Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:3 - ಕನ್ನಡ ಸತ್ಯವೇದವು J.V. (BSI)

3 ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಾಯೇಲ್ಯರೆಲ್ಲರಿಗೂ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನೀನು ಹೋಗಿ ಸೊಲೊಮೋನನ ಮಗನೂ, ಯೆಹೂದದ ಅರಸನಾದ ರೆಹಬ್ಬಾಮನಿಗೂ ಯೆಹೂದದ ಬೆನ್ಯಾಮೀನ್ ಕುಲಗಳ ಇಸ್ರಾಯೇಲರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ನೀನು ಹೋಗಿ ಸೊಲೊಮೋನನ ಮಗನೂ ಜುದೇಯದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಯೇಲರೆಲ್ಲರಿಗೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ಶೆಮಾಯನೇ, ನೀನು ಹೋಗಿ ಯೆಹೂದದ ರಾಜನಾದ ರೆಹಬ್ಬಾಮನೊಡನೆ ಮಾತನಾಡು. ಯೆಹೂದ ಮತ್ತು ಬೆನ್ಯಾಮೀನ್ ಪ್ರಾಂತ್ಯಗಳಲ್ಲಿ ವಾಸವಾಗಿರುವ ಎಲ್ಲಾ ಇಸ್ರೇಲರೊಂದಿಗೆ ಮಾತನಾಡು. ಅವರಿಗೆ ಹೀಗೆ ಹೇಳು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನರಲ್ಲಿರುವ ಸಮಸ್ತ ಇಸ್ರಾಯೇಲರಿಗೂ ಹೇಳಬೇಕಾದದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:3
8 ತಿಳಿವುಗಳ ಹೋಲಿಕೆ  

ಹುಟ್ಟಿದ ಎಂಟನೆಯ ದಿನದಲ್ಲಿ ನನಗೆ ಸುನ್ನತಿಯಾಯಿತು; ನಾನು ಇಸ್ರಾಯೇಲ್ ವಂಶದವನು, ಬೆನ್ಯಾಮೀನನ ಕುಲದವನು, ಇಬ್ರಿಯರಿಂದ ಹುಟ್ಟಿದ ಇಬ್ರಿಯನು; ನೇಮನಿಷ್ಠೆಗಳನ್ನು ನೋಡಿದರೆ ನಾನು ಫರಿಸಾಯನು,


ಅವರು ಆ ಕಾಲದಲ್ಲಿ ರೂಢಿಯಾದ ಪದ್ಧತಿಯಂತೆ ಇಂದಿನವರೆಗೂ ನಡೆಯುತ್ತಾರೆ. ಅವರು ಯೆಹೋವನಲ್ಲಿ ಭಯಭಕ್ತಿಯುಳ್ಳವರಲ್ಲ; ಆತನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಸಂತಾನದವರಿಗೆ ಕೊಡಲ್ಪಟ್ಟ ಆಜ್ಞಾನಿಯಮ ವಿಧಿಧರ್ಮಶಾಸ್ತ್ರಗಳನ್ನು ಅನುಸರಿಸುವದಿಲ್ಲ.


ಮೋಶೆಯು ಯೆಹೋವನ ಆಜ್ಞೆಗಳನ್ನೆಲ್ಲಾ ಬರೆದು ಬೆಳಿಗ್ಗೆ ಎದ್ದು ಆ ಬೆಟ್ಟದ ಬುಡದಲ್ಲಿ ಯಜ್ಞವೇದಿಯನ್ನು ಕಟ್ಟಿಸಿ ಇಸ್ರಾಯೇಲ್ಯರ ಹನ್ನೆರಡು ಕುಲಗಳಿಗೆ ಹನ್ನೆರಡು ಕಲ್ಲಿನ ಕಂಬಗಳನ್ನು ಸ್ಥಾಪನೆ ಮಾಡಿಸಿ ಇಸ್ರಾಯೇಲ್ಯರ ಯೌವನಸ್ಥರಿಗೆ -


ಇವರೆಲ್ಲರೂ ಇಸ್ರಾಯೇಲನಿಂದುಂಟಾದ ಹನ್ನೆರಡು ಕುಲಗಳು. ಇದೇ ಅವರ ತಂದೆ ಅವರಿಗೆ ಹೇಳಿದ ಆಶೀರ್ವಾದ. ಒಂದೊಂದು ಕುಲಕ್ಕೆ ಒಂದೊಂದು ಆಶೀರ್ವಚನವನ್ನು ನುಡಿದನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ -


ಯೆಹೋವನು ಇಂತೆನ್ನುತ್ತಾನೆ, ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು. ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.


ಯೆಹೂದ ಪ್ರಾಂತದಲ್ಲಿದ್ದ ಇಸ್ರಾಯೇಲ್ಯರಾದರೋ ಅರಸನಾದ ರೆಹಬ್ಬಾಮನ ಅಧೀನದಲ್ಲಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು