Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:1 - ಕನ್ನಡ ಸತ್ಯವೇದವು J.V. (BSI)

1 ರೆಹಬ್ಬಾಮನು ಶೆಕೆವಿುಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲ್ಯರೂ ಅವನನ್ನು ಅರಸನನ್ನಾಗಿ ಮಾಡುವದಕ್ಕೆ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಇಸ್ರಯೇಲರೆಲ್ಲರು ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಕೂಡಿಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ರೆಹಬ್ಬಾಮನು ಶೆಕೆಮಿಗೆ ಹೋದನು. ಯಾಕೆಂದರೆ ಅಲ್ಲಿ ಇಸ್ರೇಲ್ ಜನರೆಲ್ಲಾ ಅವನನ್ನು ಅರಸನನ್ನಾಗಿ ಮಾಡಲು ಕೂಡಿ ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:1
12 ತಿಳಿವುಗಳ ಹೋಲಿಕೆ  

ಸೊಲೊಮೋನನು ರೆಹಬ್ಬಾಮನನ್ನು ಪಡೆದನು. ರೆಹಬ್ಬಾಮನು ಅಬೀಯನನ್ನು ಪಡೆದನು. ಅಬೀಯನು ಆಸನನ್ನು ಪಡೆದನು.


ದಾವೀದನನ್ನು ಇಸ್ರಾಯೇಲ್ಯರೆಲ್ಲರ ಅರಸನನ್ನಾಗಿ ಮಾಡುವದಕ್ಕೋಸ್ಕರ ಯುದ್ಧನಿಪುಣರಾದ ಈ ಎಲ್ಲಾ ಸೈನಿಕರು ಪೂರ್ಣಮನಸ್ಸಿನಿಂದ ಹೆಬ್ರೋನಿಗೆ ಬಂದರು. ಉಳಿದ ಎಲ್ಲಾ ಇಸ್ರಾಯೇಲ್ಯರು ದಾವೀದನಿಗೆ ರಾಜ್ಯಾಭಿಷೇಕ ಮಾಡುವದರಲ್ಲಿ ಏಕಮನಸ್ಸುಳ್ಳವರಾಗಿದ್ದರು.


ಸೊಲೊಮೋನನ ಮಗನು ರೆಹಬ್ಬಾಮನೆಂಬವನು; ಇವನ ಮಗನು ಅಬೀಯ; ಇವನ ಮಗನು ಆಸ;


ಸೊಲೊಮೋನರಾಜನು ಎಲ್ಲಾ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದನು.


ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -


ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆವಿುನಲ್ಲಿ ಕೂಟಕ್ಕೆ ಕರಿಸಲು ಅವರ ಹಿರಿಯರೂ ಪ್ರಧಾನರೂ ನ್ಯಾಯಾಧಿಪತಿಗಳೂ ಅಧಿಕಾರಿಗಳೂ ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.


ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.


ಅಬ್ರಾಮನು ಆ ದೇಶದಲ್ಲಿ ಸಂಚರಿಸುತ್ತಾ ಶೆಕೆಮ್ ಕ್ಷೇತ್ರದಲ್ಲಿರುವ ಮೋರೆಯೆಂಬ ವೃಕ್ಷದ ಬಳಿಗೆ ಬಂದನು. ಆ ಕಾಲದಲ್ಲಿ ಕಾನಾನ್ಯರು ದೇಶದಲ್ಲಿದ್ದರು.


ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿದೊಡನೆ ಐಗುಪ್ತದಿಂದ ಹಿಂದಿರುಗಿ ಬಂದಿದ್ದನು.


ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು