ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು
ಆಯಿ ಎಂಬ ಊರಿನ ಜನರು ಹಿಂದಿರುಗಿ ನೋಡಿದಾಗ ಪಟ್ಟಣದ ಹೊಗೆಯು ಆಕಾಶಕ್ಕೆ ಏರಿಹೋಗುವದನ್ನು ಕಂಡು ಯಾವ ಮಾರ್ಗದಿಂದಲಾದರೂ ತಪ್ಪಿಸಿಕೊಳ್ಳಲಾರದವರಾದರು. ಅರಣ್ಯದ ಕಡೆಗೆ ಓಡಿಹೋಗಿದ್ದ ಇಸ್ರಾಯೇಲ್ಯರು ಹಿಂದಟ್ಟುವವರ ಕಡೆಗೆ ತಿರುಗಿದರು.
ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.
ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.