2 ಪೂರ್ವಕಾಲ ವೃತ್ತಾಂತ 10:7 - ಕನ್ನಡ ಸತ್ಯವೇದವು J.V. (BSI)7 ಅವರು ಅವನಿಗೆ - ನೀನು ಈ ಜನರಿಗೆ ದಯತೋರಿಸಿ ಅವರನ್ನು ಮೆಚ್ಚಿಸುವ ಒಳ್ಳೇ ಉತ್ತರ ಕೊಡುವದಾದರೆ ಅವರು ಯಾವಾಗಲೂ ನಿನಗೆ ಒಳಗಾಗಿರುವರು ಅಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಅವನಿಗೆ, “ನೀನು ಈ ಜನರಿಗೆ ದಯತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರ ಕೊಟ್ಟರೆ ಅವರು ಯಾವಾಗಲೂ ನಿನಗೆ ಅಧೀನರಾಗಿರುವರು” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು, “ನೀವು ಈ ಜನರಿಗೆ ದಯೆತೋರಿಸಿ, ಅವರನ್ನು ಮೆಚ್ಚಿಸುವ ಒಳ್ಳೆಯ ಉತ್ತರಕೊಟ್ಟರೆ ಅವರು ಯಾವಾಗಲೂ ನಿಮಗೆ ಅಧೀನರಾಗಿರುವರು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹಿರಿಯರು ಅವನಿಗೆ, “ನೀನು ಅವರಿಗೆ ಕರುಣೆಯನ್ನು ತೋರಿ, ಅವರನ್ನು ಮೆಚ್ಚಿಸಿ, ಅವರಿಗೆ ಒಳ್ಳೆಯ ಮಾತುಗಳನ್ನಾಡಿದರೆ ಅವರು ನಿರಂತರವಾಗಿ ನಿನ್ನ ಸೇವೆಮಾಡುವರು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ಅವನಿಗೆ, “ನೀನು ಈ ಜನರಿಗೆ ದಯವುಳ್ಳವನಾಗಿ ಅವರನ್ನು ಮೆಚ್ಚಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |