Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 1:8 - ಕನ್ನಡ ಸತ್ಯವೇದವು J.V. (BSI)

8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ವಿಧೇಯರಾಗದವರಿಗೂ ಪ್ರತಿಕಾರ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭು ಯೇಸು ಪರಲೋಕದಿಂದ ಬೆಂಕಿಯ ಜ್ವಾಲೆಗಳೊಡನೆ ಪ್ರತ್ಯಕ್ಷನಾದಾಗ ದೇವರನ್ನು ತಿಳಿದಿಲ್ಲದವರಿಗೂ ಸುವಾರ್ತೆಗೆ ವಿಧೇಯರಾಗಿಲ್ಲದವರಿಗೂ ದಂಡನೆಯನ್ನು ಬರಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಧನಿ ಜೆಜು ಕ್ರಿಸ್ತ್ ಎಕ್ ಪೆಟ್ತಲ್ಯಾ ಆಗಿಚ್ಯಾ ವಾಂಗ್ಡಾ ಯೆತಾ, ಅನಿ ಜೆ ಕೊನ್ ದೆವಾಕ್ ಸ್ವಿಕಾರ್ ಕರಿನಾ, ಅನಿ ಧನಿಯಾ ಜೆಜುಚ್ಯಾ ಬರ್‍ಯಾ ಖಬ್ರೆಕ್ ಮಾನುನ್ ಘೆವ್ನ್ ಚಲಿನಸಲ್ಲ್ಯಾಕ್ನಿ ಶಿಕ್ಷಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 1:8
59 ತಿಳಿವುಗಳ ಹೋಲಿಕೆ  

ನ್ಯಾಯವಿಚಾರಣೆಯ ಸಮಯ ಬಂದದೆ; ಆ ವಿಚಾರಣೆಯು ದೇವರ ಮನೆಯಲ್ಲಿಯೇ ಪ್ರಾರಂಭವಾಯಿತಲ್ಲಾ. ಅದು ನಮ್ಮಲ್ಲಿ ಪ್ರಾರಂಭವಾಗಲು ದೇವರ ಸುವಾರ್ತೆಯನ್ನು ನಂಬಲೊಲ್ಲದವರ ಗತಿ ಏನಾಗಬಹುದು?


ಆದರೆ ಈಗಿರುವ ಭೂಮ್ಯಾಕಾಶಗಳು ಅದೇ ವಾಕ್ಯದ ಬಲದಿಂದ ಬೆಂಕಿಯ ಮೂಲಕ ನಾಶವಾಗುವದಕ್ಕೆ ಇಡಲ್ಪಟ್ಟಿವೆ; ಮತ್ತು ಭಕ್ತಿಹೀನರ ಶಿಕ್ಷಾವಿಧಿಯೂ ನಾಶವೂ ಉಂಟಾಗುವ ದಿನಕ್ಕಾಗಿ ಆ ಬೆಂಕಿ ಸಿದ್ಧವಾಗಿದೆ.


ಅತ್ಯಂತ ಭಯದಿಂದ ಎದುರುನೋಡತಕ್ಕ ನ್ಯಾಯತೀರ್ಪೂ ದೇವರ ವಿರೋಧಿಗಳನ್ನು ದಹಿಸುವ ತೀಕ್ಷ್ಣವಾದ ಅಗ್ನಿಯೂ ಇವೇ ನಮ್ಮ ಮುಂದೆ ಇರುವವು.


ನಿನ್ನನ್ನು ಅರಿಯದ ಮ್ಲೇಚ್ಫರ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ರಾಜ್ಯಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು.


ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನೆಂದು ಹೇಳಿದಾತನನ್ನು ಬಲ್ಲೆವು; ಇದಲ್ಲದೆ ಕರ್ತನು ತನ್ನ ಜನರ ನ್ಯಾಯವನ್ನು ವಿಚಾರಿಸುವನೆಂತಲೂ ಹೇಳಿಯದೆ.


ಈ ಅತ್ಯಂತ ವಿಶೇಷ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲ್ಪಟ್ಟಿತು; ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು;


ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.


ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; [ನಂಬಿಕೆಯೆಂಬ] ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ.


ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಯಾಕಂದರೆ ನಮ್ಮ ದೇವರು ದಹಿಸುವ ಅಗ್ನಿಯಾಗಿದ್ದಾನೆ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಇದಲ್ಲದೆ ದೇವರ ಜ್ಞಾನವು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡಿಸುವವರಾಗುವಂತೆ ದೇವರು ಅವರನ್ನು ಅನಿಷ್ಟಭಾವಕ್ಕೆ ಒಪ್ಪಿಸಿದನು.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಯೆಹೋವನನ್ನು ಆಶ್ರಯಿಸದೆ ಯೆಹೋವನ ದರ್ಶನವನ್ನು ಬಯಸದೆ ಯೆಹೋವನ ಮಾರ್ಗಬಿಟ್ಟವರನ್ನೂ ಧ್ವಂಸಪಡಿಸುವೆನು.


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.


ನನ್ನ ಸುದ್ದಿಯನ್ನು ಕೇಳಿದ ಮಾತ್ರಕ್ಕೆ ನನಗೆ ವಿಧೇಯರಾಗುವರು; ದೇಶಾಂತರದವರು ನನ್ನ ಮುಂದೆ ಮುದುರಿಕೊಳ್ಳುವರು.


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು ಬೆಟ್ಟವನ್ನು ಹತ್ತದೆಹೋಗಲಾಗಿ ನಾನು ಯೆಹೋವನಿಗೂ ನಿಮಗೂ ನಡುವೆ ನಿಂತು ಆತನು ಆಡಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನಂದರೆ -


ಮೇಲೆ ಹೇಳಿದ ಎಲ್ಲಾ ಕಷ್ಟಗಳು ನಿಮಗೆ ಸಂಭವಿಸಿ ನೀವು ಸಂಕಟದಲ್ಲಿರುವಾಗ ಅಂತ್ಯದಲ್ಲಿ ನೀವು ಆತನ ಕಡೆಗೆ ತಿರುಗಿಕೊಂಡು ಆತನ ಮಾತಿಗೆ ಕಿವಿಗೊಡುವಿರಿ.


ಆ ದಿನದಲ್ಲಿ ನೀವು ಹತ್ತಿರ ಬಂದು ಬೆಟ್ಟದ ಬುಡದಲ್ಲಿ ನಿಂತುಕೊಂಡಿರಲು ಮೊಬ್ಬೂ ಮೋಡವೂ ಕಾರ್ಗತ್ತಲೂ ಕವಿದು ಆ ಬೆಟ್ಟವು ಆಕಾಶದ ತುದಿಯವರೆಗೂ ಬೆಂಕಿಯಿಂದ ಉರಿದದ್ದೂ;


ಅದಕ್ಕೆ ಫರೋಹನು - ಯೆಹೋವನೆಂಬವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲ್ಯರನ್ನು ಹೋಗಗೊಡಿಸುವದೇಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ ಇಸ್ರಾಯೇಲ್ಯರು ಹೊರಟುಹೋಗುವದಕ್ಕೆ ನಾನು ಒಪ್ಪುವದೇ ಇಲ್ಲ ಅಂದನು.


ಅದಲ್ಲದೆ ಜೀವವೃಕ್ಷಕ್ಕೆ ಹೋಗುವ ದಾರಿಯನ್ನು ಕಾಯುವದಕ್ಕೆ ಆತನು ಏದೆನ್ ವನದ ಪೂರ್ವದಿಕ್ಕಿನಲ್ಲಿ ಕೆರೂಬಿಯರನ್ನೂ ಧಗಧಗನೆ ಪ್ರಜ್ವಲಿಸುತ್ತಾ ಸುತ್ತುವ ಕತ್ತಿಯನ್ನೂ ಇರಿಸಿದನು.


ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು ಎಂದು ಬರೆದದೆ. ನೀವು ಸಾರಳ ಕುಮಾರ್ತೆಗಳಾಗಿದ್ದೀರಲ್ಲಾ.


ಪವಿತ್ರಾತ್ಮನಿಂದ ಪ್ರತಿಷ್ಠಿಸಲ್ಪಟ್ಟವರಾಗಿ ದೇವರಿಗೆ ವಿಧೇಯರಾಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗುವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನುಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.


ನಂಬಿಕೆಯಿಂದಲೇ ಅಬ್ರಹಾಮನು ಕರೆಯಲ್ಪಟ್ಟ ಕೂಡಲೆ ಕರೆದಾತನ ಮಾತನ್ನು ಕೇಳಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ಸ್ಥಳಕ್ಕೆ ಹೊರಟು ಹೋದನು; ತಾನು ಹೋಗಬೇಕಾದ ಸ್ಥಳವು ಯಾವದೆಂದು ತಿಳಿಯದೆ ಹೊರಟನು.


ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.


ಎಲೈ ಬುದ್ಧಿಯಿಲ್ಲದ ಗಲಾತ್ಯದವರೇ, ಯಾರು ನಿಮ್ಮನ್ನು ಮರುಳುಗೊಳಿಸಿದರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿ ವರ್ಣಿಸಲ್ಪಟ್ಟನಲ್ಲವೇ.


ನಾವು ವಿತರ್ಕಗಳನ್ನೂ ದೇವಜ್ಞಾನವನ್ನು ವಿರೋಧಿಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದ ಎಲ್ಲಾ ಕೊತ್ತಲಗಳನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು


ಇಂಥ ಅಮಲಿನಿಂದೆಚ್ಚತ್ತು ನೀತಿವಂತರಾಗಿರಿ, ಪಾಪವನ್ನು ಬಿಟ್ಟುಬಿಡಿರಿ. ಕೆಲವರಿಗೆ ದೇವರ ವಿಷಯದಲ್ಲಿ ಜ್ಞಾನವೇ ಇಲ್ಲ; ನಿಮಗೆ ನಾಚಿಕೆ ಹುಟ್ಟಬೇಕೆಂದು ಇದನ್ನು ಹೇಳುತ್ತೇನೆ.


ಕ್ರಿಸ್ತನು ಅನ್ಯಜನಗಳನ್ನು ತನಗೆ ಅಧೀನಮಾಡಿಕೊಳ್ಳುವದಕ್ಕಾಗಿ ನನ್ನ ಕೈಯಿಂದ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಸೂಚಕಕಾರ್ಯ ಅದ್ಭುತಕಾರ್ಯಗಳ ಬಲದಿಂದಲೂ ಪವಿತ್ರಾತ್ಮನ ಬಲದಿಂದಲೂ ಮಾಡಿಸಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವದಕ್ಕೆ ನನಗೆ ಧೈರ್ಯಸಾಲದು.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಆತನ ಹೆಸರಿನ ಪ್ರಸಿದ್ಧಿಗಾಗಿ ಎಲ್ಲಾ ಅನ್ಯಜನಗಳಲ್ಲಿ ನಂಬಿಕೆಯೆಂಬ ವಿಧೇಯತ್ವ ಉಂಟಾಗುವದಕ್ಕೋಸ್ಕರ ನಾವು ಆತನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದೆವು.


ಅವರು - ನಿನ್ನ ತಂದೆ ಎಲ್ಲಿದ್ದಾನೆ? ಎಂದು ಕೇಳಲು ಯೇಸು - ನೀವು ನನ್ನನ್ನೂ ತಿಳಿದಿಲ್ಲ, ನನ್ನ ತಂದೆಯನ್ನೂ ತಿಳಿದಿಲ್ಲ; ನನ್ನನ್ನು ತಿಳಿದಿದ್ದರೆ ನನ್ನ ತಂದೆಯನ್ನೂ ತಿಳಿದಿರುವಿರಿ ಅಂದನು.


ನಿಮ್ಮ ನಿವಾಸವು ಮೋಸದೊಳಗೇ ಇದೆ; ಅಯ್ಯೋ, ಮೋಸಗಾರರಾಗಿರುವದರಿಂದ ನನ್ನನ್ನು ಅರಿಯಲೊಲ್ಲರು ಎಂದು ಯೆಹೋವನು ಅನ್ನುತ್ತಾನೆ.


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ;


ಯೆಹೋವನೇ, ನಿನ್ನ ನಾಮಮಹಿಮೆಯನ್ನು ಬಲ್ಲವರು ನಿನ್ನಲ್ಲಿ ಭರವಸವಿಡುವರು; ಯಾಕಂದರೆ ನಿನ್ನ ಮರೆಹೊಗುವವರನ್ನು ನೀನು ಕೈಬಿಡುವವನಲ್ಲ.


ಏಲಿಯ ಮಕ್ಕಳು ಬಹುದುಷ್ಟರಾಗಿದ್ದರು; ಅವರು ಯೆಹೋವನನ್ನು ಲಕ್ಷಿಸುತ್ತಿರಲಿಲ್ಲ.


ಆದರೆ ದ್ರೋಹಿಗಳೂ ಪಾಪಿಗಳೂ ಒಟ್ಟಾಗಿ ನಾಶನವಾಗುವರು; ಹೌದು, ಯೆಹೋವನನ್ನು ತೊರೆದವರು ನಿರ್ಮೂಲರಾಗುವರು.


ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು