Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:2 - ಕನ್ನಡ ಸತ್ಯವೇದವು J.V. (BSI)

2 ಅವನು ಎಲ್ಲಾ ಇಸ್ರಾಯೇಲ್ಯರನ್ನು ಅಂದರೆ ಅವರ ಶತಾಧಿಪತಿ ಸಹಸ್ರಾಧಿಪತಿಗಳನ್ನೂ ನ್ಯಾಯಾಧಿಪತಿಗಳನ್ನೂ ಗೋತ್ರಪ್ರಧಾನರಾದ ಇಸ್ರಾಯೇಲ್ ಪ್ರಭುಗಳನ್ನೂ ಕರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಗೋತ್ರ ಪ್ರಧಾನರಾದವರೊಂದಿಗೂ, ಇಸ್ರಾಯೇಲ್ ಪ್ರಭುಗಳೊಂದಿಗೂ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನು ತನ್ನ ಸಹಸ್ರಾಧಿಪತಿಗಳನ್ನು, ಶತಾಧಿಪತಿಗಳನ್ನು, ಸರಕಾರದ ಎಲ್ಲ ಪದಾಧಿಕಾರಿಗಳನ್ನು ಹಾಗೂ ಇಸ್ರಯೇಲ್ ಕುಲಗೋತ್ರಗಳ ನಾಯಕರನ್ನು ಬರಮಾಡಿ, ಅವರ ಸಮೇತ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2-3 ಸೊಲೊಮೋನನು ಇಸ್ರೇಲರನ್ನೂ ಅಂದರೆ ನ್ಯಾಯಾಧಿಪತಿಗಳನ್ನೂ ಶತಾಧಿಪತಿಗಳನ್ನೂ ಸೇನಾಧಿಪತಿಗಳನ್ನೂ ಕುಲಪ್ರಧಾನರನ್ನೂ ಕರೆಯಿಸಿ ಅವರೊಂದಿಗೆ ಗಿಬ್ಯೋನಿನ ಉನ್ನತಸ್ಥಳಕ್ಕೆ ಹೋದನು. ದೇವದರ್ಶನಗುಡಾರವು ಅಲ್ಲಿತ್ತು. ಅರಣ್ಯದಲ್ಲಿ ಇಸ್ರೇಲರು ಪ್ರಯಾಣಿಸುತ್ತಿದ್ದಾಗ ಯೆಹೋವನ ಸೇವಕನಾದ ಮೋಶೆಯು ಗುಡಾರವನ್ನು ಮಾಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:2
13 ತಿಳಿವುಗಳ ಹೋಲಿಕೆ  

ದಾವೀದನು ಇಸ್ರಾಯೇಲ್ಯರ ಎಲ್ಲಾ ಅಧಿಪತಿಗಳನ್ನು ಅಂದರೆ ಕುಲಾಧಿಪತಿಗಳು, ಅರಸನ ಸೇವೆಮಾಡುತ್ತಿರುವ ವರ್ಗನಾಯಕರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ದನಕುರಿ ಮೊದಲಾದ ಸೊತ್ತಿನ ಮೇಲ್ವಿಚಾರಕರು, ರಾಜಪುತ್ರ ಪಾಲಕರು, ಕಂಚುಕಿಗಳು, ರಣವೀರರು ಅಂತೂ ಎಲ್ಲಾ ಘನವಂತರನ್ನು ಯೆರೂಸಲೇವಿುಗೆ ಕರಿಸಿದನು.


ಇಸ್ರಾಯೇಲ್ಯರ ಕುಲಪ್ರಧಾನರು, ಸಹಸ್ರಾಧಿಪತಿಗಳು, ಶತಾಧಿಪತಿಗಳು, ಅರಸನ ವಿಧವಿಧವಾದ ಸೇವೆಯನ್ನು ಮಾಡಬೇಕಾದ ವರ್ಗಗಳ ಅಧಿಪತಿಗಳು ಇವರ ಲೆಕ್ಕ. ವರುಷದ ಎಲ್ಲಾ ತಿಂಗಳುಗಳಲ್ಲಿ ತಿಂಗಳಿಗೆ ಒಂದು ವರ್ಗದಂತೆ ಸರತಿಯ ಮೇಲೆ ಕೆಲಸಕ್ಕೋಸ್ಕರ ಬರುವ ಪ್ರತಿಯೊಂದು ವರ್ಗದಲ್ಲಿ ಇಪ್ಪತ್ತನಾಲ್ಕು ಸಾವಿರ ಮಂದಿ ಇದ್ದರು.


ಯಾಜಕರಲ್ಲಿ ತಕ್ಕಷ್ಟು ಮಂದಿ ತಮ್ಮನ್ನು ಶುದ್ಧಪಡಿಸಿಕೊಂಡಿರಲಿಲ್ಲವಾದದರಿಂದಲೂ ಜನರು ಯೆರೂಸಲೇವಿುನಲ್ಲಿ ಇನ್ನೂ ಕೂಡಿರಲಿಲ್ಲವಾದದರಿಂದಲೂ ಕೂಡಲೆ ಪಸ್ಕವನ್ನು ಆಚರಿಸಲಾಗದೆಂದು ಅರಸನೂ ಅವನ ಸರದಾರರೂ ಯೆರೂಸಲೇವಿುನ ಸರ್ವಸಂಘದವರೂ ತಿಳಿದು


ಅರಸನಾದ ಹಿಜ್ಕೀಯನು [ಮರುದಿನ] ಬೆಳಗಿನ ಜಾವದಲ್ಲೆದ್ದು ಪಟ್ಟಣದ ಮುಖಂಡರನ್ನು ಕೂಡಿಸಿ ಅವರೊಡನೆ ಯೆಹೋವನ ಆಲಯಕ್ಕೆ ಹೋದನು.


ತರುವಾಯ ಅರಸನಾದ ದಾವೀದನು - ದೇವರು ನನ್ನ ಮಗನಾದ ಸೊಲೊಮೋನನನ್ನೇ ಆರಿಸಿಕೊಂಡಿದ್ದಾನೆ; ಆದರೆ ಅವನು ಇನ್ನೂ ಎಳೇ ಪ್ರಾಯದವನು. ಮಾಡತಕ್ಕ ಕೆಲಸವೋ ವಿಶೇಷವಾದದ್ದು. ಕಟ್ಟತಕ್ಕ ಮಂದಿರವು ದೇವರಾದ ಯೆಹೋವನಿಗಾಗಿಯೇ ಅಲ್ಲದೆ ಮನುಷ್ಯನಿಗಾಗಿಯಲ್ಲ;


ಇವರೆಲ್ಲಾ ಲೇವಿಸಂತಾನದವರು. ಇವರ ಕುಟುಂಬಗಳಲ್ಲಿ ಎಲ್ಲಾ ಹಿರಿಯರೂ ಕಿರಿಯರೂ ತಮ್ಮ ಕುಲ ಬಂಧುಗಳಾದ ಆರೋನ್ಯರಂತೆ ಅರಸನಾದ ದಾವೀದ್, ಚಾದೋಕ್, ಅಹೀಮೆಲೆಕ್ ಇವರ ಮುಂದೆಯೂ ಯಾಜಕರ ಮತ್ತು ಲೇವಿಯರ ಕುಟುಂಬಪ್ರಧಾನರ ಮುಂದೆಯೂ ಚೀಟಿನಿಂದ ತಮ್ಮಲ್ಲಿ ಸರತಿಗಳನ್ನು ನೇವಿುಸಿಕೊಂಡರು.


ಎಲ್ಲಾಜಾರನ ಸಂತಾನದ ಕುಟುಂಬಪ್ರಧಾನರು ಈತಾಮಾರ್ಯರಿಗಿಂತ ಹೆಚ್ಚೆಂದು ಕಂಡುಬಂದದರಿಂದ ಎಲ್ಲಾಜಾರ್ಯರ ಕುಟುಂಬಗಳನ್ನು ಪ್ರಧಾನರ ಲೆಕ್ಕದ ಪ್ರಕಾರ ಹದಿನಾರು ವರ್ಗಗಳನ್ನಾಗಿಯೂ ಈತಾಮಾರ್ಯರ ಕುಟುಂಬಗಳನ್ನು ಎಂಟು ವರ್ಗಗಳನ್ನಾಗಿಯೂ ಮಾಡಿ ಈ ವರ್ಗಗಳ ವಿಷಯವಾಗಿ ಚೀಟುಹಾಕಿದರು.


ಲೇವಿಯರಲ್ಲಿ ಗೋತ್ರಪ್ರಧಾನರಾದ ನೀವೂ ನಿಮ್ಮ ಸಹೋದರರೂ ನಿಮ್ಮನ್ನು ಶುದ್ಧಿಪಡಿಸಿಕೊಂಡು ಇಸ್ರಾಯೇಲ್ ದೇವರಾದ ಯೆಹೋವನ ಮಂಜೂಷವನ್ನು ನಾನು ಸಿದ್ಧಮಾಡಿರುವ ಸ್ಥಳಕ್ಕೆ ತೆಗೆದುಕೊಂಡು ಬನ್ನಿರಿ.


ಯೆಹೋವನ ಮಂಜೂಷವನ್ನು ತಾನು ಸಿದ್ಧಮಾಡಿದ ಸ್ಥಳಕ್ಕೆ ತರುವದಕ್ಕೋಸ್ಕರ ಎಲ್ಲಾ ಇಸ್ರಾಯೇಲ್ಯರನ್ನು ಯೆರೂಸಲೇವಿುಗೆ ಕರಸಿದನು.


ದಾವೀದನು ಸಹಸ್ರಾಧಿಪತಿ ಶತಾಧಿಪತಿ ಮೊದಲಾದ ಸರ್ವಪ್ರಭುಗಳೊಡನೆ ಮಾತಾಡಿದನಂತರ


ಆ ಸರ್ವಸಮೂಹದೊಡನೆ ಗಿಬ್ಯೋನಿನಲ್ಲಿದ್ದ ಪೂಜಾಸ್ಥಳಕ್ಕೆ ಹೋದನು. ಯೆಹೋವನ ಸೇವಕನಾದ ಮೋಶೆಯು ಅರಣ್ಯದಲ್ಲಿ ಮಾಡಿಸಿದ ದೇವದರ್ಶನದ ಗುಡಾರವು ಅಲ್ಲಿತ್ತಷ್ಟೆ.


ಅರಸನಾದ ಸೊಲೊಮೋನನು ಯಜ್ಞಮಾಡುವದಕ್ಕೋಸ್ಕರ ಪೂಜಾಸ್ಥಳಗಳಲ್ಲಿ ವಿಶೇಷವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು