Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 12:5 - ಕನ್ನಡ ಸತ್ಯವೇದವು J.V. (BSI)

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ ಶೀಶಕನಿಗೆ ಹೆದರಿ ಯೆರೂಸಲೇವಿುನಲ್ಲಿ ಕೂಡಿದ್ದ ಯೆಹೂದ್ಯಪ್ರಧಾನರ ಬಳಿಗೂ ಬಂದು ಅವರಿಗೆ - ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಬಿಟ್ಟು ಬಿಟ್ಟಿದ್ದೇನೆಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಪ್ರವಾದಿಯಾದ‍ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನಿಗೆ ಹೆದರಿ ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಯೆಹೂದ್ಯ ನಾಯಕರ ಬಳಿಗೂ ಬಂದು ಅವರಿಗೆ, “ಯೆಹೋವನು ಹೀಗೆನ್ನುತ್ತಾನೆ, ‘ನೀವು ನನ್ನನ್ನು ಬಿಟ್ಟು ಹೋದುದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಒಪ್ಪಿಸಿದ್ದೇನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಪ್ರವಾದಿ ಶೆಮಾಯನು ರೆಹಬ್ಬಾಮನ ಬಳಿಗೆ ಹಾಗೂ ಶೀಶಕನಿಗೆ ಹೆದರಿ ಜೆರುಸಲೇಮಿನಲ್ಲಿ ಕೂಡಿದ್ದ ಯೆಹೂದ್ಯ ಪ್ರಧಾನರ ಬಳಿಗೆ ಬಂದು, “ನೀವು ನನ್ನನ್ನು ಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಗೆ ಬಿಟ್ಟುಬಿಟ್ಟಿದ್ದೇನೆ,” ಎನ್ನುತ್ತಾರೆ ಸರ್ವೇಶ್ವರ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಪ್ರವಾದಿಯಾದ ಶೆಮಾಯನು, ಶೀಶಕನಿಗೆ ಹೆದರಿಕೊಂಡು ಜೆರುಸಲೇಮಿನಲ್ಲಿ ಒಟ್ಟಾಗಿ ಸೇರಿ ಬಂದಿದ್ದ ರೆಹಬ್ಬಾಮನ ಮತ್ತು ಇಸ್ರೇಲಿನ ಪ್ರಧಾನರ ಬಳಿಗೆ ಬಂದು, “ಯೆಹೋವನು ಹೇಳುವುದೇನೆಂದರೆ, ರೆಹಬ್ಬಾಮನೇ, ನೀನು ಮತ್ತು ಯೆಹೂದದ ಜನರು ನನ್ನನ್ನು ತೊರೆದಿದ್ದೀರಿ. ನನ್ನ ಕಟ್ಟಳೆಗಳನ್ನು ಅನುಸರಿಸಲು ನಿರಾಕರಿಸಿದ್ದೀರಿ. ಈಗ ನಾನು ನಿಮಗೆ ಸಹಾಯ ಮಾಡದೆ ಶೀಶಕನನ್ನು ಎದುರಿಸಲು ನಿಮ್ಮನ್ನು ಬಿಟ್ಟುಬಿಡುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ಪ್ರವಾದಿಯಾದ ಶೆಮಾಯನು ರೆಹಬ್ಬಾಮನ ಬಳಿಗೂ, ಶೀಶಕನ ನಿಮಿತ್ತ ಯೆರೂಸಲೇಮಿನಲ್ಲಿ ಕೂಡಿಕೊಂಡ ಯೆಹೂದದ ಪ್ರಧಾನರ ಬಳಿಗೂ ಬಂದು ಅವರಿಗೆ, “ನೀವು ನನ್ನನ್ನು ಬಿಟ್ಟುಬಿಟ್ಟದ್ದರಿಂದ ನಾನು ನಿಮ್ಮನ್ನು ಶೀಶಕನ ಕೈಯಲ್ಲಿ ಕೊಟ್ಟುಬಿಟ್ಟೆನೆಂದು ಯೆಹೋವ ದೇವರು ನಿಮಗೆ ಹೇಳುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 12:5
15 ತಿಳಿವುಗಳ ಹೋಲಿಕೆ  

ಅವನು ಆಸನನ್ನು ಎದುರುಗೊಳ್ಳುವದಕ್ಕೆ ಹೋಗಿ ಅವನಿಗೆ - ಆಸನೇ, ಎಲ್ಲಾ ಯೆಹೂದ ಬೆನ್ಯಾಮೀನ್ ಕುಲಗಳವರೇ, ಕಿವಿಗೊಡಿರಿ. ನೀವು ಯೆಹೋವನನ್ನು ಹೊಂದಿಕೊಂಡಿರುವ ತನಕ ಆತನೂ ನಿಮ್ಮೊಂದಿಗಿರುವನು; ನೀವು ಆತನನ್ನು ಹುಡುಕಿದರೆ ನಿಮಗೆ ಸಿಕ್ಕುವನು; ಆತನನ್ನು ಬಿಟ್ಟರೆ ಆತನೂ ನಿಮ್ಮನ್ನು ಬಿಟ್ಟು ಬಿಡುವನು.


ಆಗ ದೇವರ ಮನುಷ್ಯನಾದ ಶೆಮಾಯನಿಗೆ -


ಆಗ ದೇವರ ಮನುಷ್ಯನಾದ ಶೆಮಾಯನಿಗೆ -


ಪ್ರವಾದಿಯಾಗಲಿ ಯಾಜಕನಾಗಲಿ ಈ ಜನರಲ್ಲಿ ಯಾರಾಗಲಿ ಯೆಹೋವನು ದಯಪಾಲಿಸಿರುವ ವಾಕ್ಯಭಾರವೇನು ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು - ಯೆಹೋವನು ಇಂತೆನ್ನುತ್ತಾನೆ - ನೀವೇ ನನ್ನ ಭಾರ, ನಾನು ನಿಮ್ಮನ್ನು ಎಸೆದುಬಿಡುವೆನು.


ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ ಎಂದು ನನ್ನ ಜನರು ಅನ್ನುವಾಗ ನೀನು ಅವರಿಗೆ - ನೀವು ಯೆಹೋವನನ್ನು ತೊರೆದು ಸ್ವದೇಶದಲ್ಲಿ ಅನ್ಯದೇವತೆಗಳನ್ನು ಸೇವಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳು.


ನಿನ್ನ ನಡತೆಯೂ ನಿನ್ನ ಕೃತ್ಯಗಳೂ ಈ ಕಷ್ಟವನ್ನು ನಿನಗೆ ಒದಗಿಸಿವೆ; ಇದು ನಿನ್ನ ದುರ್ನೀತಿಯ ಫಲ, ಇದು ವಿಷವೇ; ಹೃದಯದವರೆಗೂ ಏರುತ್ತದೆ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟದ್ದು ಕೆಟ್ಟದ್ದಾಗಿಯೂ ವಿಷವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು ಎಂಬದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ರೆಹಬ್ಬಾಮನ ಪೂರ್ವೋತ್ತರಕೃತ್ಯಗಳು ಪ್ರವಾದಿಯಾದ ಶೆಮಾಯ, ದರ್ಶಿಯಾದ ಇದ್ದೋ ಎಂಬವರ ಚರಿತ್ರೆಗಳ ವಂಶಾವಳಿಭಾಗದಲ್ಲಿ ಬರೆದಿರುತ್ತವೆ. ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.


ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವಾತ್ಮಾವೇಶವುಳ್ಳವನಾದನು; ಆಗ ಅವನು ಜನರ ಎದುರಿಗೆ ಉನ್ನತಸ್ಥಾನದಲ್ಲಿ ನಿಂತು ಅವರಿಗೆ - ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ ನಿಮ್ಮನ್ನು ಕೆಡಿಸಿಕೊಳ್ಳುವದೇಕೆ? ನೀವು ಯೆಹೋವನನ್ನು ಬಿಟ್ಟದ್ದರಿಂದ ಆತನೂ ನಿಮ್ಮನ್ನು ಬಿಟ್ಟಿದ್ದಾನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು