Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:2 - ಕನ್ನಡ ಸತ್ಯವೇದವು J.V. (BSI)

2 ಕರ್ತನ ದಿನವು ಈಗಲೇ ಹತ್ತಿರವಾಯಿತೆಂಬದಾಗಿ ದೇವರಾತ್ಮಪ್ರೇರಿತವಾದ ನುಡಿ ಇದೆ ಎಂದಾಗಲಿ ಪೌಲನು ಹಾಗೆ ಹೇಳಿದನೆಂದಾಗಲಿ ಪೌಲನು ಹಾಗೆ ಬರೆದನೆಂದಾಗಲಿ ಯಾರಾದರೂ ಹೇಳಿದರೂ ನೀವು ಬೇಗನೆ ಬುದ್ಧಿಗೆಟ್ಟು ಚಂಚಲರಾಗಿ ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಪ್ರಭುವಿನ ದಿನವು ಬಂದೇಬಿಟ್ಟಿತೆಂದು ಪ್ರವಾದನೆಯಿಂದಾಗಲಿ, ಪ್ರವಚನದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದುಬಂದಿದೆಯೆಂದು ಯಾರಾದರೂ ಹೇಳಿದರೆ, ಒಮ್ಮೆಗೇ ನೀವು ತಬ್ಬಿಬ್ಬಾಗಿ, ತಳಮಳಗೊಳ್ಳದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಭುವಿನ ದಿನವು ಈಗಾಗಲೇ ಬಂದುಬಿಟ್ಟಿತು ಎಂದು ಯಾರಾದರು ನಿಮಗೆ ಹೇಳಿದರೆ ಆ ಕೂಡಲೇ ಕಳವಳಗೊಳ್ಳಬೇಡಿ ಅಥವಾ ಭಯಪಡಬೇಡಿ. ಯಾವನಾದರೂ ತನ್ನ ಪ್ರವಾದನೆಯಲ್ಲಾಗಲಿ ಉಪದೇಶದಲ್ಲಾಗಲಿ ಹಾಗೆ ಹೇಳುವ ಸಾಧ್ಯತೆ ಇದೆ. ಯಾವನಾದರೂ ಸುಳ್ಳುಪತ್ರವನ್ನೇ ನಮ್ಮ ಹೆಸರಿನಲ್ಲಿ ತಾನೇ ಬರೆದು ನಿಮ್ಮ ಮುಂದೆ ಓದಿ ತಿಳಿಸುವ ಸಾಧ್ಯತೆಯೂ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸುವಿನ ದಿನವು ಈಗಾಗಲೇ ಬಂದಿದೆಯೆಂದು ಪ್ರವಾದನೆಯಿಂದಾಗಲಿ, ಪ್ರಸಂಗದಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ತಿಳಿದು ನೀವು ಬೇಗನೆ ಚಂಚಲರಾಗಿ ಕಳವಳಪಡಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಧನಿಯಾಚೊ ದಿಸ್ ಯೆಲಾ ಮನುನ್ ಕೊನ್ ತರ್ ಸಾಂಗಟ್ಲ್ಯಾರ್ ತುಮಿ ಎಗ್ದಮ್ ಗೊಂದ್ಳುನಕಾಸಿ, ಕಶ್ಯಾಕ್ ಮಟ್ಲ್ಯಾರ್, ಅಮಿ ಪ್ರಚಾರಾಚ್ಯಾ ವೈನಾ ಅನಿ ಚಿಟಿ ಲಿವ್ತಲ್ಯಾ ವೈನಾ ಹೆಚ್ಯಾ ವಿಶಯಾತ್ ಶಿಕ್ವುಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:2
27 ತಿಳಿವುಗಳ ಹೋಲಿಕೆ  

ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವದು ಅಗತ್ಯ; ಆದರೂ ಇದು ಇನ್ನೂ ಅಂತ್ಯಕಾಲವಲ್ಲ.


ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ; ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ಗುರುತು; ಹೀಗೆಯೇ ನನ್ನ ಕೈಬರಹ.


ಇದಲ್ಲದೆ ಯುದ್ಧಗಳೂ ಗಲಿಬಿಲಿಗಳೂ ಆಗುವದನ್ನು ನೀವು ಕೇಳುವಾಗ ದಿಗಿಲುಪಡಬೇಡಿರಿ; ಯಾಕಂದರೆ ಇದೆಲ್ಲಾ ಮೊದಲು ಆಗುವದು ಅಗತ್ಯ; ಆದರೂ ಕೂಡಲೆ ಅಂತ್ಯ ಬರುವದಿಲ್ಲ ಅಂದನು.


ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ ಕರ್ತನು ಪ್ರತ್ಯಕ್ಷನಾಗುವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ


ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ನಿಮ್ಮ ಸೈರಣೆಯಿಂದ ನಿಮ್ಮ ಪ್ರಾಣಗಳನ್ನು ಪಡಕೊಳ್ಳುವಿರಿ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಗಾಳಿಯನ್ನೂ ಮೋಸವನ್ನೂ ಹಿಂಬಾಲಿಸುವ ಸುಳ್ಳುಗಾರನೊಬ್ಬನು - ನಾನು ದ್ರಾಕ್ಷಾರಸಮದ್ಯಗಳ ವಿಷಯವಾಗಿ ನಿನಗೆ ಪ್ರವಾದನೆಮಾಡುವೆನು ಎಂದು ಹೇಳಿದರೆ ಈ ಜನರು ಅಂಥವನನ್ನು ಪ್ರವಾದಿಯನ್ನಾಗಿ ಸ್ವೀಕರಿಸಿಕೊಳ್ಳುವರು.


ಅರಾಮ್ಯರು ಎಫ್ರಾಯೀಮ್ಯರನ್ನು ಹೊಂದಿಕೊಂಡಿದ್ದಾರೆಂಬ ಸುದ್ದಿಯು ಅರಮನೆಗೆ ಮುಟ್ಟಿದಾಗ ಅರಸನ ಮನವೂ ಪ್ರಜೆಯ ಮನವೂ ಗಾಳಿಯಿಂದ ವನವೃಕ್ಷಗಳು ಅಲ್ಲಾಡುವಂತೆ ನಡುಗಿದವು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.


ಹುರುಳಿಲ್ಲದ ಮಾತುಗಳನ್ನಾಡುವವರಿಗೆ ಕಿವಿಗೊಟ್ಟು ಮೋಸಹೋಗಬೇಡಿರಿ; ಅಂಥ ಕೃತ್ಯಗಳ ನಿವಿುತ್ತದಿಂದ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ ಪತ್ರಿಕೆಯಿಂದಾಗಲಿ ನಿಮಗೆ ತಿಳಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.


ರಾತ್ರಿಕಾಲದಲ್ಲಿ ಕಳ್ಳನು ಹೇಗೆ ಬರುತ್ತಾನೋ ಹಾಗೆಯೇ ಕರ್ತನ ದಿನವು ಬರುವದೆಂದು ನೀವೇ ಚೆನ್ನಾಗಿ ತಿಳಿದಿದ್ದೀರಲ್ಲಾ.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಈಗಿನ ಕಷ್ಟಕಾಲದ ನಿವಿುತ್ತ ಜನರು ಇದ್ದ ಹಾಗೇ ಇರುವದು ಒಳ್ಳೇದೆಂದು ಭಾವಿಸುತ್ತೇನೆ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿ ಅವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು