Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:12 - ಕನ್ನಡ ಸತ್ಯವೇದವು J.V. (BSI)

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ರೆಹಬ್ಬಾಮನು ತನ್ನನ್ನು ತಗ್ಗಿಸಿ ಕೊಂಡದ್ದರಿಂದಲೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರಿ ಬಂದಿದ್ದರಿಂದಲೂ ಯೆಹೋವನು ರೆಹಬ್ಬಾಮನ ಮೇಲಣ ಕೋಪವನ್ನು ಬಿಟ್ಟನು; ಅವನನ್ನು ಪೂರ್ಣವಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರೆಹಬ್ಬಾಮನು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಮೇಲಿದ್ದ ದೇವರ ಕೋಪವು ಶಾಂತವಾಯಿತು. ಹೀಗೆ ಯೆಹೋವನು ಅವನನ್ನು ಸಂಪೂರ್ಣವಾಗಿ ನಾಶಮಾಡಲಿಲ್ಲ. ಯಾಕೆಂದರೆ ಯೆಹೂದದಲ್ಲಿ ಇನ್ನೂ ಕೆಲವು ನೀತಿವಂತರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡಾಗ, ಯೆಹೋವ ದೇವರ ಕೋಪವು ಅವನನ್ನು ಬಿಟ್ಟು ತಿರುಗಿತು. ಆತನು ಪೂರ್ಣವಾಗಿ ನಾಶಮಾಡಲಿಲ್ಲ. ಯೆಹೂದದಲ್ಲಿ ಸಹ ಕೆಲವು ಕಾರ್ಯಗಳು ಸುಲಕ್ಷಣಗಳು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:12
12 ತಿಳಿವುಗಳ ಹೋಲಿಕೆ  

ಆದರೂ ನೀನು ದೇಶದೊಳಗಿಂದ ಅಶೇರವಿಗ್ರಹಸ್ತಂಭಗಳನ್ನು ತೆಗೆದುಹಾಕಿ ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟದ್ದರಿಂದ ನಿನ್ನಲ್ಲಿ ಸುಶೀಲತೆಯೂ ಉಂಟೆಂದು ತಿಳಿದುಬಂತು ಎಂಬದಾಗಿ ಹೇಳಿದನು.


ಇಸ್ರಾಯೇಲ್ಯರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವದರಿಂದ ಇವನೊಬ್ಬನೇ ಸಮಾಧಿಹೊಂದುವನು.


ಹೀಗಿರುವದರಿಂದ ದೇವರ ತ್ರಾಣವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆತನು ತಕ್ಕ ಕಾಲದಲ್ಲಿ ನಿಮ್ಮನ್ನು ಮೇಲಕ್ಕೆ ತರುವನು.


ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.


ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.


ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗನ್ನುತ್ತಾನೆ - ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು ದೀನನ ಆತ್ಮವನ್ನೂ ಜಜ್ಜಿಹೋದ ಮನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ ಅದೂ ಕೂಡಾ ನಾಶವಾಗುವದು; ಏಲಾ ಅಲ್ಲೋನ್ ಮರಗಳನ್ನೂ ಕಡಿದ ಮೇಲೆ ಅವುಗಳ ಬುಡವು ನಿಲ್ಲುವ ಹಾಗೆ ದೇವಕುಲವು ಮೋಟುಬುಡವಾಗಿ ನಿಲ್ಲುವದು ಅಂದನು.


ಒಂದು ವೇಳೆ ಆ ಊರೊಳಗೆ ಐವತ್ತು ಮಂದಿ ನೀತಿವಂತರಿದ್ದಾರು; ಅದರಲ್ಲಿ ಐವತ್ತು ಮಂದಿ ನೀತಿವಂತರಿದ್ದರೂ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯಾ?


ಅರಸನು ಯೆಹೋವನ ಆಲಯಕ್ಕೆ ಹೋಗುವಾಗೆಲ್ಲಾ ಮೈಗಾವಲಿನವರು ಅವುಗಳನ್ನು ಹಿಡಿದುಕೊಂಡು ಹೋಗುವರು; ಅಲ್ಲಿಂದ ತಿರಿಗಿ ಬಂದ ಮೇಲೆ ತಮ್ಮ ಕೋಣೆಯಲ್ಲಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು