Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:12 - ಕನ್ನಡ ಸತ್ಯವೇದವು J.V. (BSI)

12 ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಯಿಂದ ನಿಮ್ಮ ಮೂಲಕ ನಮ್ಮ ಕರ್ತನಾದ ಯೇಸುವಿನ ಹೆಸರಿಗೆ ಮಹಿಮೆ ಉಂಟಾಗುವದು; ಆತನ ಮೂಲಕ ನಿಮಗೂ ಮಹಿಮೆ ಉಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹೀಗಿರಲಾಗಿ ನಮ್ಮ ದೇವರು ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗೆ ಅನುಸಾರವಾಗಿ ನಮ್ಮ ಕರ್ತನಾದ ಯೇಸುಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವುದು ನೀವೂ ಆತನಲ್ಲಿ ಮಹಿಮೆ ಹೊಂದುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಹೀಗೆ ನಿಮ್ಮ ಮುಖಾಂತರ ಪ್ರಭು ಯೇಸುವಿನ ನಾಮಕ್ಕೂ ಮತ್ತು ಅವರಲ್ಲಿ ನಿಮಗೂ ಮಹಿಮೆಯುಂಟಾಗಲಿ. ನಮ್ಮ ದೇವರ ಹಾಗು ಪ್ರಭು ಯೇಸುಕ್ರಿಸ್ತರ ಅನುಗ್ರಹದಿಂದ ಇದು ನೆರವೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಲೆಂದು ಮತ್ತು ನೀವೂ ಆತನಲ್ಲಿ ಮಹಿಮೆ ಹೊಂದಲೆಂದು ನಾವು ಪ್ರಾರ್ಥಿಸುತ್ತೇವೆ. ಆ ಮಹಿಮೆಯು ನಮ್ಮ ದೇವರ ಮತ್ತು ಪ್ರಭು ಯೇಸು ಕ್ರಿಸ್ತನ ಕೃಪೆಯಿಂದ ಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಮ್ಮ ದೇವರ ಹಾಗೂ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯ ಅನುಸಾರವಾಗಿ, ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದಬೇಕು. ಮಾತ್ರವಲ್ಲದೇ ನೀವು ಕೂಡಾ ಅವರಲ್ಲಿ ಮಹಿಮೆ ಹೊಂದಬೇಕು ಎಂದು ಬೇಡಿಕೊಳ್ಳುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಅಶೆ ಅಮ್ಚ್ಯಾ ಧನಿಯಾ ಜೆಜುಚ್ಯಾ ನಾವಾಕ್ ತುಮ್ಚ್ಯಾ ವೈನಾ ಮಹಿಮಾ ಗಾವುಂದಿತ್, ಅನಿ ಅಮ್ಚ್ಯಾ ದೆವಾಚ್ಯಾ ಅನಿ ಧನಿಯಾ ಜೆಜು ಕ್ರಿಸ್ತಾಚ್ಯಾ ಕುರ್ಪೆ ವೈನಾ ತುಮ್ಕಾ ಮಹಿಮಾ ಗಾವುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:12
21 ತಿಳಿವುಗಳ ಹೋಲಿಕೆ  

ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ನನ್ನದೆಲ್ಲಾ ನಿನ್ನದೇ, ನಿನ್ನದೆಲ್ಲಾ ನನ್ನದೇ; ಮತ್ತು ಇವರಿಂದ ನನಗೆ ಮಹಿಮೆ ಉಂಟಾಗಿದೆ.


ಆತನು ಬಲಹೀನಾವಸ್ಥೆಯಲ್ಲಿದ್ದದರಿಂದ ಶಿಲುಬೆಗೆ ಹಾಕಲ್ಪಟ್ಟನು ನಿಜ; ಆದರೂ ದೇವರ ಬಲದಿಂದ ಬದುಕುತ್ತಾನೆ. ನಾವು ಸಹ ಆತನ ಬಲಹೀನಾವಸ್ಥೆಯಲ್ಲಿ ಪಾಲುಗಾರರಾಗಿದ್ದೇವೆ; ಆದರೂ ಆತನೊಂದಿಗೆ ದೇವರ ಬಲದಿಂದ ಬದುಕುವವರಾಗಿದ್ದೇವೆ; ಇದು ನಿಮಗೆ ತೋರಿಬರುವದು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದು ತಾನು ಬಡತನದಲ್ಲಿ ಸೇರುವದರಿಂದ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಬಡವನಾದನು.


ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿವಿುತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.


ಇದರಲ್ಲಿ ನನ್ನ ಉದ್ದೇಶವೇನಂದರೆ - ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು ನೇಮನಿಷ್ಠೆಗಳ ಫಲವಾಗಿರುವ ಸ್ವನೀತಿಯನ್ನಾಶ್ರಯಿಸದೆ ಕ್ರಿಸ್ತನನ್ನು ನಂಬುವದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿ ಕಾಣಿಸಿಕೊಳ್ಳಬೇಕೆಂಬದೇ.


ರೋಮಾಪುರದಲ್ಲಿ ದೇವರಿಗೆ ಪ್ರಿಯರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರೆಲ್ಲರಿಗೆ ಬರೆಯುವದೇನಂದರೆ - ನಮ್ಮ ತಂದೆಯಾಗಿರುವ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ಇಸ್ರಾಯೇಲಿಗೋ ಯೆಹೋವನಿಂದ ಶಾಶ್ವತರಕ್ಷಣೆ ದೊರೆಯುವದು; ಯುಗಯುಗಾಂತರಕ್ಕೂ ನೀವು ನಾಚಿಕೆಗೀಡಾಗುವದಿಲ್ಲ, ಮಾನಭಂಗಪಡುವದಿಲ್ಲ.


ಅವನ ನಾಮವು ಸ್ಥಿರವಾಗಿರಲಿ; ಅವನ ಹೆಸರು ಸೂರ್ಯನಿರುವವರೆಗೆ ಇರಲಿ. ಎಲ್ಲಾ ಜನಾಂಗಗಳವರು ಅವನನ್ನು ಧನ್ಯನೆಂದು ಹೇಳಿ ಅವನಿಗಿದ್ದ ಆಶೀರ್ವಾದವು ತಮಗೂ ಆಗಬೇಕೆಂದು ಕೋರುವವರಾಗಲಿ.


ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ;


ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟುಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು;


ಇಸ್ರಾಯೇಲಿನ ಸಮಸ್ತ ಸಂತತಿಯವರೂ ಯೆಹೋವನ ಮೂಲಕ ಸತ್ಯವಂತರಾಗಿ ಆತನಲ್ಲಿ ಆನಂದಿಸುವರು ಎಂದು ನನ್ನ ವಿಷಯವಾಗಿ ಜನರು ಅಂದುಕೊಳ್ಳುತ್ತಾರೆ.


ಮೂಡಣವರೇ, ಯೆಹೋವನನ್ನು ಸನ್ಮಾನಿಸಿರಿ; ಕರಾವಳಿಯವರೇ, ಇಸ್ರಾಯೇಲ್ಯರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ ಎಂದು ಕೂಗುವರು.


ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು