Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:21 - ಕನ್ನಡ ಸತ್ಯವೇದವು J.V. (BSI)

21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ, ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ, ಅರುವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತೆಂಟು ಮಂದಿ ಗಂಡುಮಕ್ಕಳೂ ಅರುವತ್ತು ಮಂದಿ ಹೆಣ್ಣುಮಕ್ಕಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ರೆಹಬ್ಬಾಮನು ತನ್ನ ಎಲ್ಲಾ ಪತ್ನಿಯರಲ್ಲಿಯೂ ಉಪಪತ್ನಿಯರಲ್ಲಿಯೂ ಅಬ್ಷಾಲೋಮನ ಮಗಳಾದ ಮಾಕಳನ್ನು ಹೆಚ್ಚಾಗಿ ಪ್ರೀತಿಸುತ್ತಿದ್ದನು. ಅವನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಇವರಲ್ಲಿ ಅವನಿಗೆ ಇಪ್ಪತ್ತ ಎಂಟು ಮಂದಿ ಗಂಡುಮಕ್ಕಳೂ ಅರವತ್ತು ಮಂದಿ ಹೆಣ್ಣು ಮಕ್ಕಳೂ ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ರೆಹಬ್ಬಾಮನಿಗೆ ಹದಿನೆಂಟು ಮಂದಿ ಹೆಂಡತಿಯರೂ, ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನು ಇಪ್ಪತ್ತೆಂಟು ಮಂದಿ ಪುತ್ರರನ್ನೂ, ಅರವತ್ತು ಮಂದಿ ಪುತ್ರಿಯರನ್ನೂ ಪಡೆದನು. ಆದರೆ ಅವನು ತನ್ನ ಎಲ್ಲಾ ಹೆಂಡತಿಯರಿಗಿಂತಲೂ, ಉಪಪತ್ನಿಯರಿಗಿಂತಲೂ ಅಬ್ಷಾಲೋಮನ ಮಗಳಾದ ಮಾಕ ಎಂಬವಳನ್ನು ಹೆಚ್ಚಾಗಿ ಪ್ರೀತಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:21
11 ತಿಳಿವುಗಳ ಹೋಲಿಕೆ  

ಅವನು ಅನೇಕ ಸ್ತ್ರೀಯರನ್ನು ಮದುವೆಮಾಡಿಕೊಳ್ಳಬಾರದು; ಮಾಡಿಕೊಂಡರೆ ಅವನ ಮನಸ್ಸು ಯೆಹೋವನ ಕಡೆಯಿಂದ ತಿರುಗುವದಕ್ಕೆ ಅವಕಾಶವಾಗುವದು. ಅವನು ಬೆಳ್ಳಿಬಂಗಾರವನ್ನು ವಿಶೇಷವಾಗಿ ಗಳಿಸಿಕೊಳ್ಳಬಾರದು.


ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಮಂದಿ ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.


ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು.


ಗಿದ್ಯೋನನಿಗೆ ಅನೇಕ ಮಂದಿ ಹೆಂಡತಿಯರಿದ್ದದರಿಂದ ಅವನಿಗೆ ಎಪ್ಪತ್ತು ಮಂದಿ ಗಂಡು ಮಕ್ಕಳು ಹುಟ್ಟಿದರು.


ತನ್ನ ಉಳಿದ ಎಲ್ಲಾ ಮಕ್ಕಳನ್ನು ಜಾಣತನದಿಂದ ವಿಂಗಡಿಸಿ ಯೆಹೂದ ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಕೊತ್ತಲುಗಳುಳ್ಳ ಆಯಾ ಪಟ್ಟಣಗಳಲ್ಲಿಟ್ಟು ಅವರಿಗೆ ಬೇಕಾದಷ್ಟು ಆಹಾರವನ್ನು ಏರ್ಪಡಿಸಿ ಅನೇಕ ಮಂದಿ ಹೆಂಡತಿಯರನ್ನೂ ಗೊತ್ತು ಮಾಡಿಕೊಟ್ಟನು.


ಇದಲ್ಲದೆ ಅವನ ಉಪಪತ್ನಿಯಾದ ರೂಮಳೆಂಬವಳು ಟೆಬಹ, ಗಹಮ್, ತಹಷ್, ಮಾಕಾ ಎಂಬವರನ್ನು ಹೆತ್ತಳು.


ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.


ತಂದೆಯು ತನ್ನ ಆಸ್ತಿಯನ್ನು ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಾಗ ಆ ತಿರಸ್ಕರಿಸಲ್ಪಟ್ಟವಳ ಮಗನನ್ನು ತಳ್ಳಿಬಿಟ್ಟು ಪ್ರೀತಿಯ ಹೆಂಡತಿಯ ಮಗನನ್ನೇ ಚೊಚ್ಚಲವನೆಂದು ಭಾವಿಸಕೂಡದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು