Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:4 - ಕನ್ನಡ ಸತ್ಯವೇದವು J.V. (BSI)

4 ಯೆಹೋವನು ಇಂತೆನ್ನುತ್ತಾನೆ, ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವದಕ್ಕೆ ಹೋಗಬಾರದು. ಎಲ್ಲರೂ ಹಿಂದಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ; ಈ ಕಾರ್ಯವು ಯೆಹೋವನಿಂದಾಗಿದೆ ಎಂದು ಹೇಳಬೇಕು’” ಎಂಬ ಯೆಹೋವನ ವಾಕ್ಯವುಂಟಾಗಲು ಅವರು ಯೆಹೋವನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಡದೆ ಹಿಂತಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ‘ಸರ್ವೇಶ್ವರ ಇಂತೆನ್ನುತ್ತಾರೆ: ನೀವು ನಿಮ್ಮ ಸಹೋದರರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರು ಹಿಂದಿರುಗಿಹೋಗಿರಿ; ಈ ವಿಭಜನಾಕಾರ್ಯ ಸರ್ವೇಶ್ವರನಿಂದಾಗಿದೆ’ ಎಂದು ಹೇಳಬೇಕು.” ಅಂತೆಯೇ ಆ ಜನರು ಸರ್ವೇಶ್ವರನ ಮಾತನ್ನು ಕೇಳಿ ಯಾರೊಬ್ಬಾಮನಿಗೆ ವಿರೋಧವಾಗಿ ಹೊರಡದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನು ಹೀಗೆನ್ನುತ್ತಾನೆ: ನಿಮ್ಮ ಸಹೋದರರೊಂದಿಗೆ ನೀವು ಯುದ್ಧಮಾಡಬಾರದು. ಪ್ರತಿಯೊಬ್ಬರು ತಮ್ಮ ತಮ್ಮ ಮನೆಗಳಿಗೆ ಹಿಂತಿರುಗಲಿ. ಯಾಕೆಂದರೆ ಇದನ್ನು ನಾನೇ ಮಾಡಿದ್ದೇನೆ.” ರೆಹಬ್ಬಾಮನೂ ಅವನೊಂದಿಗಿದ್ದ ಸೈನಿಕರೂ ಯೆಹೋವನ ಸಂದೇಶವನ್ನು ಕೇಳಿ ಹಿಂತಿರುಗಿದರು. ಅವರು ಯಾರೊಬ್ಬಾಮನೊಂದಿಗೆ ಯುದ್ಧಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ‘ನೀವು ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ. ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,’ ” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯಾರೊಬ್ಬಾಮನ ಮೇಲೆ ಹೋಗದೆ ಹಿಂದಿರುಗಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:4
16 ತಿಳಿವುಗಳ ಹೋಲಿಕೆ  

ಆದರೆ ದೇವರು ಮೇಲಾಗಬೇಕೆಂದು ಸಂಕಲ್ಪಿಸಿದನು. ಈಗ ಅನುಭವಕ್ಕೆ ಬಂದ ಪ್ರಕಾರವೇ ಅನೇಕ ಪ್ರಾಣಿಗಳಿಗೆ ಸಂರಕ್ಷಣೆಯುಂಟಾಗುವಂತೆ ಮಾಡಿದನು.


ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ; ಪರರ ಸುಖದುಃಖಗಳಲ್ಲಿ ಸೇರುವವರಾಗಿರಿ; ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ; ಕರುಣೆಯೂ ದೀನಭಾವವೂ ಉಳ್ಳವರಾಗಿರಿ.


ಸಹೋದರ ಸ್ನೇಹವು ನೆಲೆಯಾಗಿರಲಿ.


ಮರುದಿನ ತಾವು ತಾವೇ ಹೊಡೆದಾಡಿಕೊಳ್ಳುತ್ತಿರುವಾಗ ಅವನು ಎದುರಾಗಿ ಬಂದು - ಜನರೇ, ನೀವು ಸಹೋದರರಲ್ಲವೇ? ನೀವೇಕೆ ಒಬ್ಬರಿಗೊಬ್ಬರು ಅನ್ಯಾಯಮಾಡುತ್ತೀರಿ ಎಂದು ಹೇಳಿ ಅವರನ್ನು ಸಮಾಧಾನಪಡಿಸಬೇಕೆಂದಿದ್ದನು.


ನನ್ನ ಅಪ್ಪಣೆಯಿಲ್ಲದೆ ರಾಜರನ್ನು ಕಲ್ಪಿಸಿಕೊಂಡಿದ್ದಾರೆ; ನನಗೆ ತಿಳಿಯದೆ ಅಧಿಪತಿಗಳನ್ನು ಮಾಡಿಕೊಂಡಿದ್ದಾರೆ; ತಮ್ಮ ಬೆಳ್ಳಿ ಬಂಗಾರಗಳಿಂದ ಬೊಂಬೆಗಳನ್ನು ನಿರ್ಮಿಸಿಕೊಂಡಿದ್ದಾರೆ; ಅವರು ನಿರ್ಮಿಸಿದ್ದೆಲ್ಲಾ ನಾಶವಾಗತಕ್ಕದ್ದೇ.


ಯೆಹೋವನ ಆಲೋಚನೆಯೋ ಶಾಶ್ವತವಾಗಿಯೇ ನಿಲ್ಲುವದು; ಆತನ ಸಂಕಲ್ಪವು ಎಂದಿಗೂ ಕದಲುವದಿಲ್ಲ.


ಸೂರ್ಯಾಸ್ತಮಾನವಾದ ಕೂಡಲೆ - ಪ್ರತಿಯೊಬ್ಬನು ತನ್ನ ಪ್ರಾಂತಕ್ಕೂ ಪಟ್ಟಣಕ್ಕೂ ಹೋಗಲಿ ಎಂಬ ಕೂಗು ಇಸ್ರಾಯೇಲ್‍ಸೈನ್ಯದಲ್ಲಿ ಹಬ್ಬಿಕೊಂಡಿತು.


ಆಗ ಅಬ್ನೇರನು ಯೋವಾಬನನ್ನು - ಕತ್ತಿಯು ಯಾವಾಗಲೂ ತಿನ್ನುತ್ತಲೇ ಇರಬೇಕೋ? ಹಗೆತನವೇ ಇದರ ಅಂತ್ಯಫಲವೆಂದು ನಿನಗೆ ಗೊತ್ತಾಗಲಿಲ್ಲವೋ? ಸಹೋದರರನ್ನು ಹಿಂದಟ್ಟುವದು ಸಾಕೆಂದು ನಿನ್ನ ಜನರಿಗೆ ಯಾವಾಗ ಆಜ್ಞಾಪಿಸುವಿ ಎಂದನು.


ಹೀಗಿರಲು ಅಬ್ರಾಮನು ಲೋಟನಿಗೆ - ನನಗೂ ನಿನಗೂ, ನನ್ನ ದನಕಾಯುವವರಿಗೂ ನಿನ್ನ ದನಕಾಯುವವರಿಗೂ ಜಗಳವಿರಬಾರದು; ನಾವು ಸಹೋದರರಲ್ಲವೇ.


ನೀನು ಹೋಗಿ ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ ಯೆಹೂದ ಬೆನ್ಯಾಮೀನ್ ಕುಲಗಳ ಇಸ್ರಾಯೇಲ್ಯರೆಲ್ಲರಿಗೂ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು