Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:6 - ಕನ್ನಡ ಸತ್ಯವೇದವು J.V. (BSI)

6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರೋಧವಾಗಿ ತಿರುಗಿ ಬೀಳುವಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಹೀಗಿದ್ದರೂ ದಾವೀದನ ಮಗನಾದ ಸೊಲೊಮೋನನ ಸೇವೆಯಲ್ಲಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಎದ್ದು ತನ್ನ ದಣಿಗೆ ವಿರುದ್ಧವಾಗಿ ತಿರುಗಿ ಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಹೀಗೆ ಇದ್ದರೂ ದಾವೀದನ ಮಗ ಸೊಲೊಮೋನನ ಸೇವೆಯಲ್ಲಿದ್ದ, ನೆಬಾಟನ ಮಗ ಯಾರೊಬ್ಬಾಮನು ದಂಗೆಯೆದ್ದು ತನ್ನ ದಣಿಗೆ ವಿರುದ್ಧ ದ್ರೋಹವೆಸಗಿದ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ಯಾರೊಬ್ಬಾಮನು ತನ್ನ ಒಡೆಯನಿಗೆ ವಿರುದ್ಧವಾಗಿ ದಂಗೆ ಎದ್ದನು. ನೆಬಾಟನ ಮಗನಾದ ಯಾರೊಬ್ಬಾಮನು ಸೊಲೊಮೋನನ ಸೇವಕರಲ್ಲಿ ಒಬ್ಬನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ದಾವೀದನ ಮಗ ಸೊಲೊಮೋನನ ಸೇವಕನಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ತನ್ನ ಯಜಮಾನನ ಮೇಲೆ ತಿರುಗಿಬಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:6
5 ತಿಳಿವುಗಳ ಹೋಲಿಕೆ  

ಅರಸನಾದ ಸೊಲೊಮೋನನಿಗೆ ವಿರೋಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನೂ ಆಗಿದ್ದ ಯಾರೊಬ್ಬಾಮನೆಂಬವನು ಮತ್ತೊಬ್ಬನು; ಚೆರೂಗಳೆಂಬ ವಿಧವೆಯು ಅವನ ತಾಯಿ.


ಯಾರೊಬ್ಬಾಮನು ಹಿಂದಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲ್ಯರಿಗೆ ಗೊತ್ತಾದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರಿಸಿ ತಮ್ಮ ಅರಸನನ್ನಾಗಿ ನೇವಿುಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.


ಇಸ್ರಾಯೇಲ್ಯರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.


ಜನರು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಾರ್ಪಣೆಗಾಗಿ ಹೋಗುವದಾದರೆ ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗೀತು; ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು ಅಂದುಕೊಂಡು


ಯೆಹೋವನು ಇವನ ಸಂಗಡ ಇದ್ದದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಶ್ಶೂರದ ಅರಸನಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು