Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:1 - ಕನ್ನಡ ಸತ್ಯವೇದವು J.V. (BSI)

1 ಅಬೀಯನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದಲ್ಲಿ ದೇಶದಲ್ಲಿ ಹತ್ತು ವರುಷ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಅಬೀಯನು ಮೃತನಾಗಿ ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನ ಸ್ಥಾನದಲ್ಲಿ ಅವನ ಮಗ ಆಸನು ಅರಸನಾದನು. ಇವನ ಕಾಲದಲ್ಲಿ, ನಾಡಿನಲ್ಲಿ ಹತ್ತು ವರ್ಷ ಶಾಂತಿಸಮಾಧಾನವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅಬೀಯನು ತನ್ನ ಪೂರ್ವಿಕರೊಂದಿಗೆ ವಿಶ್ರಾಂತಿಗೆ ಸೇರಿದನು. ಜನರು ಅವನನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು. ಅಬೀಯನ ನಂತರ ಅವನ ಮಗನಾದ ಆಸನು ಪಟ್ಟಕ್ಕೆ ಬಂದನು. ಆಸನ ಆಳ್ವಿಕೆಯ ಹತ್ತು ವರ್ಷ ದೇಶದಲ್ಲಿ ಸಮಾಧಾನ ನೆಲೆಸಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅಬೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು, ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ಮಗ ಆಸನು ಅವನಿಗೆ ಬದಲಾಗಿ ಅರಸನಾದನು, ಅವನ ದಿವಸಗಳಲ್ಲಿ ಹತ್ತು ವರ್ಷ ದೇಶವು ಶಾಂತವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:1
10 ತಿಳಿವುಗಳ ಹೋಲಿಕೆ  

ಅವನ ಶವವನ್ನು ಅವನ ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿ ಮಾಡಿದರು; ಅವನಿಗೆ ಬದಲಾಗಿ ಅವನ ಮಗನಾದ ರೆಹಬ್ಬಾಮನು ಅರಸನಾದನು.


ಸೊಲೊಮೋನನ ಮಗನು ರೆಹಬ್ಬಾಮನೆಂಬವನು; ಇವನ ಮಗನು ಅಬೀಯ; ಇವನ ಮಗನು ಆಸ;


ರೆಹಬ್ಬಾಮನು ಪಿತೃಗಳ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಶ್ಮಶಾನ ಭೂವಿುಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.


ಅನಂತರ ದಾವೀದನು ಪಿತೃಗಳ ಬಳಿಗೆ ಸೇರಿದನು. ಅವನ ಶವವನ್ನು ದಾವೀದ ನಗರದಲ್ಲಿ ಸಮಾಧಿಮಾಡಿದರು.


ಆಸನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿಯೂ ನೀತಿವಂತನಾಗಿಯೂ ನಡೆದನು.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ಹೀಗಿರಲು ಪ್ರವಾದಿಯಾದ ಎಲೀಯನು ಕಾಗದದ ಮೂಲಕವಾಗಿ ಅವನಿಗೆ - ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನ ಮಾತನ್ನು ಕೇಳು. ನೀನು ನಿನ್ನ ತಂದೆಯಾದ ಯೆಹೋಷಾಫಾಟನ ಮಾರ್ಗದಲ್ಲಿಯೂ ಯೆಹೂದ್ಯರ ಅರಸನಾದ ಆಸನ ಮಾರ್ಗದಲ್ಲಿಯೂ ನಡೆಯಲಿಲ್ಲ;


ಹಿಜ್ಕೀಯನು ಯೆಹೂದದಲ್ಲೆಲ್ಲಾ ಇದೇ ವ್ಯವಸ್ಥೆಯನ್ನು ಮಾಡಿದನು. ಅವನು ತನ್ನ ದೇವರಾದ ಯೆಹೋವನಿಗೆ ಒಳ್ಳೆಯವನೂ ನೀತಿವಂತನೂ ನಂಬಿಗಸ್ತನೂ ಆಗಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು