Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:16 - ಕನ್ನಡ ಸತ್ಯವೇದವು J.V. (BSI)

16 ಇಸ್ರಾಯೇಲ್ಯರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಇವರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಹೀಗಾಗಿ ಇಸ್ರಾಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ಯೆಹೋವನಾದ ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹೀಗಾಗಿ ಇಸ್ರಯೇಲರು ಯೆಹೂದ್ಯರ ಎದುರಿನಿಂದ ಓಡಿಹೋದರು. ದೇವರು ಅವರನ್ನು ಯೆಹೂದ್ಯರ ಕೈಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೂದದ ಸೈನ್ಯದ ಮುಂದೆ ಇಸ್ರೇಲರ ಸೈನ್ಯವು ಬೆನ್ನುಕೊಟ್ಟು ಓಡಿಹೋಗುವಂತೆ ದೇವರು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇಸ್ರಾಯೇಲರು ಯೆಹೂದದವರ ಎದುರಿನಿಂದ ಓಡಿಹೋದರು. ಹೀಗೆ ದೇವರು ಇಸ್ರಾಯೇಲರನ್ನು ಯೆಹೂದದವರ ಕೈಯಲ್ಲಿ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:16
10 ತಿಳಿವುಗಳ ಹೋಲಿಕೆ  

ಕೂಷ್ಯಲೂಬ್ಯರ ಸೈನ್ಯವು ಅಪರಿವಿುತ ರಥಾಶ್ವಬಲಗಳುಳ್ಳ ಮಹಾಸೈನ್ಯವಲ್ಲವೋ! ನೀನು ಯೆಹೋವನ ಮೇಲೆ ಆತುಕೊಂಡದರಿಂದ ಆತನು ಅದನ್ನು ನಿನ್ನ ಕೈಗೆ ಒಪ್ಪಿಸಿಕೊಟ್ಟನು.


ದೇವರು ದಾವೀದನನ್ನು ನನ್ನ ಕೈಗೆ ಒಪ್ಪಿಸಿದನು. ಅವನು ಅಗುಳಿಕದಗಳಿಂದ ಭದ್ರವಾಗಿರುವ ಪಟ್ಟಣವನ್ನು ಪ್ರವೇಶಿಸಿದ್ದಾನಲ್ಲಾ; ಅವನು ಅಲ್ಲಿಂದ ತಪ್ಪಿಸಿಕೊಳ್ಳಲಾರನು ಅಂದುಕೊಂಡು


ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು.


ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು.


ಯೆಹೋವನು ಅವರ ಪೂರ್ವಿಕರಿಗೆ ಆಣೆಯಿಟ್ಟು ಹೇಳಿದಂತೆ ಅವರಿಗೆ ಎಲ್ಲಾ ಕಡೆಯಲ್ಲಿಯೂ ಸಮಾಧಾನಕೊಟ್ಟನು. ವೈರಿಗಳಲ್ಲಿ ಒಬ್ಬನೂ ಅವರ ಮುಂದೆ ನಿಲ್ಲಲಿಲ್ಲ. ಆತನು ಎಲ್ಲರನ್ನೂ ಅವರ ಕೈಗೆ ಒಪ್ಪಿಸಿದನು.


ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು


ಬಾಷಾನಿನ ಅರಸನಾದ ಓಗನೂ ಅವನ ಜನರೆಲ್ಲರೂ ನಮ್ಮಿಂದ ಸೋತು ಹೋಗುವಂತೆ ನಮ್ಮ ದೇವರಾದ ಯೆಹೋವನು ಮಾಡಲಾಗಿ ಅವರಲ್ಲಿ ಒಬ್ಬರಾದರೂ ಉಳಿಯದಂತೆ ಅವರನ್ನು ಹತಮಾಡಿದೆವು.


ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಗಿಲ್ಯಾದ್ ಸೀಮೆಯವರೆಗೂ ಯಾವ ಪಟ್ಟಣವೂ ನಮಗೆ ಅಸಾಧ್ಯವಾಗಲಿಲ್ಲ. ನಮ್ಮ ದೇವರಾದ ಯೆಹೋವನು ಅವುಗಳನ್ನೆಲ್ಲಾ ನಮ್ಮ ಕೈಗೆ ಸಿಕ್ಕುವಂತೆ ಮಾಡಿದನು.


ಪರಾತ್ಪರನಾದ ದೇವರು ನಿನ್ನ ಶತೃಗಳನ್ನು ನಿನ್ನ ಕೈಗೆ ಒಪ್ಪಿಸಿದ್ದಕ್ಕಾಗಿ ಆತನಿಗೆ ಸ್ತೋತ್ರ ಎಂದು ಹೇಳಿದನು. ಅಬ್ರಾಮನು ತಾನು ಗೆದ್ದು ತಂದಿದ್ದ ಎಲ್ಲಾ ವಸ್ತುಗಳಲ್ಲಿ ಹತ್ತನೆಯ ಒಂದು ಭಾಗವನ್ನು ಅವನಿಗೆ ಕೊಟ್ಟನು.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲ್ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು