Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:10 - ಕನ್ನಡ ಸತ್ಯವೇದವು J.V. (BSI)

10 ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಸನು ಅವನಿಗೆ ವಿರುದ್ಧವಾಗಿ ಹೊರಟನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬಯಲಿನಲ್ಲಿ ಇಬ್ಬರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಸನು ಅವನನ್ನು ಎದುರುಗೊಳ್ಳಲು ಹೋದನು. ಮಾರೇಷದ ಬಳಿಯಲ್ಲಿದ್ದ ಚೆಫಾತಾ ಬಯಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆಸನು ಜೆರಹನ ವಿರುದ್ಧ ಯುದ್ಧಮಾಡಲು ಹೊರಟನು. ಮಾರೇಷದ ಚೆಫಾತ ಎಂಬ ಕಣಿವೆಯಲ್ಲಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಸನು ಅವನಿಗೆದುರಾಗಿ ಹೊರಟುಹೋದನು. ಮಾರೇಷಾದ ಬಳಿಯಲ್ಲಿ ಚೆಫಾತಾದ ತಗ್ಗಿನಲ್ಲಿ ವ್ಯೂಹ ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:10
14 ತಿಳಿವುಗಳ ಹೋಲಿಕೆ  

ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.


ಷೂವಾಲ್, ಬಾಲಾ, ಎಚೆಮ್, ಎಲ್ತೋಲದ್,


ಕೂಷ್ಯನಾದ ಜೆರಹನು ಹತ್ತು ಲಕ್ಷ ಸೈನ್ಯವನ್ನೂ ಮುನ್ನೂರು ರಥಗಳನ್ನೂ ತೆಗೆದುಕೊಂಡು ಇಸ್ರಾಯೇಲ್ಯರಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟು ಮಾರೇಷಕ್ಕೆ ಬಂದನು.


ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು


ನೀವು ಶತ್ರುಗಳೊಡನೆ ಯುದ್ಧಕ್ಕೆ ಹೊರಟಾಗ ಅವರ ಕಡೆ ಕುದುರೆಗಳೂ ರಥಗಳೂ ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವದನ್ನು ಕಂಡರೆ ಹೆದರಬಾರದು. ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ .


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ.


ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.


ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ಯೆಹೋವನೇ, ಅವರಿಗೆ ಭಯವನ್ನು ಹುಟ್ಟಿಸು; ಜನಾಂಗಗಳು ತಾವು ಮನುಷ್ಯಮಾತ್ರದವರೆಂದು ತಿಳಿದುಕೊಳ್ಳಲಿ. ಸೆಲಾ.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ನನ್ನ ಆಯುಷ್ಕಾಲವು ನಿನ್ನ ಕೈಯಲ್ಲಿದೆ; ಹಿಂದಟ್ಟುವ ಶತ್ರುಗಳಿಗೆ ನನ್ನನ್ನು ತಪ್ಪಿಸಿಕಾಪಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು