Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:3 - ಕನ್ನಡ ಸತ್ಯವೇದವು J.V. (BSI)

3 ಆದರೆ ಕರ್ತನು ನಂಬಿಗಸ್ತನು; ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೆ ಕರ್ತನು ನಂಬಿಗಸ್ತನು, ಆತನು ನಿಮ್ಮನ್ನು ದೃಢಪಡಿಸಿ ನೀವು ಕೆಡುಕನ ಕೈಗೆ ಸಿಕ್ಕದಂತೆ ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆದರೆ ಪ್ರಭುವು ನಂಬಿಗಸ್ತನು. ಆತನು ನಿಮ್ಮನ್ನು ಬಲಗೊಳಿಸುವನು ಮತ್ತು ಕೆಡುಕನಿಂದ (ಸೈತಾನನಿಂದ) ನಿಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೆ ಕರ್ತ ಯೇಸು ನಂಬಿಗಸ್ತರು, ಅವರು ನಿಮ್ಮನ್ನು ದೃಢಪಡಿಸಿ ನಿಮ್ಮನ್ನು ಕೆಡುಕನಿಂದ ತಪ್ಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಖರೆ, ಧನಿ ವಿಶ್ವಾಸಿ,ತೊ ತುಮ್ಕಾ ತಾಕತ್ ದಿತಾ ಅನಿ ವಾಯ್ಟಾನಿತ್ನಾ ರಾಕ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:3
16 ತಿಳಿವುಗಳ ಹೋಲಿಕೆ  

ನಾನು ಯಾವ ದುಷ್ಕೃತ್ಯವನ್ನೂ ಮಾಡದಂತೆ ಕರ್ತನು ನನ್ನನ್ನು ಕಾಪಾಡಿ ತನ್ನ ಬಳಿಗೆ ಪರಲೋಕರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ನಿಮ್ಮನ್ನು ಕರೆಯುವವನು ನಂಬಿಗಸ್ತನು, ಆತನು ತನ್ನ ಕಾರ್ಯವನ್ನು ಸಾಧಿಸುವನು.


ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.


ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.


ದೇವರು ನಂಬಿಗಸ್ತನು; ನಮ್ಮ ಕರ್ತನಾದ ಯೇಸು ಕ್ರಿಸ್ತನೆಂಬ ತನ್ನ ಮಗನ ಅನ್ಯೋನ್ಯತೆಗೆ ನಿಮ್ಮನ್ನು ಕರೆದವನು ಆತನೇ.


ಇವರನ್ನು ಲೋಕದೊಳಗಿಂದ ತೆಗೆದುಕೊಂಡು ಹೋಗಬೇಕೆಂದು ನಾನು ಕೇಳಿಕೊಳ್ಳುವದಿಲ್ಲ; ಕೆಡುಕನಿಂದ ತಪ್ಪಿಸಿ ಕಾಪಾಡಬೇಕೆಂದು ಕೇಳಿಕೊಳ್ಳುತ್ತೇನೆ.


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿಗಳನ್ನಾಗಿ ಹರ್ಷದೊಡನೆ ನಿಲ್ಲಿಸುವದಕ್ಕೂ


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಕರ್ತನು ಭಕ್ತರನ್ನು ಕಷ್ಟಗಳೊಳಗಿಂದ ತಪ್ಪಿಸುವದಕ್ಕೂ ದುರ್ಮಾರ್ಗಿಗಳನ್ನು ನ್ಯಾಯತೀರ್ಪಿನ ದಿನದ ತನಕ ಶಿಕ್ಷಾನುಭವದಲ್ಲಿ ಇಡುವದಕ್ಕೂ ಬಲ್ಲವನಾಗಿದ್ದಾನೆ.


ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.


ಸಕಲ ಸತ್ಕಾರ್ಯದಲ್ಲಿಯೂ ಸದ್ವಾಕ್ಯದಲ್ಲಿಯೂ ದೃಢಪಡಿಸಲಿ.


ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷವಿುಸುತ್ತೇವಾದ್ದರಿಂದ ನಮ್ಮ ಪಾಪಗಳನ್ನು ಕ್ಷವಿುಸು. ನಮ್ಮನ್ನು ಶೋಧನೆಯೊಳಗೆ ಸೇರಿಸಬೇಡ ಎಂದು ಹೇಳಿರಿ ಅಂದನು.


ಆದರೆ ನಿಮ್ಮ ಮಾತು ಹೌದಾದರೆ ಹೌದು, ಅಲ್ಲವಾದರೆ ಅಲ್ಲ, ಎಂದಿರಲಿ; ಇದಕ್ಕಿಂತ ಹೆಚ್ಚಾದದ್ದು ಸೈತಾನನಿಂದ ಬಂದದ್ದು.


ಯಾಬೇಚನು ಇಸ್ರಾಯೇಲ್ ದೇವರಿಗೆ - ನೀನು ನನ್ನನ್ನು ವಿಶೇಷವಾಗಿ ಆಶೀರ್ವದಿಸಿ ನನ್ನ ಪ್ರಾಂತವನ್ನು ವಿಸ್ತರಿಸಿ ನಿನ್ನ ಹಸ್ತದಿಂದ ನನ್ನನ್ನು ಹಿಡಿದು ಯಾವ ವೇದನೆಯೂ ಉಂಟಾಗದಂತೆ ನನ್ನನ್ನು ರಕ್ಷಿಸಬಾರದೇ ಎಂದು ಮೊರೆಯಿಡಲು ದೇವರು ಅವನ ಮೊರೆಯನ್ನು ಲಾಲಿಸಿದನು.


ನನ್ನನ್ನು ಎಲ್ಲಾ ಕೇಡುಗಳಿಂದ ತಪ್ಪಿಸಿ ಕಾಪಾಡುತ್ತಾ ಬಂದ ದೂತನಾಗಿಯೂ ಇರುವಾತನು ಈ ಹುಡುಗರನ್ನು ಆಶೀರ್ವದಿಸಲಿ; ಇವರು ನನ್ನ ಹೆಸರನ್ನೂ ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರ ಹೆಸರುಗಳನ್ನೂ ಮುಂದಕ್ಕೆ ತರಲಿ; ಇವರು ಭೂವಿುಯ ಮೇಲೆ ಹೆಚ್ಚಿ ಬಹುಸಂತಾನವನ್ನು ಪಡೆಯಲಿ ಅಂದನು.


ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು