೆಯುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.


ಯನ್ನ ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ ಆ ಮನುಷ್ಯರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಬುದ್ಧಿಗೆಟ್ಟವರೂ ಕ್ರಿಸ್ತ ನಂಬಿಕೆಯಿಂದ ಭ್ರಷ್ಟರೂ ಆಗಿದ್ದಾರೆ.


ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು ಕುಚೋದ್ಯಮಾಡುತ್ತಾ -


ಆತನಲ್ಲಿ ಬಲವೂ ಸಾಮರ್ಥ್ಯವೂ ಉಂಟು; ತಪ್ಪಿದವನೂ ತಪ್ಪಿಸಿದವನೂ ಆತನಿಗೆ ಒಳಪಟ್ಟಿರುವರು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ ಎಂದುಕೊಳ್ಳಲೂ ಆಗದು, ತನ್ನನ್ನು ರಕ್ಷಿಸಿಕೊಳ್ಳಲೂ ಆಗದು.


ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.


ಮಾನ ಅವಮಾನ ಕೀರ್ತಿ ಅಪಕೀರ್ತಿಗಳನ್ನು ಹೊಂದಿದವರೂ ಆಗಿದ್ದೇವೆ.


ಆಮೇಲೆ ಆತನು ನನಗೆ - ಇವುಗಳಿಗಿಂತ ಇನ್ನೂ ಹೆಚ್ಚಾದ ದುರಾಚಾರಗಳನ್ನು ನೋಡುವಿ ಎಂದು ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು