Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 3:8 - ಕನ್ನಡ ಸತ್ಯವೇದವು J.V. (BSI)

8 ನಾವು ನಿಮ್ಮಲ್ಲಿ ಅಕ್ರಮವಾಗಿ ನಡೆಯಲಿಲ್ಲ; ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟಮಾಡಲಿಲ್ಲ; ನಿಮ್ಮಲ್ಲಿ ಒಬ್ಬರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನಮಾಡಿಕೊಂಡೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪುಕ್ಕಟೆಯಾಗಿ ನಾವು ಯಾರ ಅನ್ನವನ್ನೂ ಉಣ್ಣಲಿಲ್ಲ. ನಿಮ್ಮಲ್ಲಿ ಯಾರಿಗೂ ಹೊರೆಯಾಗಬಾರದೆಂದು ಹಗಲಿರುಳೂ ನಾವೇ ಕಷ್ಟಪಟ್ಟು ದುಡಿದಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಹಣ ಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಯಾರಿಗೂ ತೊಂದರೆಯಾಗಬಾರದೆಂದು ಹಗಲಿರುಳು ಎಡೆಬಿಡದೆ ಕೆಲಸ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾವು ಉಚಿತವಾಗಿ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ. ನಿಮ್ಮಲ್ಲಿ ಒಬ್ಬರಿಗೂ ನಾವು ಭಾರವಾಗಬಾರದೆಂದು ಹಗಲಿರುಳೂ ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಮಿ ಕೊನಾಕ್ನಾಬಿ ಕಾಯ್ಬಿ ಪೈಸೆ ದಿ ನಸ್ತಾನಾ ಫುಕೊಟ್ ಜೆವ್ಕ್ ನಾಂವ್; ಅಮಿ ಕಾಮ್ ಕರ್ಲಾಂವ್ ರಾಬ್ನುಕ್ ಕರ್ಲಾಂವ್. ಅಮಿ ತುಮ್ಚ್ಯಾತ್ಲ್ಯಾ ಕೊನಾಚ್ಯಾ ವರ್‍ತಿಬಿ ಎಕ್ ವಜ್ಜೆ ಹೊತಲೆ ನಕ್ಕೊ ಮನುನ್ ಅಮಿ ದಿಸ್ ರಾತ್ ಕಾಮ್ ಕರ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 3:8
14 ತಿಳಿವುಗಳ ಹೋಲಿಕೆ  

ನಮ್ಮ ಅನುದಿನದ ಆಹಾರವನ್ನು ಈ ಹೊತ್ತೂ ದಯಪಾಲಿಸು.


ಸಹೋದರರೇ, ನಾವು ನಿಮ್ಮಲ್ಲಿ ಯಾರ ಮೇಲೆಯೂ ಭಾರಹಾಕಬಾರದೆಂದು ಹಗಲಿರುಳು ದುಡಿದು ಜೀವನ ಮಾಡಿಕೊಳ್ಳುತ್ತಾ ದೇವರ ಸುವಾರ್ತೆಯನ್ನು ನಿಮಗೆ ಸಾರಿದೆವು; ಆ ನಮ್ಮ ಕಷ್ಟವೂ ಪ್ರಯಾಸವೂ ನಿಮ್ಮ ನೆನಪಿನಲ್ಲಿರುವದಷ್ಟೆ.


ಪೌಲನು ಅವರ ಮನೆಗೆ ಹೋಗಿ ತಾನೂ ಅವರೂ ಒಂದೇ ಕಸಬಿನವರಾಗಿದ್ದದರಿಂದ ಅವರಲ್ಲಿದ್ದು ಅವರೊಂದಿಗೆ ಕೆಲಸಮಾಡುತ್ತಿದ್ದನು; ಗುಡಾರ ಮಾಡುವದು ಅವರ ಕಸಬಾಗಿತ್ತು.


ಇದಲ್ಲದೆ ನಾನು ನಿಮಗೆ ಆಜ್ಞೆಕೊಟ್ಟ ಪ್ರಕಾರ ನೀವು ಮತ್ತೊಬ್ಬರ ಕಾರ್ಯದಲ್ಲಿ ತಲೆಹಾಕದೆ ಸುಮ್ಮಗಿದ್ದು ಸ್ವಂತ ಕಾರ್ಯವನ್ನೇ ನಡಿಸಿಕೊಂಡು ಕೈಯಾರೆ ಕೆಲಸಮಾಡುವದೇ ಮಾನವೆಂದೆಣಿಸಿರಿ.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಮನೆಯಿಲ್ಲದವರೂ ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಬೈಸಿಕೊಂಡು ಹರಸುತ್ತೇವೆ; ಹಿಂಸೆಪಟ್ಟು ಸಹಿಸಿಕೊಳ್ಳುತ್ತೇವೆ; ಅಪಕೀರ್ತಿಹೊಂದಿ ಆದರಿಸುತ್ತೇವೆ.


ಇಂಥವರು ತಮ್ಮ ಕೆಲಸವನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಪ್ರಬೋಧಿಸುತ್ತೇವೆ.


ನಾನು ನಿಮ್ಮಲ್ಲಿದ್ದಾಗ ಖರ್ಚಿಗೆ ಏನೂ ಇಲ್ಲದ ಸಮಯದಲ್ಲಿ ಯಾರ ಮೇಲೆಯೂ ಭಾರ ಹಾಕಲಿಲ್ಲ; ಮಕೆದೋನ್ಯದಿಂದ ಬಂದ ಸಹೋದರರು ನನಗೆ ಬೇಕಾದದ್ದೆಲ್ಲವನ್ನೂ ಕೊಟ್ಟರು. ನಾನು ನಿಮಗೆ ಯಾವದರಲ್ಲಿಯೂ ಭಾರವಾಗಿರಬಾರದೆಂದು ನೋಡಿಕೊಳ್ಳುತ್ತಿದ್ದೆನು, ಇನ್ನು ಮೇಲೆಯೂ ನೋಡಿಕೊಳ್ಳುವೆನು.


ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.


ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.


ಪ್ರತಿದಿನ ಒಂದು ಹೋರಿ ಆರು ಕೊಬ್ಬಿದ ಕುರಿ ಕೆಲವು ಕೋಳಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿವಸಕ್ಕೊಮ್ಮೆ ನಾನು ಎಲ್ಲಾ ತರದ ದ್ರಾಕ್ಷಾರಸವನ್ನು ಬೇಕಾಗುವಷ್ಟು ಒದಗಿಸಿಕೊಡುತ್ತಿದ್ದೆನು. ನನಗೆ ಇಷ್ಟು ವೆಚ್ಚವಾಗುತ್ತಿದ್ದರೂ ಆ ಜನರು ಮಾಡತಕ್ಕ ಕೆಲಸವು ಬಹು ಭಾರವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಆಯವನ್ನು ಕೇಳಲೇ ಇಲ್ಲ.


ಅನ್ನಪಾನಗಳಿಗೆ ನಮಗೆ ಹಕ್ಕಿಲ್ಲವೇ.


ಪ್ರಯಾಸ ಪರಿಶ್ರಮಗಳಿಂದ ಕೆಲಸನಡಿಸಿ ಅನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನು ಪಟ್ಟು ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.


ಆದದರಿಂದ ನಾವು ಯೊರ್ದನಿಗೆ ಹೋಗಿ ಅಲ್ಲಿ ಪ್ರತಿಯೊಬ್ಬನೂ ಒಂದೊಂದು ತೊಲೆಯನ್ನು ಕಡಿದುಕೊಂಡು ಬಂದು ನಮಗೋಸ್ಕರ ಒಂದು ಮನೆಯನ್ನು ಮಾಡಿಕೊಳ್ಳೋಣ ಅಂದರು; ಅವನು ಅವರಿಗೆ ಹೋಗಬಹುದು ಎಂದು ಹೇಳಲು ಅವರಲ್ಲೊಬ್ಬನು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು