Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:11 - ಕನ್ನಡ ಸತ್ಯವೇದವು J.V. (BSI)

11 ಆಸನು ತನ್ನ ದೇವರಾದ ಯೆಹೋವನಿಗೆ - ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ ನಿನ್ನ ಹೊರತು ರಕ್ಷಕನಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾ ಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನನ್ನು ಎದುರಿಸಿ ಗೆಲ್ಲಬಾರದು ಎಂದು ಮೊರೆಯಿಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಸನು ತನ್ನ ದೇವರಾದ ಯೆಹೋವನಿಗೆ, “ಯೆಹೋವನೇ, ಬಲಿಷ್ಠನು ಬಲಹೀನನ ಮೇಲೆ ಬೀಳುವಲ್ಲಿ, ರಕ್ಷಿಸಲು ನಿನ್ನ ಹೊರತು ಬೇರಾರೂ ರಕ್ಷಿಸುವುದಿಲ್ಲ. ನಮ್ಮ ದೇವರಾದ ಯೆಹೋವನೇ, ನಮ್ಮನ್ನು ರಕ್ಷಿಸು. ನಿನ್ನಲ್ಲಿ ಭರವಸವಿಟ್ಟು ನಿನ್ನ ಹೆಸರಿನಲ್ಲಿ ಈ ಮಹಾಸಮೂಹಕ್ಕೆ ವಿರೋಧವಾಗಿ ಯುದ್ಧಕ್ಕೆ ಬಂದೆವಲ್ಲಾ. ಯೆಹೋವನೇ, ನಮ್ಮ ದೇವರು ನೀನು. ನರರು ನಿನ್ನೆದುರು ಗೆಲ್ಲಬಾರದು” ಎಂದು ಮೊರೆಯಿಡಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಸನು ದೇವರಾದ ಯೆಹೋವನನ್ನು ಪ್ರಾರ್ಥಿಸಿ, “ಯೆಹೋವನೇ, ಬಲಹೀನರಾದವರು ಬಲಿಷ್ಠರಾದವರನ್ನು ಸೋಲಿಸಲು ನೀನೇ ಸಹಾಯಿಸಬೇಕು. ದೇವರಾದ ಯೆಹೋವನೇ, ನಮಗೆ ಸಹಾಯಮಾಡು. ನೀನೇ ನಮ್ಮ ರಕ್ಷಕನು. ನಾವು ನಿನ್ನ ಮೇಲೆ ಭರವಸವಿಟ್ಟಿರುತ್ತೇವೆ. ನಿನ್ನ ಹೆಸರಿನಲ್ಲಿ ನಾವು ದೊಡ್ಡ ಸೈನ್ಯದೊಂದಿಗೆ ಯುದ್ಧಕ್ಕೆ ಹೊರಟಿರುತ್ತೇವೆ. ಯೆಹೋವನೇ, ನೀನೇ ನಮ್ಮ ದೇವರು. ನಿನ್ನನ್ನು ಸೋಲಿಸಲು ಯಾರಿಗೂ ಅವಕಾಶಕೊಡಬೇಡ” ಎಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಆಸನು ತನ್ನ ದೇವರಾದ ಯೆಹೋವ ದೇವರನ್ನು ಪ್ರಾರ್ಥಿಸಿ, “ಯೆಹೋವ ದೇವರೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯ ಕೊಡುವುದು ನಿಮಗೆ ಏನೂ ಅಲ್ಲ. ನಮ್ಮ ದೇವರಾದ ಯೆಹೋವ ದೇವರೇ, ನಮಗೆ ಸಹಾಯಮಾಡಿರಿ. ಏಕೆಂದರೆ ನಾವು ನಿಮ್ಮ ಮೇಲೆ ಆತುಕೊಂಡಿದ್ದೇವೆ. ನಿಮ್ಮ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ. ಯೆಹೋವ ದೇವರೇ, ನೀವೇ ನಮ್ಮ ದೇವರು. ಮನುಷ್ಯನು ನಿಮ್ಮೆದುರಿನಲ್ಲಿ ಬಲಗೊಳ್ಳದಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:11
59 ತಿಳಿವುಗಳ ಹೋಲಿಕೆ  

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು.


ನಿನಗೆ ಮೊರೆಯಿಟ್ಟು ವಿಮುಕ್ತರಾದರು; ನಿನ್ನಲ್ಲಿ ವಿಶ್ವಾಸವಿಟ್ಟು ಆಶಾಭಂಗಪಡಲಿಲ್ಲ.


ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ.


ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?


ಯೆಹೂದ್ಯರು ತಿರುಗಿಕೊಂಡು ತಮ್ಮ ಮುಂದೆಯೂ ಹಿಂದೆಯೂ ಯುದ್ಧಪ್ರಾರಂಭವಾಗಿರುವದನ್ನು ಕಂಡು ಯೆಹೋವನಿಗೆ ಮೊರೆಯಿಟ್ಟರು, ಯಾಜಕರು ತುತೂರಿಗಳನ್ನು ಊದಿದರು.


ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.


ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು.


ಹೀಗೆ ಇಸ್ರಾಯೇಲ್ಯರು ಆ ಕಾಲದಲ್ಲಿ ತಗ್ಗಿಸಲ್ಪಟ್ಟರು; ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವನಲ್ಲಿ ಭರವಸವಿಟ್ಟದರಿಂದ ಬಲಗೊಂಡರು.


ಯೋನಾತಾನನು ತನ್ನ ಆಯುಧಗಳನ್ನು ಹೊರುವವನಿಗೆ - ಸುನ್ನತಿಯಿಲ್ಲದ ಈ ಕಾವಲುದಂಡಿನವರಿಗೆ ವಿರೋಧವಾಗಿ ಹೋಗೋಣ ಬಾ; ಒಂದು ವೇಳೆ ಯೆಹೋವನು ತಾನೇ ನಮಗೋಸ್ಕರ ಕಾರ್ಯನಡಿಸುವನು. ಬಹುಜನರಿಂದಾದರೂ ಸ್ವಲ್ಪಜನರಿಂದಾದರೂ ರಕ್ಷಿಸುವದು ಯೆಹೋವನಿಗೆ ಅಸಾಧ್ಯವಲ್ಲ ಎಂದು ಹೇಳಲು


ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಟ್ಟೆನು; ಆತನು ಸದುತ್ತರವನ್ನು ದಯಪಾಲಿಸಿದನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು;


ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು.


ಅವರು ದೇವರ ಮೇಲೆ ಭರವಸವಿಟ್ಟದರಿಂದ ಆತನು ತನಗೆ ಮೊರೆಯಿಟ್ಟ ಅವರಿಗೆ ಕಿವಿಗೊಟ್ಟು ಯುದ್ಧದಲ್ಲಿ ಜಯವನ್ನು ಅನುಗ್ರಹಿಸಿದನು. ಹಗ್ರೀಯರೂ ಇವರ ಜೊತೆಯಲ್ಲಿದ್ದವರೂ ಅವರ ಕೈಯಲ್ಲಿ ಕೊಡಲ್ಪಟ್ಟರು.


ಅವನಿಗಿರುವ ಸಹಾಯವು ಮಾಂಸದ ತೋಳು; ನಮಗಾದರೋ ನಮ್ಮ ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸವುಳ್ಳವರಾದರು.


ಶಾಂತಿಯನ್ನು ನಿಮಗೆ ಬಿಟ್ಟುಹೋಗುತ್ತೇನೆ, ನನ್ನಲ್ಲಿರುವಂಥ ಶಾಂತಿಯನ್ನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಿಂದ ನಾನು ನಿಮಗೆ ಕೊಡುವದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.


ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಸೇರಿ ಕೇಳಿಸಿತು.


ಯೆಹೋವನೇ, ಏಳು; ಮನುಷ್ಯಮಾತ್ರದವರು ಬಲಗೊಳ್ಳಬಾರದು. ಜನಾಂಗಗಳಿಗೆ ನಿನ್ನ ಸನ್ನಿಧಿಯಲ್ಲಿ ತೀರ್ಪು ಉಂಟಾಗಲಿ.


ಫರೋಹನು ಸಮೀಪಿಸುತ್ತಿರುವಾಗ ಇಸ್ರಾಯೇಲ್ಯರು ಕಣ್ಣೆತ್ತಿ ತಮ್ಮ ಹಿಂದೆ ಹೊರಟುಬಂದಿದ್ದ ಐಗುಪ್ತ್ಯರನ್ನು ಕಂಡು ಬಹಳ ಭಯಪಟ್ಟವರಾಗಿ ಯೆಹೋವನಿಗೆ ಮೊರೆಯಿಟ್ಟರು.


ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ.


ನಿಮ್ಮನ್ನು ತಾಕುವವನು ಯೆಹೋವನ ಕಣ್ಣುಗುಡ್ಡನ್ನು ತಾಕುವವನಾಗಿದ್ದಾನೆ. ಆದಕಾರಣ [ತನ್ನ] ಪ್ರಸಿದ್ಧಿಗಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಯೆಹೋವನು ನಿಮ್ಮನ್ನು ಸೂರೆಮಾಡಿದ ಜನಾಂಗಗಳ ವಿಷಯವಾಗಿ -


ಉಸಿರು ಮೂಗಿನಲ್ಲಿರುವ ತನಕ ಬದುಕುವ ನರಮನುಷ್ಯನನ್ನು ಬಿಟ್ಟುಬಿಡಿರಿ; ಅವನು ಯಾವ ಗಣನೆಗೆ ಬಂದಾನು?


ಕಷ್ಟದಲ್ಲಿದ್ದ ಈ ಮನುಷ್ಯನು ಮೊರೆಯಿಡಲು ಯೆಹೋವನು ಕೇಳಿ ಎಲ್ಲಾ ಬಾಧೆಗಳಿಂದ ಬಿಡಿಸಿದನು.


ಆಗ ಯೆಹೋವನು ಗಿದ್ಯೋನನಿಗೆ - ನೀರನ್ನು ನೆಕ್ಕಿದ ಆ ಮುನ್ನೂರು ಮಂದಿಯಿಂದಲೇ ನಿಮಗೆ ಜಯವನ್ನುಂಟುಮಾಡಿ ವಿುದ್ಯಾನ್ಯರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು; ಉಳಿದವರು ತಮ್ಮ ತಮ್ಮ ಸ್ಥಳಗಳಿಗೆ ಹೋಗಲಿ ಎಂದು ಆಜ್ಞಾಪಿಸಿದನು.


ಆಗ ಯೆಹೋವನು ತನ್ನ ಜನರಿಗೋಸ್ಕರ ನ್ಯಾಯತೀರಿಸುವನು. ಪರತಂತ್ರರಾಗಲಿ ಸ್ವತಂತ್ರರಾಗಲಿ ಅವರೆಲ್ಲರೂ ನಿರಾಶ್ರಯರಾಗಿ ನಿಶ್ಶೇಷರಾದದ್ದನ್ನು ಆತನು ತಿಳಿದಾಗ ತನ್ನ ಸೇವಕರಾದ ಅವರ ವಿಷಯದಲ್ಲಿ ಪಶ್ಚಾತ್ತಾಪಪಡುವನು.


ಅವರ ಶರಣನು ಅವರನ್ನು ಶತ್ರುಗಳಿಗೆ ಒಪ್ಪಿಸಿಕೊಡದಿದ್ದರೆ ಒಬ್ಬನಿಂದ ಸಾವಿರ ಮಂದಿ ಸೋತುಹೋಗುತ್ತಿದ್ದರೋ? ಯೆಹೋವನು ಕೈಬಿಡದಿದ್ದರೆ ಇಬ್ಬರಿಗೆ ಹೆದರಿ ಹತ್ತುಸಾವಿರ ಮಂದಿ ಓಡಿಹೋಗುತ್ತಿದ್ದರೋ?


ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.


ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು.


ನೀವು ನೋಡುವಂಥ ನಿಮಗೆ ಗುರುತಿರುವಂಥ ಈ ಮನುಷ್ಯನು ನೆಟ್ಟಗಾದದ್ದಕ್ಕೆ ಆತನ ಹೆಸರಿನಲ್ಲಿ ಇಟ್ಟ ನಂಬಿಕೆಯೇ ಕಾರಣ; ಆ ಹೆಸರೇ ಇವನನ್ನು ಬಲಪಡಿಸಿತು. ಆತನ ಮೂಲಕ ಉಂಟಾಗಿರುವ ನಂಬಿಕೆಯೇ ಇವನಿಗೆ ನಿಮ್ಮೆಲ್ಲರ ಮುಂದೆ ಪೂರ್ಣಕ್ಷೇಮವನ್ನು ಕೊಟ್ಟಿತು.


ಬಲಿಷ್ಟರಿಗೆ ಧ್ವಂಸವನ್ನು ತಟ್ಟನೆ ಒಡ್ಡಿ ಕೋಟೆಗೆ ನಾಶನವನ್ನು ತರುವವನು ಆತನೇ.


ನಿನ್ನ ಜಯದಲ್ಲಿ ಉತ್ಸಾಹಧ್ವನಿಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.


ಈ ಕಾರಣದಿಂದ ಅರಸನಾದ ಹಿಜ್ಕೀಯನೂ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯೂ ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಲು


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು.


ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು.


ನಮ್ಮ ದೇವರಾದ ಯೆಹೋವನೇ, ನಿನ್ನ ಸ್ಥಾನದಲ್ಲಿ ಬೇರೆ ಒಡೆಯರು ನಮ್ಮ ಮೇಲೆ ದೊರೆತನಮಾಡುತ್ತಿದ್ದರು; ಈಗ ನಿನ್ನ ನಾಮವನ್ನು ಹೊಗಳುವದಕ್ಕೆ ನಿನ್ನಿಂದಲೇ ನಮಗೆ ಅವಕಾಶವಾಯಿತು.


ರಥಬಲದ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲ್ಯರ ಅರಸನೆಂದು ನೆನಸಿ ಅವನಿಗೆ ವಿರೋಧವಾಗಿ ಯುದ್ಧಮಾಡುವದಕ್ಕೆ ಅವನನ್ನು ಸುತ್ತಿಕೊಂಡರು. ಯೆಹೋಷಾಫಾಟನು ಕೂಗಿಕೊಳ್ಳಲು ದೇವರಾದ ಯೆಹೋವನು ಅವನಿಗೆ ನೆರವಾಗಿ ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದನು.


ಇಗೋ, ದೇವರು ನಾಯಕನಾಗಿ ನಮ್ಮೊಂದಿಗಿರುತ್ತಾನೆ; ನಿಮಗೆ ವಿರೋಧವಾಗಿ ಆರ್ಭಟದಿಂದ ಊದತಕ್ಕ ತುತೂರಿಗಳನ್ನು ಹಿಡಿದಿರುವ ಯಾಜಕರೂ ನಮ್ಮೊಂದಿಗಿರುತ್ತಾರೆ. ಇಸ್ರಾಯೇಲ್ಯರೇ, ನಿಮ್ಮ ಪಿತೃಗಳ ದೇವರಾದ ಯೆಹೋವನೊಡನೆ ಯುದ್ಧ ಮಾಡಬೇಡಿರಿ, ನೀವು ಸಫಲರಾಗಲಿಕ್ಕಿಲ್ಲ ಎಂದು ಕೂಗಿ ಹೇಳಿದನು.


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ಮತ್ತು ನಾನೂ ನಿನಗೆ ಒಂದು ಮಾತನ್ನು ಹೇಳುತ್ತೇನೆ, ಅದೇನಂದರೆ - ನೀನು ಪೇತ್ರನು, ಈ ಬಂಡೆಯ ಮೇಲೆ ನನ್ನ ಸಭೆಯನ್ನು ಕಟ್ಟುವೆನು; ಪಾತಾಳಲೋಕದ ಬಲವು ಅದನ್ನು ಸೋಲಿಸಲಾರದು.


ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು.


ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವದಕ್ಕೋಸ್ಕರ ಎಲ್ಲಿಗಾದರೂ ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವದಾದರೆ


ಆಸನು ಅವನೆದುರಿಗೆ ಹೋದನು. ಮಾರೇಷದ ಬಳಿಯಲ್ಲಿರುವ ಚೆಫಾತಾ ಬೈಲಿನಲ್ಲಿ ಉಭಯರೂ ವ್ಯೂಹಕಟ್ಟಿದರು.


ಆ ಕಾಲದಲ್ಲಿ ದರ್ಶಿಯಾದ ಹನಾನಿಯು ಯೆಹೂದ್ಯರ ಅರಸನಾದ ಆಸನ ಬಳಿಗೆ ಬಂದು ಅವನಿಗೆ - ನೀನು ನಿನ್ನ ದೇವರಾದ ಯೆಹೋವನ ಮೇಲೆ ಆತುಕೊಳ್ಳದೆ ಅರಾಮ್ಯರ ಅರಸನ ಮೇಲೆ ಆತುಕೊಂಡದರಿಂದ ಅರಾಮ್‍ರಾಜನ ಸೈನ್ಯವು ನಿನ್ನ ಕೈಗೆ ಬೀಳದಂತೆ ತಪ್ಪಿಸಿಕೊಂಡಿತು.


ನೀನೇ ಹೋಗಿ ಕಾರ್ಯವನ್ನು ನಡಿಸು; ಧೈರ್ಯದಿಂದ ಯುದ್ಧಮಾಡು. [ಹಾಗೆ ಮಾಡದಿದ್ದರೆ] ದೇವರು ಶತ್ರುಗಳಿಂದ ನಿನ್ನನ್ನು ಅಪಜಯಪಡಿಸುವನು. ಜಯಾಪಜಯಗಳನ್ನುಂಟುಮಾಡುವದಕ್ಕೆ ಆತನು ಶಕ್ತನಾಗಿರುತ್ತಾನಲ್ಲಾ ಅಂದನು.


ಆ ದಿನದಲ್ಲಿ ಇಸ್ರಾಯೇಲ್ಯರೊಳಗೆ ಉಳಿದವರು, ಯಾಕೋಬನ ಮನೆತನದವರಲ್ಲಿ ತಪ್ಪಿಸಿಕೊಂಡವರು ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಯೆಹೋವನೆಂಬ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಯಥಾರ್ಥವಾಗಿ ಆಧಾರಮಾಡಿಕೊಳ್ಳುವರು.


ಅನಂತರ ಜನರು ಆರ್ಭಟಿಸಿದರು. ಅವರು ಆರ್ಭಟಿಸಿದ ಕೂಡಲೆ ದೇವರು ಯಾರೊಬ್ಬಾಮನನ್ನೂ ಎಲ್ಲಾ ಇಸ್ರಾಯೇಲ್ಯರನ್ನೂ ಅಬೀಯನಿಂದಲೂ ಯೆಹೂದ್ಯರಿಂದಲೂ ಅಪಜಯಪಡಿಸಿದ್ದರಿಂದ


ಇವನು ತಪ್ಪದೆ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ


ಫಿಲಿಷ್ಟಿಯರೊಡನೆಯೂ ಗೂರ್ ಬಾಳಿನಲ್ಲಿರುವ ಅರಬಿಯರೊಡನೆಯೂ ಮೆಗೂನ್ಯರೊಡನೆಯೂ ಯುದ್ಧಮಾಡುವಾಗ ಅವನಿಗೆ ದೇವರ ಸಹಾಯವು ದೊರೆಯಿತು.


ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.


ನಾನಾದರೋ ಹುಳದಂಥವನೇ ಹೊರತು ಮನುಷ್ಯನಲ್ಲ; ಮನುಷ್ಯರಿಂದ ನಿಂದಿಸಲ್ಪಟ್ಟು ಜನರಿಂದ ತಿರಸ್ಕಾರ ಹೊಂದಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು