Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:8 - ಕನ್ನಡ ಸತ್ಯವೇದವು J.V. (BSI)

8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗೆ ಸಿದ್ಧವಾಗಿದೆ; ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು; ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀತಿವಂತರಿಗೆ ದೊರೆಯುವ ಜಯಮಾಲೆಯು ಈಗ ನನಗೆ ಸಿದ್ಧವಾಗಿದೆ. ನೀತಿಯುಳ್ಳ ನ್ಯಾಯಾಧಿಪತಿಯಾಗಿರುವ ಪ್ರಭುವೇ ನನಗೆ ಅದನ್ನು ಆ ದಿನದಂದು ಕೊಡುವನು. ನನಗೆ ಮಾತ್ರವಲ್ಲದೆ ಆತನ ಬರುವಿಕೆಯನ್ನು ಅಪೇಕ್ಷಿಸಿ ಅದಕ್ಕಾಗಿ ಕಾಯುತ್ತಿದ್ದವರಿಗೆಲ್ಲ ಆತನು ಆ ಜಯಮಾಲೆಯನ್ನು ದಯಪಾಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಗ ನನಗೋಸ್ಕರ ನೀತಿಯ ಕಿರೀಟವು ಇಡಲಾಗಿದೆ. ಅದನ್ನು ನೀತಿಯುಳ್ಳ ನ್ಯಾಯಾಧಿಪತಿಯಾದ ಕರ್ತದೇವರು ಆ ದಿನದಲ್ಲಿ ನನಗೆ ಕೊಡುವರು. ನನಗೆ ಮಾತ್ರವಲ್ಲದೆ ಅವರ ಪುನರಾಗಮನಕ್ಕಾಗಿ ಆಸಕ್ತಿಯಿಂದ ಕಾದಿರುವವರೆಲ್ಲರಿಗೂ ಕೊಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅನಿ ಅತ್ತಾ ಬರ್‍ಯಾ ವಾಟೆನ್ ಚಲಲ್ಲ್ಯಾಕ್ನಿ ಮನುನ್ ದಿತಲೆ ಭೊಮಾನ್, ಬರ್‍ಯಾ ರಿತಿನ್ ಝಡ್ತಿ ಕರ್‍ತಲೊ ಧನಿ; ತ್ಯಾ ದಿಸಿ ಮಾಕಾ ದಿತಾ ಮನುನ್ ಮಿಯಾ ವಾಟ್ ಬಗುನ್ಗೆತ್ ಹಾವ್. ಖಾಲಿ ಮಾಕಾ ಯೆವ್ಡೆಚ್ ನ್ಹಯ್, ತೊ ಪ್ರತ್ಯೆಕ್ಷ್ ಹೊತಲ್ಯಾಕ್ ಪ್ರೆಮಾನಿ ರಾಕುನ್ಗೆತ್ ಅಸಲ್ಲ್ಯಾ ಸಗ್ಳ್ಯಾಕ್ನಿಬಿ ತೊ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:8
39 ತಿಳಿವುಗಳ ಹೋಲಿಕೆ  

ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.


ನಿನಗೆ ಸಂಭವಿಸುವದಕ್ಕಿರುವ ಬಾಧೆಗಳಿಗೆ ಹೆದರಬೇಡ. ಇಗೋ ನೀವು ದುಷ್ಪ್ರೇರಣೆಗೆ ಒಳಗಾಗುವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವದಕ್ಕಿದ್ದಾನೆ; ಮತ್ತು ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವದು. ನೀನು ಸಾಯಬೇಕಾದರೂ ನಂಬಿಗಸ್ತನಾಗಿರು; ನಾನು ನಿನಗೆ ಜೀವವೆಂಬ ಜಯಮಾಲೆಯನ್ನು ಕೊಡುವೆನು.


ಹಿರೀ ಕುರುಬನು ಪ್ರತ್ಯಕ್ಷನಾಗುವಾಗ ನೀವು ದೇವಪ್ರಭಾವವೆಂಬ ಎಂದಿಗೂ ಬಾಡದ ಜಯಮಾಲೆಯನ್ನು ಹೊಂದುವಿರಿ.


ನಮ್ಮನ್ನು ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಯನ್ನು ಎದುರುನೋಡುವವರನ್ನಾಗಿ ಮಾಡಿದನು. ಆ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿರುವದು.


ಇದರ ನಿವಿುತ್ತದಿಂದಲೇ ಈ ಶ್ರಮೆಗಳನ್ನು ಅನುಭವಿಸುತ್ತಾ ಇದ್ದೇನೆ; ಆದರೂ ನಾನು ನಾಚಿಕೆಪಡುವದಿಲ್ಲ; ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶದಲ್ಲಿಟ್ಟಿರುವದನ್ನು ಆತನು ಆ ದಿನಕ್ಕಾಗಿ ಕಾಪಾಡುವದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.


ಅದರಲ್ಲಿ ಹೋರಾಡುವವರೆಲ್ಲರು ಎಲ್ಲಾ ವಿಷಯಗಳಲ್ಲಿ ವಿುತವಾಗಿರುತ್ತಾರೆ. ಅವರು ಬಾಡಿಹೋಗುವ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲಿಕೆಯನ್ನು ಹೊಂದುವದಕ್ಕೆ ಸಾಧನೆ ಮಾಡುವವರಾಗಿದ್ದೇವೆ.


ಸದ್ಭಕ್ತರಿಗೋಸ್ಕರ ನೀನು ಇಟ್ಟುಕೊಂಡಿರುವ ಮೇಲೂ ಆಶ್ರಿತರಿಗೋಸ್ಕರ ನೀನು ಎಲ್ಲರ ಮುಂದೆ ಮಾಡಿದ ಉಪಕಾರಗಳೂ ಎಷ್ಟೋ ವಿಶೇಷವಾಗಿವೆ.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಇದಲ್ಲದೆ ಯಾವನಾದರೂ ರಂಗಸ್ಥಳದಲ್ಲಿ ಎದುರಾಳಿನೊಡನೆ ಹೋರಾಡುವಾಗ ನಿಯಮದ ಪ್ರಕಾರ ಹೋರಾಡದಿದ್ದರೆ ಅವನಿಗೆ ಜಯಮಾಲೆಯು ದೊರಕುವದಿಲ್ಲ.


ದೇವರ ಮುಂದೆ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವದಕ್ಕೆ ಬರುವ ಕ್ರಿಸ್ತ ಯೇಸುವಿನ ಮುಂದೆ ಆತನ ಪ್ರತ್ಯಕ್ಷತೆಯ ಮೇಲೆಯೂ ಆತನ ರಾಜ್ಯದ ಮೇಲೆಯೂ ಆಣೆಯಿಟ್ಟು ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -


ಆದರೆ ಬರೆದಿರುವ ಪ್ರಕಾರ - ದೇವರು ತನ್ನನ್ನು ಪ್ರೀತಿಸುವವರಿಗಾಗಿ ಸಿದ್ಧಮಾಡಿರುವಂಥದೆಲ್ಲವನ್ನು ಕಣ್ಣು ಕಾಣಲಿಲ್ಲ, ಕಿವಿ ಕೇಳಲಿಲ್ಲ, ಅದರ ಭಾವನೆಯು ಮನುಷ್ಯನ ಹೃದಯದಲ್ಲಿ ಹುಟ್ಟಲಿಲ್ಲ.


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಆ ಇಪ್ಪತ್ತುನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕೂತಾತನ ಪಾದಕ್ಕೆ ಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ -


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ಮತ್ತು ತನ್ನನ್ನು ನಿರೀಕ್ಷಿಸಿಕೊಂಡಿರುವವರಿಗೆ ರಕ್ಷಣೆಯನ್ನುಂಟು ಮಾಡುವದಕ್ಕೋಸ್ಕರ ಪಾಪಸಂಬಂಧವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.


ಅವನು ಆ ದಿನದಲ್ಲಿ ಕರ್ತನಿಂದ ಕರುಣೆಯನ್ನು ಹೊಂದುವಂತೆ ಕರ್ತನು ಅವನಿಗೆ ದಯಪಾಲಿಸಲಿ. ಎಫೆಸದಲ್ಲಿಯೂ ಎಷ್ಟೋ ಉಪಚಾರ ಮಾಡಿದನೆಂಬದು ನಿನಗೆ ಚೆನ್ನಾಗಿ ಗೊತ್ತಿದೆ.


ಆತನು ಸತ್ತವರೊಳಗಿಂದ ಎಬ್ಬಿಸಿದಂಥ ಆಕಾಶದೊಳಗಿಂದ ಬರುವಂಥ ಆತನ ಕುಮಾರನನ್ನು ಎದುರುನೋಡುವವರಾದಿರೆಂತಲೂ ತಿಳಿಸುತ್ತಾರೆ. ಈ ಯೇಸುವು ಮುಂದೆ ಬರುವ ದೈವಕೋಪದಿಂದ ನಮ್ಮನ್ನು ತಪ್ಪಿಸುವಾತನು.


ಇದು ಮಾತ್ರವಲ್ಲದೆ ಪ್ರಥಮ ಫಲವಾಗಿರುವ ಪವಿತ್ರಾತ್ಮವರವನ್ನು ಹೊಂದಿದ ನಾವಾದರೂ ದೇವಪುತ್ರರ ಪದವಿಯನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೋಡುತ್ತಾ ನಮ್ಮೊಳಗೆ ನರಳುತ್ತೇವೆ.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಇದಲ್ಲದೆ ಆ ದಿನದ ವಿಷಯವೂ ಆ ಗಳಿಗೆಯ ವಿಷಯವೂ ನನ್ನ ತಂದೆಯೊಬ್ಬನಿಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು, ಮಗನಿಗೂ ತಿಳಿಯದು.


ಸ್ವಾಮೀ, ಸ್ವಾಮೀ, ನಿನ್ನ ಹೆಸರಿನ ಮೇಲೆ ನಾವು ಬೋಧನೆ ಹೇಳಲಿಲ್ಲವೇ? ನಿನ್ನ ಹೆಸರಿನ ಮೇಲೆ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನ ಮೇಲೆ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಆ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.


ಆಕೆಯು ನಿನ್ನ ತಲೆಗೆ ಅಂದದ ಪುಷ್ಪ ಮಾಲೆಯನ್ನಿಟ್ಟು ಸುಂದರ ಕಿರೀಟವನ್ನು ನಿನಗೆ ಒಪ್ಪಿಸುವಳು.


ದೇವರು ನ್ಯಾಯಕ್ಕೆ ಸರಿಯಾಗಿ ತೀರ್ಪುಕೊಡುವವನು; ಯಾವಾಗಲೂ [ದುಷ್ಟರ ವಿಷಯದಲ್ಲಿ] ಕೋಪವುಳ್ಳವನು.


ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ; ನೀವು ಕತ್ತಲೆಯಲ್ಲಿರುವವರಲ್ಲ.


ನಾವು ಈಗಿನ ದೇಹದಲ್ಲಿರುವವರೆಗೂ ನರಳುತ್ತೇವೆ. ಪರಲೋಕದಿಂದ ದೊರಕುವ ನಮ್ಮ ನಿವಾಸವನ್ನು ನಾವು ದೇಹದ ಮೇಲೆ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇವೆ,


ಆ ದಿವಸದಲ್ಲಿ ಅಂಥ ಊರಿನ ಗತಿಯು ಸೊದೋಮೂರಿನ ಗತಿಗಿಂತಲೂ ಕಠಿಣವಾಗಿರುವದು ಎಂದು ನಿಮಗೆ ಹೇಳುತ್ತೇನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ ಎಂದು ಹೇಳಲು ಯೆಹೋವನು -


ಕ್ರಿಸ್ತನು ಬರುವ ದಿನವು ಬೆಂಕಿಯೊಡನೆ ಉದಯವಾಗಿ ಆ ಕೆಲಸವನ್ನು ಸ್ಪಷ್ಟವಾಗಿ ತೋರಿಸುವದು; ಅವನವನ ಕೆಲಸವೆಂಥದೋ ಆ ಬೆಂಕಿ ಶೋಧಿಸುವದು.


ಹೀಗಾದರೆ ಸತ್ತವರಲ್ಲಿ ಕೆಲವರಿಗೆ ಆಗುವ ಪುನರುತ್ಥಾನವು ನನಗೆ ಒದಗಿ ಬಂದೀತು.


ಅವನು ತೆಗೆದುಬಿಡಲ್ಪಟ್ಟ ಕೂಡಲೆ ಆ ಅಧರ್ಮಸ್ವರೂಪನು ಕಾಣಬರುವನು; ಅವನನ್ನು ಯೇಸು ಕರ್ತನು ತನ್ನ ಬಾಯ ಉಸುರಿನಿಂದ ಕೊಲ್ಲುವನು, ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ಸಂಹರಿಸುವನು.


ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವವನ್ನೂ ಪ್ರಕಾಶಗೊಳಿಸಿದನು.


ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರವಾಗಿ ತೋಚದೆ ದುಃಖಕರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ನೀತಿಯೆಂಬ ಫಲವನ್ನು ಕೊಟ್ಟು ಮನಸ್ಸಿಗೆ ಸಮಾಧಾನವನ್ನು ಉಂಟುಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು