2 ಪೂರ್ವಕಾಲ ವೃತ್ತಾಂತ 1:12 - ಕನ್ನಡ ಸತ್ಯವೇದವು J.V. (BSI)12 ಇದಲ್ಲದೆ ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವದಿಲ್ಲ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ನಿನಗಿಂತ ಮೊದಲು ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ, ನಿನ್ನ ತರುವಾಯ ಯಾರಿಗೂ ಇರದಂಥ ಘನ, ಧನ, ಐಶ್ವರ್ಯಗಳನ್ನೂ ಅನುಗ್ರಹಿಸುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ನಿನಗೆ ಜ್ಞಾನವಿವೇಕಗಳನ್ನು ಕೊಡುವೆನು. ಅದರ ಜೊತೆಯಲ್ಲಿ ನಿನಗೆ ಐಶ್ವರ್ಯವನ್ನೂ ಘನತೆಯನ್ನೂ ದಯಪಾಲಿಸುವೆನು. ನಿನಗಿಂತ ಮುಂಚೆ ಇದ್ದ ಯಾವ ಅರಸನಿಗೂ ಇಂಥಾ ಐಶ್ವರ್ಯಗಳಾಗಲಿ ಘನತೆಯಾಗಲಿ ಇರಲಿಲ್ಲ. ಮತ್ತು ಇನ್ನು ಮುಂದೆಯೂ ಯಾವ ರಾಜನಿಗೂ ಇಂಥಾ ಘನತೆ ಮತ್ತು ಐಶ್ವರ್ಯಗಳಿರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು. ಅಧ್ಯಾಯವನ್ನು ನೋಡಿ |