Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:14 - ಕನ್ನಡ ಸತ್ಯವೇದವು J.V. (BSI)

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಕಂಚುಗಾರನಾದ ಅಲೆಗ್ಸಾಂಡರನು ನನಗೆ ಅನೇಕ ಕೆಡಕುಗಳನ್ನು ಮಾಡಿದನು. ಅವನು ಮಾಡಿದ ಕೃತ್ಯಗಳಿಗಾಗಿ ಪ್ರಭುವು ಅವನನ್ನು ದಂಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಪಿತ್ಳಿಚೆ ಕಾಮ್ ಕರ್‍ತಲ್ಯಾ ಅಲೆಗ್ಸಾಂಡರಾನ್ ಮಾಕಾ ವಾಯ್ಟ್ ಕರ್‍ಲ್ಯಾನಾಯ್. ತೆನಿ ಕರಲ್ಲ್ಯಾ ಹ್ಯಾ ಕಾಮಾಂಚ್ಯಾಸಾಟಿ ಧನಿಚ್ ತೆಕಾ ಪಾಜೆ ಹೊಲ್ಲಿ ಮಜುರಿ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:14
18 ತಿಳಿವುಗಳ ಹೋಲಿಕೆ  

ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ನಿಮ್ಮನ್ನು ಸಂಕಟಪಡಿಸುವವರಿಗೆ ಪ್ರತಿಯಾಗಿ ಸಂಕಟವನ್ನೂ ಸಂಕಟಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವದು ದೇವರ ಎಣಿಕೆಯಲ್ಲಿ ನ್ಯಾಯವಾಗಿದೆಯಷ್ಟೆ.


ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಯೆಹೋವನೇ ನಮ್ಮ ಉಭಯರ ವ್ಯಾಜ್ಯವನ್ನು ತೀರಿಸಲಿ; ಆತನೇ ನನಗೋಸ್ಕರ ನಿನಗೆ ಮುಯ್ಯಿಸಲ್ಲಿಸಲಿ; ನಾನಂತೂ ನಿನಗೆ ವಿರೋಧವಾಗಿ ಕೈಯೆತ್ತುವದಿಲ್ಲ.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


[ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ.


ಕರ್ತನೇ, ನೀನು ಪ್ರೀತಿಸ್ವರೂಪನಾಗಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವಂಥವನಲ್ಲವೇ.


ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.


ಪರಲೋಕವೇ, ಆನಂದಪಡು; ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ, ಇವಳು ನಿಮಗೆ ಅನ್ಯಾಯಮಾಡಿದ್ದಕ್ಕಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದರಿಂದ ಆನಂದಪಡಿರಿ ಎಂದು ಆ ಶಬ್ದ ಹೇಳಿತು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಯಾವನಾದರೂ ತನ್ನ ಸಹೋದರನು ಮರಣಕರವಲ್ಲದ ಪಾಪಮಾಡುವದನ್ನು ಕಂಡರೆ ಅವನು ದೇವರನ್ನು ಬೇಡಿಕೊಳ್ಳಲಿ; ಆಗ ದೇವರು ಮರಣಕರವಲ್ಲದ ಪಾಪಮಾಡುವವರಿಗೆ ಜೀವವನ್ನು ದಯಪಾಲಿಸುವನು. ಮರಣಕರವಾದ ಪಾಪವುಂಟು; ಈ ಪಾಪದ ವಿಷಯವಾಗಿ ಬೇಡಿಕೊಳ್ಳಬೇಕೆಂದು ನಾನು ಹೇಳುವದಿಲ್ಲ.


ಆತನು ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು.


ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು; ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು