Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:4 - ಕನ್ನಡ ಸತ್ಯವೇದವು J.V. (BSI)

4 ಹೀಗಿರುವದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಸಂಕಟಗಳಲ್ಲಿಯೂ ತೋರಿ ಬಂದ ನಿಮ್ಮ ತಾಳ್ಮೆ ನಂಬಿಕೆಗಳನ್ನು ನೆನಸಿ ನಿಮ್ಮ ವಿಷಯವಾಗಿ ಹೆಚ್ಚಳಪಟ್ಟು ದೇವರ ಸಭೆಗಳೊಳಗೆ ನಾವೇ ಮಾತಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರುವುದರಿಂದ ನಿಮಗೆ ಬಂದಿರುವ ಎಲ್ಲಾ ಹಿಂಸೆಗಳಲ್ಲಿಯೂ ನೀವು ಅನುಭವಿಸುತ್ತಿರುವ ಎಲ್ಲಾ ಸಂಕಟಗಳಲ್ಲಿಯೂ ತೋರಿಬಂದ ನಿಮ್ಮ ತಾಳ್ಮೆ ನಂಬಿಕೆಗಳ ನಿಮಿತ್ತ ದೇವ ಜನರ ಸಭೆಗಳಲ್ಲಿ ನಾವೇ ಹೆಮ್ಮೆಯಿಂದ ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯಾವಾಗಲೂ ಸಹನೆಯಿಂದಲೂ ಸ್ಥಿರ ವಿಶ್ವಾಸದಿಂದಲೂ ನಿಮಗೆ ಬಂದೊದಗಿರುವ ಕಷ್ಟಸಂಕಟಗಳನ್ನೂ ಚಿತ್ರಹಿಂಸೆಗಳನ್ನೂ ಅನುಭವಿಸುತ್ತಿದ್ದೀರಿ. ಅದಕ್ಕಾಗಿ ದೇವರ ಸಭೆಗಳಲ್ಲಿ ನಿಮ್ಮನ್ನು ಕುರಿತು ನಾವು ಹೆಮ್ಮೆಯಿಂದ ಮಾತನಾಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೇವರ ಇತರ ಸಭೆಗಳಲ್ಲಿ ನಿಮ್ಮನ್ನು ಕುರಿತು ಹೆಚ್ಚಳಪಡುತ್ತೇವೆ. ನಿಮ್ಮಲ್ಲಿರುವ ನಂಬಿಕೆ ಮತ್ತು ಸಹನೆಗಳನ್ನು ಕುರಿತು ಇತರ ಸಭೆಗಳಿಗೆ ಹೇಳುತ್ತೇವೆ. ನೀವು ಹಿಂಸೆಗೆ ಒಳಗಾಗಿದ್ದರೂ ಅನೇಕ ಸಂಕಟಗಳನ್ನು ಅನುಭವಿಸುತ್ತಿದ್ದರೂ ನಂಬಿಕೆಯಿಂದಲೂ ಸಹನೆಯಿಂದಲೂ ಜೀವಿಸುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತ್ಯೆಚೆಸಾಟಿಚ್ ತುಮಿ ಕವ್ಡ್ಯಾ ತರಾಸಾನ್ ಅನಿ ಕಸ್ಟಾನ್ ತುಮ್ಚೊ ವಿಶ್ವಾಸ್ ಚಾಲ್ವುನ್ ಘೆವ್ನ್ ಯೆಲ್ಯಾಶಿ, ಅನಿ ಕಸ್ಲೊ ಕಸ್ಟ್ ಅನಿ ತರಾಸ್ ತುಮಿ ವಿಶ್ವಾಸಾನ್ ಸೊಸುಲ್ಯಾಸಿ ಮನ್ತಲ್ಯಾ ವಿಶಯಾತ್, ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ಬೊಲುಕ್ ಅಮ್ಕಾ ಅಭಿಮಾನ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:4
24 ತಿಳಿವುಗಳ ಹೋಲಿಕೆ  

ದೇವರ ಚಿತ್ತವನ್ನು ನೆರವೇರಿಸಿ ವಾಗ್ದಾನದ ಫಲವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಬೇಕು.


ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.


ನಮ್ಮ ಕರ್ತನಾದ ಯೇಸು ಪ್ರತ್ಯಕ್ಷನಾಗುವಾಗ ಆತನ ಮುಂದೆ ನಮ್ಮ ಭರವಸವೂ ನಮ್ಮ ಸಂತೋಷವೂ ನಾವು ಹೊಗಳಿಕೊಳ್ಳುವ ಜಯಮಾಲೆಯೂ ಯಾರು? ನೀವೇ ಅಲ್ಲವೇ.


ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದ ಎಲ್ಲಾ ಮಾತುಗಳು ಹೇಗೆ ಸತ್ಯವಾಗಿದ್ದವೋ ಹಾಗೆ ನಾವು ತೀತನ ಮುಂದೆ ಆಡಿದ ಹೊಗಳಿಕೆಯ ಮಾತುಗಳೂ ಸತ್ಯವೆಂದು ಕಂಡುಬಂದವು.


ಇದರಲ್ಲಿ ದೇವರ ಆಜ್ಞೆಗಳನ್ನೂ ಯೇಸುವಿನ ಮೇಲಣ ನಂಬಿಕೆಯನ್ನೂ ಕೈಕೊಂಡು ನಡೆಯುತ್ತಿರುವ ದೇವಜನರ ತಾಳ್ಮೆಯು ತೋರಿಬರುತ್ತದೆ.


ಆದರೂ ಕರ್ತನು ಪ್ರತಿಯೊಬ್ಬನಿಗೆ ಯಾವ ಯಾವ ಸ್ಥಿತಿಯನ್ನು ನೇವಿುಸಿದ್ದಾನೋ, ಅಂದರೆ ದೇವರು ಕರೆಯುವಾಗ ಪ್ರತಿಯೊಬ್ಬನು ಯಾವ ಯಾವ ಸ್ಥಿತಿಯಲ್ಲಿ ಇದ್ದಾನೋ ಆಯಾ ಸ್ಥಿತಿಗೆ ಸರಿಯಾಗಿ ನಡೆದುಕೊಳ್ಳಲಿ. ಹೀಗೆ ಎಲ್ಲಾ ಸಭೆಗಳಲ್ಲಿಯೂ ಆಜ್ಞಾಪಿಸುತ್ತೇನೆ.


ಜ್ಞಾನಕ್ಕೆ ದಮೆಯನ್ನೂ ದಮೆಗೆ ತಾಳ್ಮೆಯನ್ನೂ


ತಾಳಿಕೊಂಡಿರುವವರನ್ನು ಧನ್ಯರೆಂದು ಹೇಳುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಕರುಣಾಸಾಗರನೂ ದಯಾಳುವೂ ಆಗಿದ್ದಾನೆಂದು ತಿಳಿದಿದ್ದೀರಷ್ಟೆ.


ಆ ವಾಗ್ದಾನದ ಫಲಕ್ಕೋಸ್ಕರ ಅಬ್ರಹಾಮನು ಬಹು ದಿವಸ ಕಾದುಕೊಂಡಿದ್ದು ಆ ಫಲವನ್ನು ದೇವರು ಹೇಳಿದ ಹಾಗೆಯೇ ಹೊಂದಿದನು.


ದೇವರ ಪ್ರೀತಿಯಲ್ಲಿಯೂ ಕ್ರಿಸ್ತನ ತಾಳ್ಮೆಯಲ್ಲಿಯೂ ಸೇರುವಂತೆ ಕರ್ತನೇ ನಿಮ್ಮನ್ನು ನಡಿಸಲಿ.


ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬದನ್ನು ಕಾಣುವಾಗ ನಮಗೆ ಇಂಥ ಭರವಸವಿದ್ದದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವದೆಂದು ನಾವು ಬೇರೆ ಹೇಳಬೇಕೇ.


ನಿಮ್ಮ ಮನಸ್ಸು ಸಿದ್ಧವಾಗಿದೆ ಎಂಬದು ನನಗೆ ಗೊತ್ತುಂಟು. ಒಂದು ವರುಷದ ಹಿಂದೆ ಅಖಾಯದವರು ಸಹಾಯಮಾಡುವದಕ್ಕೆ ಸಿದ್ಧವಾಗಿದ್ದರೆಂದು ಮಕೆದೋನ್ಯದವರ ಮುಂದೆ ನಿಮ್ಮನ್ನು ಹೊಗಳುತ್ತಾ ಇದ್ದೇನೆ. ಮತ್ತು ನಿಮ್ಮ ಆಸಕ್ತಿಯು ಅವರಲ್ಲಿ ಬಹುಜನರನ್ನು ಪ್ರೇರೇಪಿಸಿತು.


ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ.


ಆದರೆ ಕಾಣದಿರುವದನ್ನು ನಾವು ಎದುರುನೋಡುವವರಾಗಿದ್ದರೆ ತಾಳ್ಮೆಯಿಂದ ಕಾದುಕೊಂಡಿರುವೆವು.


ಯಾರು ಪ್ರಭಾವ ಮಾನ ನಿರ್ಲಯತ್ವಗಳನ್ನು ಹೊಂದಬೇಕೆಂದು ಒಳ್ಳೇದನ್ನು ಬೇಸರಗೊಳ್ಳದೆ ಮಾಡುತ್ತಾರೋ ಅವರಿಗೆ ನಿತ್ಯಜೀವವನ್ನು ಕೊಡುವನು.


ನಿಮ್ಮಲ್ಲಿ ನನಗೆ ಬಹಳ ಭರವಸ ಉಂಟು; ನಿಮ್ಮ ವಿಷಯದಲ್ಲಿ ನನ್ನ ಉತ್ಸಾಹ ಬಹಳ; ಪರಿಪೂರ್ಣ ಆದರಣೆ ನನಗಾಯಿತು; ನಮಗಾಗುವ ಎಲ್ಲಾ ಸಂಕಟಗಳಲ್ಲಿ ಅತ್ಯಧಿಕವಾದ ಸಂತೋಷದಿಂದ ತುಂಬಿದ್ದೇನೆ.


ಆದದರಿಂದ ಕ್ರಿಸ್ತನ ನಿವಿುತ್ತ ನನಗೆ ನಿರ್ಬಲಾವಸ್ಥೆಯೂ ತಿರಸ್ಕಾರವೂ ಕೊರತೆಯೂ ಹಿಂಸೆಯೂ ಇಕ್ಕಟ್ಟೂ ಸಂಭವಿಸಿದಾಗ ಸಂತುಷ್ಟನಾಗಿದ್ದೇನೆ. ನಾನು ಯಾವಾಗ ನಿರ್ಬಲನಾಗಿದ್ದೇನೋ ಆವಾಗಲೇ ಬಲವುಳ್ಳವನಾಗಿದ್ದೇನೆ.


ನೀವು ಮಂದಮತಿಗಳಾಗಿರದೆ ಯಾರು ವಾಗ್ದಾನಗಳನ್ನು ನಂಬಿ ಅವುಗಳ ಫಲಕ್ಕೋಸ್ಕರ ಬಹು ದಿವಸಗಳವರೆಗೂ ಕಾದಿದ್ದು ಆ ಫಲವನ್ನು ಹೊಂದುತ್ತಾರೋ ಅವರನ್ನು ಅನುಸರಿಸುವವರಾಗಬೇಕೆಂದು ಕೋರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು