Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:4 - ಕನ್ನಡ ಸತ್ಯವೇದವು J.V. (BSI)

4 ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೂದ್ಯರಿಗೆ, “ನೀವು ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರದ ವಿಧಿಗಳನ್ನು ಕೈಕೊಳ್ಳಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಯೆಹೂದ್ಯರಿಗೆ, “ನೀವು ನಿಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಗೊಳ್ಳಿರಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ನಿಮ್ಮ ಪೂರ್ವಿಕರ ದೇವರಾದ ಯೆಹೋವನನ್ನೇ ಅನುಸರಿಸಿ ಆತನ ಆಜ್ಞೆಗಳಿಗೂ ಕಟ್ಟಳೆಗಳಿಗೂ ವಿಧೇಯರಾಗಿರಿ” ಎಂದು ಆಸನು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಹುಡುಕಲೂ, ನಿಯಮವನ್ನೂ, ಆಜ್ಞೆಯನ್ನೂ ಕೈಗೊಳ್ಳಲು ಯೆಹೂದ್ಯರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:4
21 ತಿಳಿವುಗಳ ಹೋಲಿಕೆ  

ಯೆಹೋವನು ಇಸ್ರಾಯೇಲ್ ವಂಶಕ್ಕೆ ಹೀಗೆ ನುಡಿಯುತ್ತಾನೆ - ನನ್ನನ್ನೇ ಆಶ್ರಯಿಸಿ ಬದುಕಿಕೊಳ್ಳಿರಿ;


ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ; ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಯಿ.


ಕೊಠಡಿಯನ್ನು ಶುದ್ಧಿಮಾಡುವದಕ್ಕೆ ಅಪ್ಪಣೆಕೊಟ್ಟು ಅದು ಶುದ್ಧವಾದ ಮೇಲೆ ದೇವಾಲಯದ ಪಾತ್ರೆ, ನೈವೇದ್ಯ ದ್ರವ್ಯ, ಧೂಪ ಇವುಗಳನ್ನು ತಿರಿಗಿ ಅಲ್ಲಿಡಿಸಿದೆನು.


ಯೆಹೋವನ ಯಜ್ಞವೇದಿಯನ್ನು ತಿರಿಗಿ ಕಟ್ಟಿಸಿ ಅದರ ಮೇಲೆ ಸಮಾಧಾನಯಜ್ಞಗಳನ್ನೂ ಕೃತಜ್ಞತಾಯಜ್ಞಗಳನ್ನೂ ಅರ್ಪಿಸಿ ಇಸ್ರಾಯೇಲ್‍ದೇವರಾದ ಯೆಹೋವನನ್ನೇ ಸೇವಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.


ಪಿತೃಗಳ ದೇವರಾದ ನಿನ್ನನ್ನು ಹುಡುಕಬೇಕೆಂದು ಮನಸ್ಸು ಮಾಡಿರುವವರಿಗೆಲ್ಲಾ ಕ್ಷಮೆಯನ್ನು ಅನುಗ್ರಹಿಸು ಎಂದು ವಿಜ್ಞಾಪನೆ ಮಾಡಿದ್ದರಿಂದ


ಯೆಹೂದ್ಯರಾದರೋ ದೇವರ ಕೃಪಾಹಸ್ತ ಪ್ರೇರಣೆಯಿಂದ ಏಕಮನಸ್ಸುಳ್ಳವರಾಗಿ ಯೆಹೋವನ ಧರ್ಮಶಾಸ್ತ್ರನುಸಾರ ಅರಸನಿಂದಲೂ ಪ್ರಭುಗಳಿಂದಲೂ ಹೊರಟ ಆಜ್ಞೆಯನ್ನು ಕೈಕೊಂಡರು.


ಅರಸನಾದ ಹಿಜ್ಕೀಯನೂ ಪ್ರಭುಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಯೆಹೋವನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಲು ಅವರು ಉತ್ಸಾಹದಿಂದ ಸ್ತುತಿಸುತ್ತಾ ಬೊಗ್ಗಿಕೊಂಡು ನಮಸ್ಕರಿಸಿದರು.


ಸರ್ವಾಂಗಹೋಮಸಮರ್ಪಣೆಯು ಪ್ರಾರಂಭಿಸಿದೊಡನೆ ಇಸ್ರಾಯೇಲ್‍ರಾಜನಾದ ದಾವೀದನ ವಾದ್ಯಗಳಿಂದ ಯೆಹೋವನನ್ನು ಭಜಿಸುವದೂ ತುತೂರಿಯೂದುವದೂ ಆರಂಭವಾಯಿತು.


ಅವರು ಸರಕಾರ ದೇವಾಲಯ ಯೆಹೂದಪ್ರಜೆ ಇವುಗಳಿಗೋಸ್ಕರ ದೋಷಪರಿಹಾರಕಯಜ್ಞಮಾಡುವದಕ್ಕಾಗಿ ಹೋರಿ ಟಗರು ಕುರಿಮರಿ ಹೋತ ಇವುಗಳಲ್ಲಿ ಏಳೇಳನ್ನು ತಂದರು. ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಮಾಡಬೇಕೆಂದು ಆಜ್ಞಾಪಿಸಿದನು.


ಇಸ್ರಾಯೇಲ್ಯರ ಎಲ್ಲಾ ಕುಲಗಳಲ್ಲಿ ಇಸ್ರಾಯೇಲ್‍ದೇವರಾದ ಯೆಹೋವನ ದರ್ಶನವನ್ನು ಬಯಸುವವರು ತಮ್ಮ ಪಿತೃಗಳ ದೇವರಾದ ಯೆಹೋವನಿಗೆ ಯಜ್ಞವರ್ಪಿಸುವದಕ್ಕಾಗಿ ಆ ಲೇವಿಯರನ್ನು ಹಿಂಬಾಲಿಸಿ ಯೆರೂಸಲೇವಿುಗೆ ಬಂದರು.


ತನ್ನ ಮಕ್ಕಳು ದೇವದೂಷಕರೆಂದು ಅವನಿಗೆ ತಿಳಿದುಬಂದರೂ ಅವನು ಅವರನ್ನು ಗದರಿಸಲಿಲ್ಲ. ಈ ಪಾಪದ ನಿವಿುತ್ತವಾಗಿ ಅವನ ಮನೆಯನ್ನು ನಿತ್ಯದಂಡನೆಗೆ ಗುರಿಮಾಡಿದ್ದೇನೆಂದು ಅವನಿಗೆ ಮೊದಲೇ ತಿಳಿಸಿದೆನು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು.


ಇವನು ಅನ್ಯದೇವತೆಗಳ ಯಜ್ಞವೇದಿಗಳನ್ನೂ ಪೂಜಾಸ್ಥಳಗಳನ್ನೂ ತೆಗೆದುಹಾಕಿ ಕಲ್ಲುಕಂಬಗಳನ್ನು ಒಡಿಸಿ ಅಶೇರವಿಗ್ರಹಸ್ತಂಭಗಳನ್ನು ಕಡಿಸಿಬಿಟ್ಟು ಯೆಹೂದ್ಯರಿಗೆ -


ಯೆಹೂದದ ಎಲ್ಲಾ ಪಟ್ಟಣಗಳೊಳಗಿಂದ ಪೂಜಾಸ್ಥಳಗಳನ್ನೂ ಸೂರ್ಯಸ್ತಂಭಗಳನ್ನೂ ತೆಗೆದುಹಾಕಿದನು. ಇವನ ಆಳಿಕೆಯಲ್ಲಿ ರಾಜ್ಯದೊಳಗೆ ಸಮಾಧಾನವಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು