Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 3:14 - ಕನ್ನಡ ಸತ್ಯವೇದವು J.V. (BSI)

14 ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬದನ್ನು ಆಲೋಚಿಸು. ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಯಿತಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನಾದರೋ ನಿನಗೆ ಬೋಧಿಸಲಾಗಿರುವ ಹಾಗೂ ನೀನು ದೃಢವಾಗಿ ನಂಬಿರುವ ಸತ್ಯಗಳನ್ನು ಅನುಸರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದರೆ ನೀನು ಕಲಿತಿರುವ ಉಪದೇಶಗಳನ್ನು ಅನುಸರಿಸು. ಅವು ಸತ್ಯವೆಂಬುದು ನಿನಗೆ ತಿಳಿದಿದೆ. ಅವುಗಳನ್ನು ನಿನಗೆ ಕಲಿಸಿದ ಜನರು ನಂಬಿಕೆಗೆ ಯೋಗ್ಯರೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನೀನಾದರೋ, ಕಲಿತು ನಿಶ್ಚಯಗೊಂಡವುಗಳಲ್ಲಿ ಮುಂದುವರಿಯುತ್ತಿರು. ನಿನಗೆ ಕಲಿಸಿಕೊಟ್ಟವರು ಯಾರೆಂಬುದು ನಿನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಖರೆ ತಿಯಾ ತುಕಾ ಶಿಕ್ವಲ್ಲ್ಯಾ ಅನಿ ತಿಯಾ ಖಡ್ತರಪಾನಾನ್ ಚಲ್ತಲ್ಯಾ ಖರೆಪಾನಾಚ್ಯಾ ವಾಟೆನ್ ಚಲುನ್ಗೆತ್ ರ್‍ಹಾ. ಹೆ ಸಗ್ಳೆ ವಿಶಯಾ ತುಕಾ ಕೊನಾಕ್ನಾ‍ ಶಿಕ್ಲೆ ಮನುನ್ ತುಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 3:14
12 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನವ್ಮಿುಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ನಿಜವಾಗಿ ದೇವರ ವಾಕ್ಯವೇ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.


ನೀನು ನನ್ನಿಂದ ಅನೇಕ ಸಾಕ್ಷಿಗಳ ಮುಂದೆ ಕೇಳಿದ ಉಪದೇಶವನ್ನು ಇತರರಿಗೆ ಬೋಧಿಸ ಶಕ್ತರಾದ ನಂಬಿಗಸ್ತ ಮನುಷ್ಯರಿಗೆ ಒಪ್ಪಿಸಿಕೊಡು.


ನೀನು ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯೂ ಪ್ರೀತಿಯೂ ಉಳ್ಳವನಾಗಿ ನನ್ನಿಂದ ಕೇಳಿದ ಸ್ವಸ್ಥಬೋಧನಾವಾಕ್ಯಗಳನ್ನು ಮಾದರಿಮಾಡಿಕೊಂಡು ಅನುಸರಿಸು.


ನಾವು ಸಾರಿದ ಸುವಾರ್ತೆಯು ನಿಮ್ಮಲ್ಲಿ ಬರೀ ಮಾತಾಗಿ ಬಾರದೆ ಶಕ್ತಿಯೊಡನೆಯೂ ಪವಿತ್ರಾತ್ಮದೊಡನೆಯೂ ಬಹು ನಿಶ್ಚಯದೊಡನೆಯೂ ಬಂತೆಂಬದನ್ನೂ ಬಲ್ಲೆವು. ನಾವು ನಿಮ್ಮಲ್ಲಿದ್ದು ನಿಮಗೋಸ್ಕರ ಎಂಥವರಾಗಿ ವರ್ತಿಸಿದೆವೆಂಬದನ್ನು ನೀವೂ ಬಲ್ಲಿರಿ.


ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ನೀವು ಉಪಚಾರಮಾಡುವದರಲ್ಲಿ ಯಾವ ಆಸಕ್ತಿಯನ್ನು ತೋರಿಸಿದ್ದೀರೋ ನಿಮ್ಮ ನಿರೀಕ್ಷೆ ದೃಢಮಾಡಿಕೊಂಡು ಕಡೇ ತನಕ ಹಿಡಿಯುವದರಲ್ಲಿಯೂ ನಿಮ್ಮಲ್ಲಿ ಪ್ರತಿಯೊಬ್ಬರು ಅದೇ ಆಸಕ್ತಿಯನ್ನು ತೋರಿಸಬೇಕೆಂದು ಅಪೇಕ್ಷಿಸುತ್ತೇವೆ.


ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು; ಹೀಗಿರುವದರಿಂದ ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.


ಆ ಗ್ರಂಥಗಳು ಕ್ರಿಸ್ತ ಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದಿಸುವ ಜ್ಞಾನವನ್ನು ಕೊಡುವದಕ್ಕೆ ಶಕ್ತವಾಗಿವೆ.


ಒಬ್ಬನು ಒಂದು ದಿನಕ್ಕಿಂತ ಮತ್ತೊಂದು ದಿನವನ್ನು ವಿಶೇಷವೆಂದೆಣಿಸುತ್ತಾನೆ; ಮತ್ತೊಬ್ಬನು ಎಲ್ಲಾ ದಿವಸಗಳನ್ನೂ ವಿಶೇಷವೆಂದೆಣಿಸುತ್ತಾನೆ; ಪ್ರತಿಯೊಬ್ಬನು ತನ್ನ ತನ್ನ ಮನಸ್ಸಿನಲ್ಲಿ ನಿಶ್ಚಯಿಸಿಕೊಂಡಿರಬೇಕು.


ಹೇಗಂದರೆ ನೀವೆಲ್ಲರು ಪ್ರೀತಿಯಿಂದ ಹೊಂದಿಕೆಯಾಗಿದ್ದು ಬುದ್ಧಿಪೂರ್ವಕ ನಿಶ್ಚಯವೆಂಬ ಭಾಗ್ಯವನ್ನು ಪಡೆದು ದೇವರು ತಿಳಿಸಿರುವ ಮರ್ಮವನ್ನು ಅಂದರೆ ತನ್ನಲ್ಲೇ ಜ್ಞಾನವಿದ್ಯಾಸಂಬಂಧವಾದ ನಿಕ್ಷೇಪಗಳನ್ನೆಲ್ಲಾ ಅಡಗಿಸಿಕೊಂಡಿರುವ ಕ್ರಿಸ್ತನನ್ನು ತಿಳುಕೊಂಡವರಾಗಿ ಹೃದಯದಲ್ಲಿ ದೃಢವಾಗಿರಬೇಕೆಂಬ ಕುತೂಹಲವು ನನಗುಂಟು.


ಯಾಕಂದರೆ ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವದಕ್ಕೆ ಒಂದು ದಿವಸವನ್ನು ಗೊತ್ತುಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವದಕ್ಕೆ ಎಲ್ಲರಿಗೂ ಆಧಾರ ಕೊಟ್ಟಿದ್ದಾನೆ ಅಂದನು.


ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವದಕ್ಕೂ ಎದುರಿಸುವವರ ಬಾಯಿಕಟ್ಟುವದಕ್ಕೂ ಶಕ್ತನಾಗಿರುವಂತೆ ಕ್ರಿಸ್ತ ಬೋಧಾನುಸಾರವಾದ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು