Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 13:9 - ಕನ್ನಡ ಸತ್ಯವೇದವು J.V. (BSI)

9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ಮಾಡಿಕೊಂಡಿರಲ್ಲಾ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಯೆಹೋವನ ಯಾಜಕರಾದ ಆರೋನನ ಸಂತಾನದವರನ್ನೂ, ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗೋಸ್ಕರ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪೂಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪೂಜಾರಿಯಾದನಷ್ಟೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನೀವು ಆರೋನನ ಸಂತತಿಯವರಾದ ಯೆಹೋವನ ಯಾಜಕರನ್ನು ಹೊರಡಿಸಿಬಿಟ್ಟರಿ. ನೀವು ಲೇವಿಯರನ್ನೂ ಹೊರಡಿಸಿಬಿಟ್ಟಿರಿ. ಅನ್ಯಜನಾಂಗದವರಂತೆ ನೀವು ನಿಮ್ಮಲ್ಲಿಂದಲೇ ಯಾಜಕರನ್ನು ಆರಿಸಿಕೊಂಡಿರಿ. ಯಾವನಾದರೂ ಏಳು ಟಗರುಗಳನ್ನೂ ಒಂದು ಎಳೇ ಹೋರಿಯನ್ನೂ ತಂದರೆ ನೀವು ಅವನನ್ನು ‘ದೇವರಲ್ಲದವುಗಳ’ ಸೇವೆಮಾಡಲು ಯಾಜಕನನ್ನಾಗಿ ಮಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನೀವು ಯೆಹೋವ ದೇವರ ಯಾಜಕರಾದ ಆರೋನನ ವಂಶದವರಾದ ಲೇವಿಯರನ್ನೂ ತಳ್ಳಿ ಹಾಕಿ, ಅನ್ಯದೇಶಗಳ ಜನರಂತೆ ನಿಮಗೆ ಯಾಜಕರನ್ನು ಮಾಡಿಕೊಳ್ಳಲಿಲ್ಲವೋ? ಯಾವನಾದರೂ ದನದ ಮರಿಯಾದ ಹೋರಿಯನ್ನೂ, ಏಳು ಟಗರುಗಳನ್ನೂ ತೆಗೆದುಕೊಂಡು ಬಂದು, ತನ್ನನ್ನು ಪ್ರತಿಷ್ಠೆ ಮಾಡಿದರೆ ಅವನು ದೇವರಲ್ಲದವುಗಳಿಗೆ ಯಾಜಕನಾಗಿರುವನಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 13:9
19 ತಿಳಿವುಗಳ ಹೋಲಿಕೆ  

ತನ್ನ ದೇವತೆಗಳು ದೇವರಲ್ಲದೆ ಇದ್ದರೂ ಅವುಗಳನ್ನು ಯಾವ ಜನಾಂಗವಾದರೂ ಬದಲಾಯಿಸಿಕೊಂಡಿತೋ? ಆದರೆ ನನ್ನ ಜನರು ತಮ್ಮ ಮಹಿಮೆಯಾದ ನನಗೆ ಬದಲಾಗಿ ಕೆಲಸಕ್ಕೆ ಬಾರದ್ದನ್ನು ಆರಿಸಿಕೊಂಡಿದ್ದಾರೆ.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚಾರವನ್ನು ನಡಿಸಿ ಆರೋನನನ್ನೂ ಅವನ ಮಕ್ಕಳನ್ನೂ ಉದ್ಯೋಗಕ್ಕೆ ಸೇರಿಸಬೇಕು;


ಪೂರ್ವಕಾಲದಲ್ಲಿ ನೀವು ದೇವರ ಜ್ಞಾನವಿಲ್ಲದವರಾಗಿ ದೇವರಲ್ಲದವುಗಳಿಗೆ ಅಧೀನರಾಗಿದ್ದಿರಿ.


ಆದರೆ ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲವೆಂದು ಆ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿಬಿಟ್ಟಿದ್ದಾನೆ ಎಂಬದನ್ನು ನೀವು ನೋಡುತ್ತೀರಿ, ಕೇಳುತ್ತೀರಿ.


ಆ ಬಸವನೂ ಇಸ್ರಾಯೇಲಿನ ಕೈಕೆಲಸ; ಶಿಲ್ಪಿಯು ಅದನ್ನು ರೂಪಿಸಿದನು; ಅದು ದೇವರಲ್ಲ; ಸಮಾರ್ಯದ ಬಸವನು ಚೂರುಚೂರಾಗುವನು.


ಯೆಹೋವನು ಹೀಗನ್ನುತ್ತಾನೆ - ನಾನು ನಿನ್ನನ್ನು ಹೇಗೆ ಕ್ಷವಿುಸಲಿ? ನಿನ್ನ ಜನರು ನನ್ನನ್ನು ವಿಸರ್ಜಿಸಿ ದೇವರಲ್ಲದವುಗಳ ಮೇಲೆ ಆಣೆಯಿಟ್ಟಿದ್ದಾರೆ; ನಾನು ಅವರಿಗೆ ಹೊಟ್ಟೆತುಂಬಾ ಆಹಾರಕೊಟ್ಟ ಮೇಲೆ ಅವರು ಹಾದರ ಮಾಡಿದರು, ಸೂಳೆಯರ ಮನೆಗಳಲ್ಲಿ ಗುಂಪುಕೂಡಿದರು.


ಈ ಬೆಳ್ಳಿ ಬಂಗಾರಗಳಿಂದ ಆಲಯದ ಗೋಡೆಗಳನ್ನು ಹೊದಿಸಬೇಕು, ಅಕ್ಕಸಾಲಿಗರು ಮಾಡಬಹುದಾದ ಎಲ್ಲಾ ತರದ ಬೆಳ್ಳಿಬಂಗಾರದ ಸಮಾನುಗಳನ್ನು ಮಾಡಿಸಬೇಕು. ಈಹೊತ್ತು ಉದಾರ ಹಸ್ತದಿಂದ ಯೆಹೋವನಿಗೋಸ್ಕರ ಕಾಣಿಕೆಯನ್ನರ್ಪಿಸುವದಕ್ಕೆ ಯಾರು ಮನಸ್ಸುಳ್ಳವರಾಗಿದ್ದಾರೆ ಎಂದು ನೆರೆದ ಸಭೆಗೆ ಹೇಳಲು


ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ದೇವರೇ ಅಲ್ಲದ ಕ್ಷುದ್ರದೇವತೆಗಳಿಗೂ ಪಿತೃಗಳು ಭಜಿಸದೆಯೂ ತಮಗೆ ಮುಂಚಿತವಾಗಿ ಗೊತ್ತಿಲ್ಲದೆಯೂ ಇರುವ ನೂತನ ದೇವತೆಗಳಿಗೂ ಬಲಿಯನ್ನರ್ಪಿಸಿದರು.


[ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;


ಮೋಶೆ [ಲೇವಿಯರಿಗೆ] - ಈ ಹೊತ್ತು ನಿಮ್ಮಲ್ಲಿ ಪ್ರತಿಯೊಬ್ಬನು ಮಗನನ್ನಾದರೂ ಅಣ್ಣತಮ್ಮಂದಿರನ್ನಾದರೂ ಲಕ್ಷ್ಯಕ್ಕೆ ತೆಗೆದುಕೊಳ್ಳದೆ ನಿಮ್ಮನ್ನು ಯೆಹೋವನ ಸೇವೆಗೆ ಪ್ರತಿಷ್ಠಿಸಿಕೊಳ್ಳಬೇಕು; ಹಾಗಾದರೆ ಆತನು ಈ ಹೊತ್ತೇ ನಿಮ್ಮನ್ನು ಆಶೀರ್ವದಿಸುವನು ಎಂದು ಹೇಳಿದನು.


ಅವರು ನನಗೆ ಯಾಜಕರಾಗುವಂತೆ ಅವರನ್ನು ಪ್ರತಿಷ್ಠಿಸುವದಕ್ಕೆ ನೀನು ಮಾಡಬೇಕಾದ ಕಾರ್ಯ ಯಾವದಂದರೆ - ಒಂದು ಹೋರಿಕರುವನ್ನೂ ಪೂರ್ಣಾಂಗವಾದ ಎರಡು ಟಗರುಗಳನ್ನೂ ತೆಗೆದುಕೊಳ್ಳಬೇಕು;


ಆರೋನನ ಯಾಜಕದೀಕ್ಷಾವಸ್ತ್ರಗಳೇ ಅವನ ತರುವಾಯ ಅವನ ವಂಶಸ್ಥರಿಗೂ ಉಪಯೋಗವಾಗಬೇಕು. ಅವರೂ ಪಟ್ಟಾಭಿಷಿಕ್ತರಾಗಿ ಮಹಾಯಾಜಕೋದ್ಯೋಗಕ್ಕೆ ಬಂದಾಗ ಅವುಗಳನ್ನು ಧರಿಸಿಕೊಳ್ಳಬೇಕು.


ನಮಗಾದರೋ ಯೆಹೋವನು ದೇವರಾಗಿರುತ್ತಾನೆ; ನಾವು ಆತನನ್ನು ಬಿಡಲಿಲ್ಲ. ಯೆಹೋವನ ಆರಾಧನೆ ನಡಿಸುವ ಆರೋನನ ಸಂತಾನದವರಾದ ಯಾಜಕರೂ ತಮಗೆ ನೇಮಕವಾದ ಕೆಲಸದಲ್ಲಿ ನಿರತರಾದ ಲೇವಿಯರೂ ನಮಗಿರುತ್ತಾರೆ.


ಆಮೇಲೆ ಹಿಜ್ಕೀಯನು ಸಮೂಹದವರಿಗೆ - ನೀವು ಈಗ ಯೆಹೋವನಿಗೋಸ್ಕರ ನಿಮ್ಮನ್ನು ಪ್ರತಿಷ್ಠಿಸಿಕೊಂಡಿರಲ್ಲಾ; ಹತ್ತಿರ ಬಂದು ಯೆಹೋವನ ಆಲಯಕ್ಕೋಸ್ಕರ ಸಮಾಧಾನಯಜ್ಞಗಳನ್ನೂ ಕೃತಜ್ಞತಾ ಯಜ್ಞಗಳನ್ನೂ ಸಮರ್ಪಿಸಿರಿ ಅನ್ನಲು ಸಮೂಹದವರು ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಸಮರ್ಪಿಸಿದ್ದಲ್ಲದೆ ಅನೇಕರು ಸ್ವೇಚ್ಫೆಯಿಂದ ಸರ್ವಾಂಗಹೋಮಗಳನ್ನೂ ಸಮರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು