Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:2 - ಕನ್ನಡ ಸತ್ಯವೇದವು J.V. (BSI)

2 ಅವರು ಯೆಹೋವನಿಗೆ ದ್ರೋಹಿಗಳಾದದರಿಂದ ಅರಸನಾದ ರೆಹಬ್ಬಾಮನ ಆಳಿಕೆಯ ಐದನೆಯ ವರುಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಯೆಹೋವನಿಗೆ ದ್ರೋಹಮಾಡಿದ್ದರಿಂದ ಅರಸನಾದ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ, ಐಗುಪ್ತದ ಅರಸನಾದ ಶೀಶಕನು, ಸೈನಿಕರನ್ನು ಕೂಡಿಸಿಕೊಂಡು ಯೆರೂಸಲೇಮಿಗೆ ವಿರುದ್ಧವಾಗಿ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಸರ್ವೇಶ್ವರನಿಗೆ ದ್ರೋಹಿಗಳಾದರು. ಅರಸ ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಶೀಶಕನು ಬಂದು ಪಟ್ಟಣಕ್ಕೆ ಮುತ್ತಿಗೆ ಹಾಕಿದನು. ಶೀಶಕನು ಈಜಿಪ್ಟಿನ ರಾಜ. ರೆಹಬ್ಬಾಮನೂ ಯೆಹೂದ ಪ್ರಾಂತ್ಯದ ಜನರೂ ಯೆಹೋವನಿಗೆ ಅವಿಧೇಯರಾದದ್ದೇ ಈ ಮುತ್ತಿಗೆಗೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ಯೆಹೋವ ದೇವರಿಗೆ ವಿಶ್ವಾಸದ್ರೋಹಮಾಡಿದ್ದರಿಂದ, ರೆಹಬ್ಬಾಮನು ಅರಸನಾದ ಐದನೆಯ ವರ್ಷದಲ್ಲಿ ಈಜಿಪ್ಟ್ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:2
17 ತಿಳಿವುಗಳ ಹೋಲಿಕೆ  

ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವವರೆಗೆ ಅಲ್ಲಿಯೇ ಇದ್ದನು.


ನಮ್ಮ ಹೃದಯಾನಂದವು ತೀರಿತು, ನಮ್ಮ ನಾಟ್ಯವೇ ದುಃಖವಾಯಿತು.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮನನ್ನು ದುಃಖಪಡಿಸಿದರು; ಆದದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಕರ್ತನು ಅರಾಮ್ಯರ ಪಾಳೆಯದವರಿಗೆ ರಥರಥಾಶ್ವಸಹಿತವಾದ ಮಹಾಸೈನ್ಯ ಘೋಷವು ಕೇಳಿಸುವಂತೆ ಮಾಡಿದ್ದರಿಂದ ಅವರು - ಇಸ್ರಾಯೇಲ್ಯರ ಅರಸನು ಹಿತ್ತಿಯ, ಐಗುಪ್ತ ಇವುಗಳ ಅರಸರಿಗೆ ಹಣಕೊಟ್ಟು ಅವರನ್ನು ನಮಗೆ ವಿರೋಧವಾಗಿ ಕರತಂದಿದ್ದಾನೆ ಅಂದುಕೊಂಡು


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ವೇಗವುಳ್ಳ ದೂತರೇ, ಉನ್ನತವಾದ ನುಣುಪಿನ ಮೈಯವರೂ ಸರ್ವದಾ ಭಯಂಕರರೂ ಮಹಾಬಲದಿಂದ [ಶತ್ರುಗಳನ್ನು] ತುಳಿಯುವವರೂ ನದಿಗಳಿಂದ ವಿಂಗಡವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.


ಆಸನಿಗೆ ಸೈನ್ಯವಿತ್ತು; ಅದರಲ್ಲಿ ಗುರಾಣಿಬರ್ಜಿಗಳನ್ನು ಹಿಡಿದಿರುವ ಮೂರು ಲಕ್ಷ ಮಂದಿ ಯೆಹೂದ್ಯರೂ ಖೇಡ್ಯ ಹಿಡಿದವರೂ ಬಿಲ್ಲುಗಾರರೂ ಆಗಿರುವ ಎರಡು ಲಕ್ಷದ ಎಂಭತ್ತು ಸಾವಿರ ಮಂದಿ ಬೆನ್ಯಾಮೀನ್ಯರೂ ಇದ್ದರು. ಇವರೆಲ್ಲರೂ ರಣವೀರರು.


ಅಂದಿನಿಂದ ಅವರು ತಮ್ಮ ಪಿತೃಗಳ ದೇವರಾದ ಯೆಹೋವನ ಆಲಯವನ್ನು ನಿರಾಕರಿಸಿ ಅಶೇರಸ್ತಂಭಗಳನ್ನೂ ವಿಗ್ರಹಗಳನ್ನೂ ಪೂಜಿಸುವವರಾದರು. ಅವರ ಈ ಅಪರಾಧದ ದೆಸೆಯಿಂದ ಯೆಹೂದದ ಮೇಲೆಯೂ ಯೆರೂಸಲೇವಿುನ ಮೇಲೆಯೂ ದೇವಕೋಪವುಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು