2 ಪೂರ್ವಕಾಲ ವೃತ್ತಾಂತ 12:7 - ಕನ್ನಡ ಸತ್ಯವೇದವು J.V. (BSI)7 ಯೆಹೋವನು ಇದನ್ನು ನೋಡಿ ಶೆಮಾಯನಿಗೆ - ಇವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇವಿುನ ಮೇಲೆ ಸುರಿದುಬಿಡುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೆಹೋವನ ವಾಕ್ಯವು ಶೆಮಾಯನಿಗೆ, “ಇವರು ತಮ್ಮನ್ನು ತಗ್ಗಿಸಿಕೊಂಡಿದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪ ಕಾಲದಲ್ಲಿಯೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರವಾಗಿ ನನ್ನ ರೌದ್ರವನ್ನು ಯೆರೂಸಲೇಮಿನ ಮೇಲೆ ಸುರಿದು ಬಿಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಸರ್ವೇಶ್ವರ ಇದನ್ನು ನೋಡಿ ಶೆಮಾಯನಿಗೆ, “ಇವರು ತಮ್ಮನ್ನೇ ತಗ್ಗಿಸಿಕೊಂಡದ್ದರಿಂದ ಇವರನ್ನು ಸಂಹರಿಸುವುದಿಲ್ಲ; ಸ್ವಲ್ಪಕಾಲದಲ್ಲೇ ಇವರಿಗೆ ರಕ್ಷಣೆಯನ್ನು ಅನುಗ್ರಹಿಸುವೆನು; ಶೀಶಕನ ಮುಖಾಂತರ ನನ್ನ ರೌದ್ರವನ್ನು ಜೆರುಸಲೇಮಿನ ಮೇಲೆ ಸುರಿದುಬಿಡುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಈ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅವರು ತಮ್ಮನ್ನು ತಗ್ಗಿಸಿಕೊಂಡದ್ದನ್ನು ಯೆಹೋವ ದೇವರು ನೋಡಿದಾಗ, ಯೆಹೋವ ದೇವರ ವಾಕ್ಯವು ಶೆಮಾಯನಿಗೆ ಉಂಟಾಗಿ, “ಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಮಾಡದೆ, ಅವರು ತಪ್ಪಿಸಿಕೊಳ್ಳುವಂತೆ ಮಾಡುವೆನು. ಶೀಶಕನ ಮುಖಾಂತರ ನನ್ನ ಕೋಪವನ್ನು ಯೆರೂಸಲೇಮಿನ ಮೇಲೆ ಸುರಿದುಬಿಡುವುದಿಲ್ಲ. ಅಧ್ಯಾಯವನ್ನು ನೋಡಿ |
ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದದರಿಂದ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದದರಿಂದ ನೀವು ನನಗೋಸ್ಕರವೂ ಇಸ್ರಾಯೇಲ್ಯರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ವಿಷಯವಾಗಿ ವಿಚಾರಿಸಿರಿ ಎಂದು ಆಜ್ಞಾಪಿಸಿದನು.