Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:2 - ಕನ್ನಡ ಸತ್ಯವೇದವು J.V. (BSI)

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ; ಎಲ್ಲರಲ್ಲಿ ಕ್ರಿಸ್ತ ನಂಬಿಕೆಯಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದೇವರು ನಮ್ಮನ್ನು ಮೂರ್ಖರಾದ ದುಷ್ಟಜನರ ಕೈಯಿಂದ ತಪ್ಪಿಸುವ ಹಾಗೆಯೂ ಪ್ರಾರ್ಥಿಸಿರಿ, ಕ್ರಿಸ್ತ ನಂಬಿಕೆಯು ಎಲ್ಲರಲ್ಲಿ ಇರುವುದಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ದುಷ್ಟರ ಹಾಗೂ ಕೆಡುಕರ ಬಲೆಗೆ ನಾವು ಬೀಳದಂತೆ ಪ್ರಾರ್ಥಿಸಿರಿ. ಏಕೆಂದರೆ, ವಿಶ್ವಾಸವೆಂಬುದು ಎಲ್ಲರಲ್ಲಿಯೂ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಕೆಟ್ಟವರಾದ ಮತ್ತು ದುಷ್ಟರಾದ ಜನರ ಕೈಯಿಂದ ನಮ್ಮನ್ನು ರಕ್ಷಿಸುವಂತೆ ದೇವರಲ್ಲಿ ಪ್ರಾರ್ಥಿಸಿ. (ಪ್ರಭುವಿನಲ್ಲಿ ಜನರೆಲ್ಲರೂ ನಂಬಿಕೆಯಿಟ್ಟಿಲ್ಲ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ವಕ್ರಬುದ್ಧಿಯುಳ್ಳ ದುಷ್ಟರ ಕೈಯಿಂದ ನಾವು ತಪ್ಪಿಸಿಕೊಳ್ಳುವಂತೆಯೂ ಪ್ರಾರ್ಥಿಸಿರಿ. ಏಕೆಂದರೆ ಎಲ್ಲರಲ್ಲಿಯೂ ವಿಶ್ವಾಸವಿಲ್ಲವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬುರ್ಸ್ಯಾಪಾನಾತ್ನಾ ಅನಿ ವಾಯ್ಟ್ ಮಾನ್ಸಾನಿತ್ನಾ ಅಮ್ಕಾ ಬಚಾವ್ ಕರ್ ಮನುನ್ ಅಮ್ಚ್ಯಾಸಾಟ್ನಿ ಮಾಗ್ನಿ ಕರಾ, ಕಶ್ಯಾಕ್ ಮಟ್ಲ್ಯಾರ್ ಸಗ್ಳಿ ಲೊಕಾ ಬರಿ ಖಬರ್ ಮಾನುನ್ ಘೆಯ್‍ನಾತ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:2
18 ತಿಳಿವುಗಳ ಹೋಲಿಕೆ  

ದೇವರು ನನ್ನನ್ನು ಯೂದಾಯದಲ್ಲಿರುವ ಅವಿಧೇಯರ ಕೈಗೆ ತಪ್ಪಿಸಬೇಕೆಂತಲೂ ಯೆರೂಸಲೇವಿುಗೋಸ್ಕರ ನಾನು ಮಾಡುವಂಥ ಈ ಧರ್ಮಕಾರ್ಯವು ಅಲ್ಲಿರುವ ದೇವಜನರಿಗೆ ಹಿತಕರವಾಗಿ ತೋರಬೇಕೆಂತಲೂ ಪ್ರಾರ್ಥಿಸಿರಿ.


ಆತನು ಅವರ ವಿಷಯದಲ್ಲಿ ಹೀಗೆ ಅಂದುಕೊಂಡನು - ನಾನು ಅವರಿಗೆ ವಿಮುಖನಾಗಿ ಅವರಿಗೆ ಪ್ರಾಪ್ತವಾಗುವ ಗತಿಯನ್ನು ನೋಡುವೆನು. ಅವರು ಸತ್ಯವನ್ನು ತಿಳಿದೂ ಮಾಡದವರೂ ದ್ರೋಹಿಗಳಾದ ಮಕ್ಕಳೂ ಆಗಿದ್ದಾರೆ.


ಈ ವಿಷಯದಲ್ಲಿ ಯೆಶಾಯನು - ಕರ್ತನೇ, ನಾವು ಸಾರಿದ ವಾರ್ತೆಯನ್ನು ಯಾರು ನಂಬಿದರು ಎಂದು ನುಡಿಯುತ್ತಾನೆ.


ಅವನು ಹೇಳಿದ ಮಾತುಗಳಿಗೆ ಕೆಲವರು ಒಪ್ಪಿಕೊಂಡರು; ಕೆಲವರು ನಂಬದೆ ಹೋದರು.


ಯಾಕಂದರೆ ನಿಮ್ಮ ಬಳಿಗೆ ಬರುವದಕ್ಕೆ ನಮಗೆ ಮನಸ್ಸಿತ್ತು; ಹೇಗೂ ಪೌಲನೆಂಬ ನಾನು ಒಂದೆರಡು ಸಾರಿ ಬರುವದಕ್ಕಿದ್ದೆನು; ಆದರೆ ಸೈತಾನನು ನಮಗೆ ಅಭ್ಯಂತರ ಮಾಡಿದನು.


ಆದರೆ ನಂಬದೆ ಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.


ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಕುಲೀನ ಸ್ತ್ರೀಯರನ್ನೂ ಊರಿನ ಪ್ರಮುಖರನ್ನೂ ಪ್ರೇರಿಸಿ ಪೌಲ ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ಅವರನ್ನು ತಮ್ಮ ಮೇರೆಯಿಂದ ಆಚೆಗೆ ಅಟ್ಟಿದರು.


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಹೀಗಿದ್ದರೂ ಮನುಷ್ಯಕುಮಾರನು ಬಂದಾಗ ಭೂವಿುಯ ಮೇಲೆ ನಂಬಿಕೆಯನ್ನು ಕಾಣುವನೋ? ಅಂದನು.


ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು.


ಅದಕ್ಕೆ ಯೇಸು - ಎಲಾ, ನಂಬಿಕೆಯಿಲ್ಲದಂಥ ಮೂರ್ಖ ಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ದಿನ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಅಂದನು.


ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ ಅನ್ಯಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು; ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.


ನಾನು ಎಫೆಸದಲ್ಲಿ ಮೃಗಗಳೊಂದಿಗೆ ಯುದ್ಧಮಾಡಿದ್ದು ಕೇವಲ ಮಾನುಷಾಭಿಪ್ರಾಯದಿಂದಾದರೆ ನನಗೇನು ಪ್ರಯೋಜನ? ಸತ್ತವರು ಎದ್ದು ಬರುವದಿಲ್ಲವಾದರೆ - ತಿನ್ನೋಣ, ಕುಡಿಯೋಣ, ನಾಳೆ ಸಾಯುತ್ತೇವಲ್ಲಾ.


ಯೆಹೂದ್ಯರು ಹೊಟ್ಟೇಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪೋಕರನ್ನು ಕರೆದುಕೊಂಡು ಬಂದು ಗುಂಪುಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಸೀಲರನ್ನು ಪಟ್ಟಣದ ಸಭೆಗೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.


ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು