Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:3 - ಕನ್ನಡ ಸತ್ಯವೇದವು J.V. (BSI)

3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಬೀಯನು ನಾಲ್ಕು ಲಕ್ಷ ಮಂದಿ ಯುದ್ಧವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು; ಯಾರೊಬ್ಬಾಮನೂ ಎಂಟು ಲಕ್ಷ ಶ್ರೇಷ್ಠರಾದ ಭಟರೊಡನೆ ಅವನಿಗೆ ವಿರುದ್ಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹಕಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಬೀಯನ ಬಳಿ ನಾಲ್ಕು ಲಕ್ಷ ಮಂದಿ ವೀರ ಸೈನಿಕರಿದ್ದರು. ಅವನು ಸೈನ್ಯವನ್ನು ಯುದ್ಧದಲ್ಲಿ ಮುನ್ನಡೆಸಿದನು. ಯಾರೊಬ್ಬಾಮನ ಬಳಿಯಲ್ಲಿ ಎಂಟು ಲಕ್ಷ ಮಂದಿ ಸೈನಿಕರು ಇದ್ದರು. ಯಾರೊಬ್ಬಾಮನು ಅಬೀಯನ ಮೇಲೆ ಯುದ್ಧಕ್ಕೆ ತಯಾರಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಅಬೀಯನು ಯುದ್ಧಭಟರಾದ ಪರಾಕ್ರಮಶಾಲಿಗಳ ಸೈನ್ಯವನ್ನು ಯುದ್ಧಕ್ಕೆ ಸಿದ್ಧಮಾಡಿದನು. ಆಯ್ಕೆಯಾದ ನಾಲ್ಕು ಲಕ್ಷ ಜನರಿದ್ದರು. ಯಾರೊಬ್ಬಾಮನು ಅವನಿಗೆ ಎದುರಾಗಿ ಎಂಟು ಲಕ್ಷಮಂದಿ ಆಯ್ಕೆಯಾದ ಪರಾಕ್ರಮಶಾಲಿಗಳನ್ನು ಯುದ್ಧಕ್ಕೆ ನಿಲ್ಲಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:3
9 ತಿಳಿವುಗಳ ಹೋಲಿಕೆ  

ರೆಹಬ್ಬಾಮನು ಯೆರೂಸಲೇಮನ್ನು ಮುಟ್ಟಿದ ನಂತರ ಇಸ್ರಾಯೇಲ್ಯರಿಗೆ ವಿರೋಧವಾಗಿ ಯುದ್ಧ ಮಾಡುವದಕ್ಕೂ ರಾಜ್ಯವನ್ನು ತಿರಿಗಿ ತನ್ನ ವಶಪಡಿಸಿಕೊಳ್ಳುವದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಭತ್ತು ಸಾವಿರಮಂದಿ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.


ಯೋವಾಬನು ದಾವೀದನಿಗೆ ಒಪ್ಪಿಸಿದ ಖಾನೇಷುಮಾರಿಯ ಸಂಖ್ಯೆಯು - ಇಸ್ರಾಯೇಲ್ಯರಲ್ಲಿ ಯುದ್ಧಕ್ಕೆ ಹೋಗತಕ್ಕ ಸೈನಿಕರು ಹನ್ನೊಂದು ಲಕ್ಷ; ಯೆಹೂದರಲ್ಲಿ ನಾಲ್ಕು ಲಕ್ಷದ ಎಪ್ಪತ್ತು ಸಾವಿರ.


ಅಬೀಯಾಮನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಇವನಿಗೂ ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.


ಯೆರೂಸಲೇವಿುನಲ್ಲಿ ಮೂರು ವರುಷ ಆಳಿದನು; ಗಿಬೆಯದ ಊರೀಯೇಲನ ಮಗಳಾದ ಮೀಕಾಯ ಎಂಬಾಕೆಯು ಇವನ ತಾಯಿ. ಇವನಿಗೂ ಯಾರೊಬ್ಬಾಮನಿಗೂ ಯುದ್ಧನಡೆಯಿತು.


ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು - ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲ್ಯರೇ, ನನ್ನ ಮಾತನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು