Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:6 - ಕನ್ನಡ ಸತ್ಯವೇದವು J.V. (BSI)

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:6
11 ತಿಳಿವುಗಳ ಹೋಲಿಕೆ  

ಹೆಚ್ಚು ದಿನಗಳವರು ಮಾತಾಡಲಿ, ಬಹಳ ವರುಷದವರು ಜ್ಞಾನೋಪದೇಶ ಮಾಡಲಿ ಅಂದುಕೊಂಡಿದ್ದೆನು.


ನಿಮ್ಮನ್ನು ನೀವೇ ಮೋಸಪಡಿಸಿಕೊಂಡಿದ್ದೀರಿ; ನೀವು ನನ್ನ ಬಳಿಗೆ ಬಂದು - ನಮ್ಮ ದೇವರಾದ ಯೆಹೋವನನ್ನು ನಮಗಾಗಿ ಪ್ರಾರ್ಥಿಸು; ನಮ್ಮ ದೇವರಾದ ಯೆಹೋವನು ಯಾವ ಅಪ್ಪಣೆಕೊಡುತ್ತಾನೋ ಅದನ್ನು ನಮಗೆ ತಿಳಿಸು, ಅದರಂತೆಯೇ ನಡೆಯುವೆವು ಎಂಬದಾಗಿ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸುವದಕ್ಕೆ ನನ್ನನ್ನು ಕಳುಹಿಸಿದಿರಲ್ಲಾ.


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಮೂರ್ಖನ ನಡತೆ ಅವನ ಗಣನೆಗೆ ಸರಿ; ಜ್ಞಾನಿಯು ಉಚಿತಾಲೋಚನೆಯನ್ನು ಗಮನಿಸುವನು.


ಅನಂತರ ಅಬ್ಷಾಲೋಮನು - ನಾವು ಈಗ ಮಾಡತಕ್ಕದ್ದೇನು? ಆಲೋಚನೆ ಹೇಳು ಎಂಬದಾಗಿ ಅಹೀತೋಫೆಲನನ್ನು ಕೇಳಲು ಅವನು -


ನೀವು ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು