Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:18 - ಕನ್ನಡ ಸತ್ಯವೇದವು J.V. (BSI)

18 ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಹೀಗೆ ಇಸ್ರಾಯೇಲರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪೂರ್ವಿಕರ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದರಿಂದ ಜಯಶಾಲಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಹೀಗೆ ಇಸ್ರಯೇಲರು ಆ ಕಾಲದಲ್ಲಿ ಸೋಲು ಸವಿದರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಸರ್ವೇಶ್ವರನಲ್ಲಿ ಭರವಸೆಯಿಟ್ಟದ್ದರಿಂದ ಜಯಶೀಲರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಸ್ರೇಲಿನ ಜನರು ಸೋತುಹೋದರು. ಯೆಹೂದದ ಜನರಿಗೆ ಜಯ ದೊರಕಿತು. ಯಾಕೆಂದರೆ ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನ ಮೇಲೆ ಭರವಸವನ್ನಿಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಹೀಗೆ ಆ ಕಾಲದಲ್ಲಿ ಇಸ್ರಾಯೇಲರು ತಗ್ಗಿಹೋದರು. ಆದರೆ ಯೆಹೂದದವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರ ಮೇಲೆ ಆತುಕೊಂಡದ್ದರಿಂದ ಜಯ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:18
14 ತಿಳಿವುಗಳ ಹೋಲಿಕೆ  

ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮರೆಹೊಕ್ಕವರನ್ನು ಬಲ್ಲನು.


ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ.


ಯಾವನಿಗೆ ಯಾಕೋಬನ ದೇವರು ಸಹಾಯಕನೋ ಯಾವನು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ ಅವನೇ ಧನ್ಯನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಅವರು ಹೊರಡುವಾಗ ಯೆಹೋಷಾಫಾಟನು ನಿಂತು ಅವರಿಗೆ - ಯೆಹೂದ್ಯರೇ, ಯೆರೂಸಲೇವಿುನವರೇ, ನನ್ನ ಮಾತನ್ನು ಕೇಳಿರಿ. ಯೆಹೋವನಲ್ಲಿ ಭರವಸವಿಡಿರಿ, ಆಗ ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ ಎಂದು ಹೇಳಿದನು.


ಇವನು ಇಸ್ರಾಯೇಲ್ ದೇವರಾದ ಯೆಹೋವನಲ್ಲಿ ಭರವಸವಿಟ್ಟಿದ್ದನು. ಯೆಹೂದ್ಯರಲ್ಲಿ ಇವನಿಗೆ ಸಮಾನನಾದ ಅರಸನು ಮುಂಚೆಯೂ ತರುವಾಯವೂ ಇರಲಿಲ್ಲ.


ಅಬೀಯನೂ ಅವನ ಜನರೂ ಅವರಲ್ಲಿ ಅನೇಕಾನೇಕರನ್ನು ಸಂಹರಿಸಿಬಿಟ್ಟರು. ಇಸ್ರಾಯೇಲ್ ಭಟರಲ್ಲಿ ಹತರಾಗಿ ಬಿದ್ದವರು ಐದು ಲಕ್ಷ ಮಂದಿ.


ಅಬೀಯನು ಯಾರೊಬ್ಬಾಮನನ್ನು ಹಿಂದಟ್ಟಿ ಅವನಿಂದ ಬೇತೇಲ್, ಯೆಷಾನಾ, ಎಫ್ರೋನ್ ಎಂಬ ಪಟ್ಟಣಗಳನ್ನೂ ಅವುಗಳಿಗೆ ಸೇರಿದ ಗ್ರಾಮಗಳನ್ನೂ ಕಿತ್ತುಕೊಂಡನು.


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ನನಗೆ ಆಶಾಭಂಗಪಡಿಸಬೇಡ. ಶತ್ರುಗಳ ಉತ್ಸಾಹಕ್ಕೆ ಆಸ್ಪದಮಾಡಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು