Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 14:7 - ಕನ್ನಡ ಸತ್ಯವೇದವು J.V. (BSI)

7 ಇವನು ಯೆಹೂದ್ಯರಿಗೆ - ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣಗೋಡೆ ಬುರುಜು ಬಾಗಲು ಅಗುಳಿ ಇವುಗಳಿಂದ ಭದ್ರಪಡಿಸೋಣ ಅನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿತೀರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದ್ದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವನು ಯೆಹೂದದವರಿಗೆ, “ದೇಶವು ನಮ್ಮ ಮುಂದೆ ಇರುವಾಗ ಈ ಪಟ್ಟಣಗಳನ್ನು ಕಟ್ಟಿ, ಅವುಗಳ ಸುತ್ತಲೂ ಗೋಡೆಗಳನ್ನೂ, ಗೋಪುರಗಳನ್ನೂ, ಬಾಗಿಲುಗಳನ್ನೂ, ಅಗುಳಿಗಳನ್ನೂ ಮಾಡೋಣ. ಏಕೆಂದರೆ ನಾವು ನಮ್ಮ ದೇವರಾದ ಯೆಹೋವ ದೇವರನ್ನು ಹುಡುಕಿದೆವು. ನಾವು ಅವರನ್ನು ಹುಡುಕಿದ್ದರಿಂದ ಅವರು ಎಲ್ಲಾ ಕಡೆಯಲ್ಲಿಯೂ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾರೆ,” ಎಂದನು. ಹಾಗೆಯೇ ಅವರು ಸೈನ್ಯವನ್ನು ಕಟ್ಟಿ ವೃದ್ಧಿಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 14:7
21 ತಿಳಿವುಗಳ ಹೋಲಿಕೆ  

ಯಾಕಂದರೆ ಕರ್ತನು ನೀತಿವಂತರನ್ನು ಕಟಾಕ್ಷಿಸುತ್ತಾನೆ, ಆತನು ಅವರ ವಿಜ್ಞಾಪನೆಗಳಿಗೆ ಕಿವಿಗೊಡುತ್ತಾನೆ. ಕೆಡುಕರಿಗೋ ಕರ್ತನು ಕೋಪದ ಮುಖವುಳ್ಳವನಾಗಿರುತ್ತಾನೆ ಎಂದು ಬರೆದದೆ.


ಯೆಹೋವನ ಅನುಗ್ರಹದಿಂದ ಶತ್ರುಭಯ ತಪ್ಪಿ ಆ ವರುಷಗಳಲ್ಲಿ ಯಾವ ಯುದ್ಧವೂ ಇಲ್ಲದೆ ದೇಶದಲ್ಲಿ ಸಮಾಧಾನವಿದ್ದದರಿಂದ ಇವನು ಯೆಹೂದದಲ್ಲಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಕಟ್ಟಿಸಿದನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು; ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಬಿಟ್ಟರೆ ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಹೀಗಿರಲಾಗಿ ಯೂದಾಯ ಗಲಿಲಾಯ ಸಮಾರ್ಯ ಸೀಮೆಗಳಲ್ಲಿದ್ದ ಸಭೆಯು ಸಮಾಧಾನ ಹೊಂದಿತು; ಮತ್ತು ಭಕ್ತಿಯಲ್ಲಿ ಬೆಳೆದು ಕರ್ತನ ಭಯದಲ್ಲಿ ನಡೆದು ಪವಿತ್ರಾತ್ಮನಿಂದ ಪ್ರೋತ್ಸಾಹವನ್ನು ಹೊಂದಿ ಹೆಚ್ಚುತ್ತಾ ಬಂತು.


ನನ್ನನ್ನು ಕಳುಹಿಸಿದಾತನ ಕಾರ್ಯಗಳನ್ನು ನಾವು ಹಗಲಿರುವಾಗಲೇ ನಡಿಸಬೇಕು. ರಾತ್ರಿ ಬರುತ್ತದೆ, ಅದು ಬಂದ ಮೇಲೆ ಯಾರೂ ಕೆಲಸ ಮಾಡಲಾರರು.


ಇದಲ್ಲದೆ ಅರಸನು ಧೈರ್ಯಗೊಂಡು ಅಲ್ಲಲ್ಲಿ ಬಿದ್ದುಹೋದ ಪೌಳಿಗೋಡೆಯನ್ನು ಜೀರ್ಣೋದ್ಧಾರಮಾಡಿಸಿ ಅದರ ಮೇಲೆ ಬುರುಜುಗಳನ್ನೂ ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿ ದಾವೀದ ನಗರದ ವಿುಲ್ಲೋಕೋಟೆಯನ್ನು ಭದ್ರಪಡಿಸಿ ಅನೇಕಾಯುಧಗಳನ್ನೂ ಗುರಾಣಿಗಳನ್ನೂ ಮಾಡಿಸಿದನು.


ನೀವು ನಿಮ್ಮ ಪಿತೃಗಳ ದೇವರಾದ ಯೆಹೋವನನ್ನೇ ಆಶ್ರಯಿಸಿಕೊಂಡು ಧರ್ಮಶಾಸ್ತ್ರವಿಧಿಗಳನ್ನು ಕೈಕೊಳ್ಳಿರಿ ಎಂದು ಆಜ್ಞಾಪಿಸಿದನು.


ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಊರುಗಳನ್ನು ಪೌಳಿಗೋಡೆ ಕದ ಅಗುಳಿ ಇವುಗಳನ್ನು ಏರ್ಪಡಿಸಿ ಕೋಟೆಗಳನ್ನಾಗಿ ಮಾಡಿದನು.


ಯೆಹೋವನು ಸುತ್ತಣ ವಿರೋಧಿಗಳನ್ನು ನಿರ್ಮೂಲಮಾಡಿ ಇಸ್ರಾಯೇಲ್ಯರಿಗೆ ವಿಶ್ರಾಂತಿ ಕೊಟ್ಟನು. ತರುವಾಯ ಬಹುದಿನಗಳು ಗತಿಸಿದ ಮೇಲೆ


ಈ ಪ್ರಮಾಣದ ನಿವಿುತ್ತವಾಗಿ ಯೆಹೂದ್ಯರೆಲ್ಲರಿಗೂ ಸಂತೋಷವಾಯಿತು. ಅವರು ಪೂರ್ಣಮನಸ್ಸಿನಿಂದ ಪ್ರಮಾಣಮಾಡಿ ತುಂಬಾ ಲವಲವಿಕೆಯಿಂದ ಯೆಹೋವನನ್ನು ಬಯಸಿದ ಕಾರಣ ಆತನು ಅವರಿಗೆ ಪ್ರಸನ್ನನಾಗಿ ಎಲ್ಲಾಕಡೆಗಳಲ್ಲಿಯೂ ಸಮಾಧಾನವನ್ನನುಗ್ರಹಿಸಿದನು.


ಹೀಗೆ ದೇವಾನುಗ್ರಹದಿಂದ ಸುತ್ತಣ ವೈರಿಗಳ ಭಯತಪ್ಪಿ ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನವುಂಟಾಯಿತು.


ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಪಟ್ಟಣಗಳನ್ನು ಕಟ್ಟಿಸಿದ ಸಂಗತಿ ಇವುಗಳೂ ಅವನ ಇತರ ಕ್ರಿಯೆಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.


ಯೆಹೂದದ ಪಟ್ಟಣಗಳಲ್ಲಿ ದೊಡ್ಡ ಪದಾರ್ಥಸಂಗ್ರಹವೂ ಯೆರೂಸಲೇವಿುನಲ್ಲಿ ರಣವೀರರಾದ ಭಟರೂ ಇದ್ದರು.


ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕನೂ ರಣವೀರನೂ ಆದ ಎಲ್ಯಾದ;


ಆಮೇಲೆ ಅಮಚ್ಯನು ಯೆಹೂದ್ಯರನ್ನು ಕೂಡಿಸಿ ಸಹಸ್ರಾಧಿಪತಿ ಶತಾಧಿಪತಿಗಳ ಕೈಕೆಳಗೆ ಕೊಟ್ಟು ಯೆಹೂದ ಬೆನ್ಯಾಮೀನ್ ಕುಲಗಳಲ್ಲಿನ ಆಯಾ ಗೋತ್ರಗಳ ಪ್ರಕಾರ ಅವರನ್ನು ನಿಲ್ಲಿಸಿ ಇಪ್ಪತ್ತು ವರುಷದವರು ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರನ್ನು ಲೆಕ್ಕಮಾಡಲು ಅವರಲ್ಲಿ ಬರ್ಜಿ ಗುರಾಣಿಗಳನ್ನು ಹಿಡಿದುಕೊಂಡು ಯುದ್ಧಕ್ಕೆ ಹೊರಡತಕ್ಕ ಶೂರರು ಮೂರು ಲಕ್ಷ ಮಂದಿ ಸಿಕ್ಕಿದರು.


ಇವರ ಕೈಕೆಳಗಿರುವ ಭಟರ ಸಂಖ್ಯೆಯು ಮೂರು ಲಕ್ಷದ ಏಳು ಸಾವಿರದ ಐನೂರು; ಇವರು ಅರಸನ ಸೇವೆಯಲ್ಲಿದ್ದು ಅವನ ವೈರಿಗಳಿಗೆ ವಿರೋಧವಾಗಿ ಪರಾಕ್ರಮದಿಂದ ಯುದ್ಧಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು