Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:17 - ಕನ್ನಡ ಸತ್ಯವೇದವು J.V. (BSI)

17 ರಥಕ್ಕೆ ಆರುನೂರು ರೂಪಾಯಿಗಳಂತೆಯೂ ಕುದುರೆಗೆ ನೂರೈವತ್ತು ರೂಪಾಯಿಗಳಂತೆಯೂ ಕೊಟ್ಟು ರಥಗಳನ್ನೂ ಕುದುರೆಗಳನ್ನೂ ಐಗುಪ್ತದೇಶದಿಂದ ತರಿಸುತ್ತಿದ್ದರು. ಹೀಗೆಯೇ ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ರಥಕ್ಕೆ ಆರುನೂರು ಬೆಳ್ಳಿ ನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ, ಕುದುರೆಗಳನ್ನೂ ಐಗುಪ್ತ್ಯ ದೇಶದಿಂದ ತರಿಸುತ್ತಿದ್ದರು. ಇವುಗಳನ್ನು ಹಿತ್ತಿಯರ ಮತ್ತು ಅರಾಮ್ಯರ ಅರಸರ ಮುಖಾಂತರವೇ ತರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ರಥಕ್ಕೆ ಆರುನೂರು ಬೆಳ್ಳಿನಾಣ್ಯಗಳಂತೆ, ಕುದುರೆಗೆ ನೂರೈವತ್ತು ಬೆಳ್ಳಿನಾಣ್ಯಗಳಂತೆ ಕೊಟ್ಟು, ರಥಗಳನ್ನೂ ಕುದುರೆಗಳನ್ನೂ ಈಜಿಪ್ಟ್ ದೇಶದಿಂದ ತರಿಸುತ್ತಿದ್ದರು; ಹಿತ್ತಿಯರ ಮತ್ತು ಸಿರಿಯಾದವರ ಎಲ್ಲಾ ಅರಸರು ಇವರ ಮುಖಾಂತರವೇ ತರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೊಲೊಮೋನನ ವ್ಯಾಪಾರಿಗಳು ಈಜಿಪ್ಟಿನಲ್ಲಿ ಒಂದೊಂದು ರಥಕ್ಕೆ ಏಳು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಒಂದೊಂದು ಕುದುರೆಗೆ ಎರಡು ಕಿಲೋಗ್ರಾಂ ತೂಕದ ಬೆಳ್ಳಿಯನ್ನೂ ಕೊಟ್ಟು ಖರೀದಿಸಿ ಅವುಗಳನ್ನು ಹಿತ್ತಿಯರ ಅರಸರಿಗೂ ಅರಾಮ್ಯರ ಅರಸರಿಗೂ ಮಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:17
6 ತಿಳಿವುಗಳ ಹೋಲಿಕೆ  

ಆದರೂ ಅವನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಬೇತೇಲ್, ದಾನ್ ಎಂಬ ಊರುಗಳಲ್ಲಿದ್ದ ಚಿನ್ನದ ಬಸವಗಳನ್ನು ಪೂಜಿಸುತ್ತಿದ್ದನು.


ಐಗುಪ್ತದೇಶದಿಂದ ರಥಗಳನ್ನೂ ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಯಿತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಸಿಕ್ಕುತ್ತಿದ್ದವು.


ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಳೆಯಾಗಿ ಕೊಂಡುಕೊಂಡು ಬರುತ್ತಿದ್ದರು.


ಸೊಲೊಮೋನನು ಯೆಹೋವನ ಹೆಸರಿಗೋಸ್ಕರ ಆಲಯವನ್ನೂ ತನಗೋಸ್ಕರ ಅರಮನೆಯನ್ನೂ ಕಟ್ಟಿಸಬೇಕೆಂದು ಮನಸ್ಸುಳ್ಳವನಾಗಿ


ಪ್ರಿಯಳೇ, ನಿನ್ನನ್ನು ಫರೋಹನ ರಥಗಳ ಕುದುರೆಗೆ ಹೋಲಿಸಿದ್ದೇನೆ.


ಸೊಲೊಮೋನನಿಗೋಸ್ಕರ ಐಗುಪ್ತ ಮುಂತಾದ ಎಲ್ಲಾ ದೇಶಗಳಿಂದ ಕುದುರೆಗಳನ್ನು ತರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು