Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:17 - ಕನ್ನಡ ಸತ್ಯವೇದವು J.V. (BSI)

17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದರೆ ಪ್ರಭು ನನಗೆ ಬೆಂಬಲವಾಗಿ ನಿಂತರು. ನಾನು ಶುಭಸಂದೇಶವನ್ನು ಸಂಪೂರ್ಣವಾಗಿ ಸಾರುವಂತೆಯೂ ಅನ್ಯಧರ್ಮೀಯರೆಲ್ಲರು ಅದನ್ನು ಕೇಳುವಂತೆಯೂ ಮಾಡಿದರು. ಅಲ್ಲದೆ, ಸಿಂಹದ ಬಾಯಿಂದಲೂ ನನ್ನನ್ನು ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಪ್ರಭುವು ನನ್ನ ಬಳಿಯೇ ಇದ್ದನು. ನಾನು ಸುವಾರ್ತೆಯನ್ನು ಯೆಹೂದ್ಯರಲ್ಲದವರಿಗೆ ಸಂಪೂರ್ಣವಾಗಿ ಬೋಧಿಸಲು ಪ್ರಭುವು ನನಗೆ ಶಕ್ತಿಯನ್ನು ದಯಪಾಲಿಸಿದನು. ಆ ಸುವಾರ್ತೆಯನ್ನು ಯೆಹೂದ್ಯರಲ್ಲದ ಜನರೆಲ್ಲರೂ ಕೇಳುವುದು ಪ್ರಭುವಿನ ಇಷ್ಟವಾಗಿತ್ತು. ಆತನು ನನ್ನನ್ನು ಸಿಂಹದ (ಶತ್ರು) ಬಾಯಿಂದ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ಧನಿ ಮಾಜ್ಯಾ ಜಗ್ಗೊಳುಚ್ ರ್‍ಹಾಲೊ ಅನಿ ತೆನಿ ಮಾಕಾ ಬಳ್ ದಿಲ್ಯಾನ್, ತಸೆಮನುನ್ ಜುದೆವ್ ನ್ಹಯ್ ಹೊತ್ತ್ಯಾ ಲೊಕಾನಿ ಆಯ್ಕಿ ಸರ್ಕೆ ಮಾಜೆ ವೈನಾ ಬರಿ ಖಬರ್ ಪುರಾ ಮಾಪಾನ್ ಸಾಂಗಿ ಸರ್ಕೆ ಹೊಲೆ. ಅಶೆ ಮರ್‍ನಾತ್ನಾ ಮಿಯಾ ಬಚಾವ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:17
35 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.


ಸಿಂಹಗಳ ಬಾಯಿಂದಲೂ ಕಾಡುಕೋಣಗಳ ಕೊಂಬುಗಳಿಂದಲೂ ನನ್ನನ್ನು ತಪ್ಪಿಸು. ನನಗೆ ಸದುತ್ತರವನ್ನು ಕೊಟ್ಟಿದ್ದೀಯಲ್ಲಾ.


ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಗೂ ತಪ್ಪಿಸುವನು ಎನ್ನಲು ಸೌಲನು ದಾವೀದನಿಗೆ - ಹೋಗು; ಯೆಹೋವನು ನಿನ್ನ ಸಂಗಡ ಇರಲಿ ಎಂದು ಹೇಳಿ


ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ನನ್ನ ದೇವರು ತನ್ನ ದೂತನನ್ನು ಕಳುಹಿಸಿ ಸಿಂಹಗಳ ಬಾಯಿಗಳನ್ನು ಬಂಧಿಸಿದನು; ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ; ಏಕೆಂದರೆ ಆತನ ದೃಷ್ಟಿಗೆ ನಾನು ನಿರ್ಮಲನಾಗಿ ಕಂಡುಬಂದೆನು, ರಾಜನಾದ ನಿನಗೂ ಯಾವ ದ್ರೋಹವನ್ನೂ ಮಾಡಲಿಲ್ಲ ಎಂದು ಹೇಳಿದನು.


ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು;


ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.


ಆ ದಿನದ ರಾತ್ರಿ ಕರ್ತನು ಪೌಲನ ಬಳಿಯಲ್ಲಿ ನಿಂತುಕೊಂಡು - ಧೈರ್ಯದಿಂದಿರು; ನೀನು ಯೆರೂಸಲೇವಿುನಲ್ಲಿ ನನ್ನ ಸಂಗತಿಯನ್ನೆಲ್ಲಾ ಸಾಕ್ಷಿಯಾಗಿ ಹೇಳಿದಂತೆಯೇ ರೋಮಾಪುರದಲ್ಲಿಯೂ ಸಾಕ್ಷಿಹೇಳಬೇಕಾಗುವದು ಅಂದನು.


ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿಸುತ್ತೇನೆ; ಹೌದು, ನಿನಗೆ ಸಹಾಯಕೊಡುತ್ತೇನೆ; ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಆದರೆ ಅವರು ನಿಮ್ಮನ್ನು ಒಪ್ಪಿಸಿಕೊಡುವಾಗ ಹೇಗೆ ಮಾತಾಡಬೇಕು, ಏನು ಹೇಳಬೇಕು ಎಂದು ಚಿಂತೆಮಾಡಬೇಡಿರಿ; ಆಡತಕ್ಕ ಮಾತು ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವದು.


ಆತನು ಉದ್ಧರಿಸುವವನೂ ರಕ್ಷಿಸುವವನೂ ಭೂಮ್ಯಾಕಾಶಗಳಲ್ಲಿ ಅದ್ಭುತಮಹತ್ವಗಳನ್ನು ನಡಿಸುವವನೂ ಆಗಿದ್ದಾನೆ; ಆತನೇ ದಾನಿಯೇಲನನ್ನು ಸಿಂಹಗಳ ಕೈಯಿಂದ ತಪ್ಪಿಸಿದನು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ಅಂತಿಯೋಕ್ಯ ಇಕೋನ್ಯ ಲುಸ್ತ್ರ ಎಂಬ ಪಟ್ಟಣಗಳಲ್ಲಿ ನನಗೆ ಸಂಭವಿಸಿದ ಹಿಂಸೆಗಳನ್ನೂ ಕಷ್ಟಾನುಭವಗಳನ್ನೂ ತಿಳಿದವನಾಗಿದ್ದೀ. ನಾನು ಎಂಥೆಂಥ ಹಿಂಸೆಗಳನ್ನು ಸಹಿಸಿಕೊಂಡೆನು; ಅವೆಲ್ಲವುಗಳೊಳಗಿಂದ ಕರ್ತನು ನನ್ನನ್ನು ಬಿಡಿಸಿದನು.


ಈ ಸುವಾರ್ತೆಯ ಸೇವೆಯು ನನಗೆ ಕೊಡಲ್ಪಟ್ಟಿತು. ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಮೊದಲು ದೂಷಕನೂ ಹಿಂಸಕನೂ ಬಲಾತ್ಕಾರಿಯೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ ತನ್ನ ಸೇವೆಗೆ ನೇವಿುಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರ ಸಲ್ಲಿಸುತ್ತೇನೆ. ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು;


ನಾನು ಕ್ರಿಸ್ತನ ಅಪ್ರಮೇಯವಾದ ಐಶ್ವರ್ಯದ ವಿಷಯವಾದ ಶುಭಸಮಾಚಾರವನ್ನು ಅನ್ಯಜನರಿಗೆ ಪ್ರಸಿದ್ಧಿಪಡಿಸುವ ಹಾಗೆಯೂ ಸಮಸ್ತವನ್ನು ಸೃಷ್ಟಿಸಿದ ದೇವರಲ್ಲಿ ಆದಿಯಿಂದ ಮರೆಯಾಗಿದ್ದ ಮರ್ಮವು ಪ್ರಕಟವಾಗುವ ವಿಧ ಎಂಥದೆಂದು ತಿಳಿಸುವ ಹಾಗೆಯೂ ದೇವಜನರೊಳಗೆ ಅತ್ಯಲ್ಪನಾದ ನನಗೆ ಅನುಗ್ರಹಿಸೋಣವಾಯಿತು.


ಅದಕ್ಕಾತನು - ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ ಎಂದು ನನಗೆ ಹೇಳಿದ್ದಾನೆ. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲಸಿಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾವಸ್ಥೆಗಳ ವಿಷಯದಲ್ಲಿಯೇ ಬಹುಸಂತೋಷವಾಗಿ ಹೆಚ್ಚಳಪಡುವೆನು.


ಯಾಕಂದರೆ ನಿಮ್ಮ ವಿರೋಧಿಗಳೆಲ್ಲರೂ ಎದುರುನಿಲ್ಲುವದಕ್ಕೂ ಎದುರುಮಾತಾಡುವದಕ್ಕೂ ಆಗದಂಥ ಬಾಯನ್ನೂ ಬುದ್ಧಿಯನ್ನೂ ನಾನೇ ನಿಮಗೆ ಕೊಡುತ್ತೇನೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಬಡವರಾದ ಪ್ರಜೆಗಳನ್ನು ಆಳುವ ದುಷ್ಟರಾಜನು ಗರ್ಜಿಸುವ ಸಿಂಹ, ಹುಡುಕಾಡುವ ಕರಡಿ.


ರಾಜನು ಗರ್ಜಿಸುವ ಸಿಂಹದಂತೆ ಭಯಂಕರನು, ಅವನನ್ನು ಕೆಣಕುವವನು ತನಗೇ ಕೆಡುಕುಮಾಡಿಕೊಳ್ಳುವನು.


ಶ್ರೀಮತ್ ಥೆಯೊಫಿಲನೇ, ನಮ್ಮಲ್ಲಿ ನಿಶ್ಚಯಕ್ಕೆ ಬಂದಿರುವ ಕಾರ್ಯಗಳನ್ನು ಮೊದಲಿಂದ ಕಣ್ಣಾರೆ ಕಂಡು ಸುವಾರ್ತಾ ವಾಕ್ಯವನ್ನು ಸಾರುತ್ತಿದ್ದವರು ನಮಗೆ ತಿಳಿಸಿದ ಪ್ರಕಾರ ಆ ಕಾರ್ಯಗಳನ್ನು ಚರಿತ್ರ ರೂಪವಾಗಿ ಬರೆಯುವದಕ್ಕೆ ಅನೇಕರು ಪ್ರಯತ್ನಿಸಿರಲಾಗಿ


ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.


ಇದರಲ್ಲಿ ನಾನು ಕಷ್ಟವನ್ನನುಭವಿಸಿ ದುಷ್ಕರ್ಮಿಯಂತೆ ಸಂಕೋಲೆಯಿಂದ ಕಟ್ಟಲ್ಪಟ್ಟವನಾಗಿದ್ದೇನೆ; ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ಆದರೆ ನೀನು ಎಲ್ಲಾ ವಿಷಯಗಳಲ್ಲಿ ಸ್ವಸ್ಥಚಿತ್ತನಾಗಿರು, ಶ್ರಮೆಯನ್ನು ತಾಳಿಕೋ, ಸೌವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇವಿುಸಿರುವ ಸೇವೆಯನ್ನು ಲೋಪವಿಲ್ಲದೆ ನಡಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು