Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:8 - ಕನ್ನಡ ಸತ್ಯವೇದವು J.V. (BSI)

8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡಲೇ ಬೆಳೆದು ತನಗೆ ಮಂತ್ರಿಗಳೂ ಆದ ಯೌವನಸ್ಥರನ್ನು ಕರಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆದರೆ ಅವನು ಅ ಹಿರಿಯರ ಆಲೋಚನೆಯನ್ನು ನಿರಾಕರಿಸಿ, ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಆದರೆ ಅವನು ಆ ಹಿರಿಯರ ಆಲೋಚನೆಯನ್ನು ನಿರಾಕರಿಸಿದನು. ತನ್ನ ಸಂಗಡವೇ ಬೆಳೆದು ತನಗೆ ಮಂತ್ರಿಗಳಾದ ಯೌವನಸ್ಥರನ್ನು ಕರೆಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ರೆಹಬ್ಬಾಮನು ಹಿರಿಯರ ಸಲಹೆಯನ್ನು ಕೇಳಲಿಲ್ಲ. ಅವನೊಂದಿಗೆ ಬೆಳೆದ ಅವನ ಸಮಪ್ರಾಯದ ಯೌವನಸ್ಥರನ್ನು ವಿಚಾರಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:8
12 ತಿಳಿವುಗಳ ಹೋಲಿಕೆ  

ನನ್ನ ಬುದ್ಧಿವಾದವನ್ನು ಲಕ್ಷ್ಯಕ್ಕೆ ತಾರದೆ ನನ್ನ ತಿದ್ದುಪಾಟನ್ನು ಬೇಡವೆಂದು ತಳ್ಳಿಬಿಟ್ಟಿದ್ದೀರಿ.


ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲಾ ಇಸ್ರಾಯೇಲ್ಯರೂ ಅರ್ಕೀಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೇದಾಗಿದೆ ಎಂದರು. ಯೆಹೋವನು ಅಬ್ಷಾಲೋಮನಿಗೆ ಕೇಡನ್ನುಂಟು ಮಾಡಬೇಕೆಂದು ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದನು.


ಯೆಹೋವನು ಹೀಗೆ ನುಡಿಯುತ್ತಾನೆ :- ದ್ರೋಹಿಗಳಾದ [ನನ್ನ] ಮಕ್ಕಳ ಗತಿಯನ್ನು ಏನು ಹೇಳಲಿ! ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಸಾಗಿಸಿ ನನ್ನ ಆತ್ಮಪ್ರೇರಿತರಾಗದೆ ಉಪಾಯವನ್ನು ನೆಯ್ದು ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ;


ಎಲೆ ದೇಶವೇ ನಿನ್ನ ರಾಜನು ಬಾಲನಾಗಿದ್ದು ಪ್ರಭುಗಳು ಹೊತ್ತಾರೆ ಔತಣಕ್ಕೆ ಕೂತುಕೊಂಡರೆ ನಿನಗೆ ದೌರ್ಭಾಗ್ಯವೇ.


ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ ಅಪರಂಜಿಯ ಆಭರಣಕ್ಕೂ ಸಮಾನ.


ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.


ಜ್ಞಾನಿಗಳ ಸಹವಾಸಿ ಜ್ಞಾನಿಯಾಗುವನು; ಜ್ಞಾನಹೀನರ ಒಡನಾಡಿ ಸಂಕಟಪಡುವನು.


ಜ್ಞಾನಿಗೆ ಉಪದೇಶಿಸಿದರೆ ಹೆಚ್ಚು ಜ್ಞಾನವನ್ನು ಹೊಂದುವನು, ನೀತಿವಂತನಿಗೆ ಬೋಧಿಸಿದರೆ ಹೆಚ್ಚು ತಿಳುವಳಿಕೆಯನ್ನು ಪಡೆಯುವನು.


ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡತಕ್ಕದ್ದು? ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು ಎಂದು ಕೇಳಲು


ನಿನಗೂ ನಿನ್ನ ತಂದೆಗೂ ವಿುತ್ರನಾದವನನ್ನು ಬಿಡಬೇಡ; ನಿನ್ನ ಇಕ್ಕಟ್ಟಿನ ದಿನದಲ್ಲಿ ಅಣ್ಣನ ಮನೆಯನ್ನು ಆಶ್ರಯಿಸದಿರು; ದೂರವಾಗಿರುವ ಅಣ್ಣನಿಗಿಂತ ಹತ್ತಿರವಾಗಿರುವ ನೆರೆಯವನು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು